ಹೈದ್ರಾಬಾದ್‌ ಕರ್ನಾಟಕ ಅಭಿವೃದ್ಧಿಯಲ್ಲಿ ಕೊಪ್ಪಳ ಫಸ್ಟ್‌

6,834 ಕಾಮಗಾರಿಯಲ್ಲಿ ಶೇ. 56 ಪ್ರಗತಿ ನಿಧಾನಗತಿ ಕಾಮಗಾರಿ ನಡೆಸಿದ ಬೀದರ

Team Udayavani, May 7, 2019, 10:27 AM IST

7-mAY-4

ಕೊಪ್ಪಳ: ಹೈದ್ರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಆರು ಜಿಲ್ಲೆಗಳಲ್ಲಿ 2014-15 ರಿಂದ 2017-18ರ ವರೆಗಿನ ಅಭಿವೃದ್ಧಿ ಕಾಮಗಾರಿಗಳಲ್ಲಿ ಕೊಪ್ಪಳ ಉತ್ತಮ ಪ್ರಗತಿ ಸಾಧಿಸುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಬೀದರ ಜಿಲ್ಲೆ ನಿಧಾನಗತಿ ಕಾಮಗಾರಿ ನಡೆಸಿ ಕೊನೆಯ ಸ್ಥಾನದಲ್ಲಿದೆ.

ಪ್ರಾದೇಶಿಕ ಅಸಮಾನತೆ ನಿವಾರಣೆ ಮಾಡಲು ಹಾಗೂ ಹಿಂದುಳಿದ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂಬ ತಜ್ಞರ ವರದಿ ಆಧರಿಸಿ ರಾಜ್ಯ ಸರ್ಕಾರ ಹೈಕ ಭಾಗದ ಆರು ಜಿಲ್ಲೆಗಳಿಗೆ ಪ್ರತಿ ವರ್ಷ ವಿಶೇಷ ಅನುದಾನ ಬಿಡುಗಡೆ ಮಾಡುತ್ತಿದೆ. ಆದರೆ ಜಿಲ್ಲೆಗಳಲ್ಲಿ ಅಭಿವೃದ್ಧಿ ನಡೆದಿಲ್ಲ ಎನ್ನುವ ಕೂಗು ಈ ಹಿಂದಿನಿಂದಲೂ ಕೇಳಿ ಬಂದಿತ್ತು. ಇತ್ತೀಚಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಂತೆ ಹೈಕ ಭಾಗದ ಜಿಲ್ಲೆಗಳು ಅಭಿವೃದ್ಧಿಗೆ ವೇಗ ನೀಡುತ್ತಿವೆ.

ಈ ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಪ್ರತಿ ವರ್ಷ ಹೈಕ ಮಂಡಳಿಗೆ 1,500 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ವಾಗ್ಧಾನ ಮಾಡಿದ್ದರು. ಅದರಂತೆ ಮೈತ್ರಿ ಸರ್ಕಾರದಲ್ಲೂ ಅನುದಾನ ಹಂಚಿಕೆಯು ಯಥಾಸ್ಥಿತಿ ಮುಂದು ವರಿದಿದೆ. ಅನುದಾನಕ್ಕೆ ತಕ್ಕಂತೆ ಕೆಲಸ ನಡೆಯಬೇಕೆಂದು ಮಂಡಳಿಯ ಕಾರ್ಯದರ್ಶಿ ಆರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುತ್ತಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿಗೆ ಕ್ರಮೇಣ ಕಾಣುತ್ತಿದೆ.

3,850 ಕಾಮಗಾರಿಗಳು ಪೂರ್ಣ: ಮಂಡಳಿ ಯಿಂದ ಪ್ರತಿ ಜಿಲ್ಲೆಯಲ್ಲಿ ಕುಡಿ ಯುವ ನೀರು, ರಸ್ತೆ, ನೈರ್ಮಲ್ಯ, ಸಮು ದಾಯ ಭವನ, ಅಂಗನವಡಿ ಕಟ್ಟಡ ಸೇರಿದಂತೆ ಮೈಕ್ರೋ ಹಾಗೂ ಮ್ಯಾಕ್ರೋ ಯೋಜನೆಗಳಲ್ಲಿ ಕಾಮಗಾರಿ ವಿಂಗ ಡಣೆ ಮಾಡಿ ಪ್ರತಿ ವರ್ಷ ಕಾಮಗಾರಿಗಳ ಗುರಿ ನಿಗದಿಪಡಿ ಸುತ್ತಿದೆ. ಅದರಂತೆ ಮಾರ್ಚ್‌-2019ರ ಅಂತ್ಯಕ್ಕೆ ಮಂಡಳಿ 6 ಜಿಲ್ಲೆಗಳಲ್ಲಿ 6,834 ಕಾಮಗಾ ರಿಗಳನ್ನು ಕೈಗೆತ್ತಿಕೊಂಡು ಅನುದಾನ ಬಿಡು ಗಡೆ ಮಾಡಿತ್ತು. ಇದರಲ್ಲಿ 3,850 ಕಾಮಗಾರಿಗಳನ್ನು ಪೂರ್ಣ ಗೊಳಿಸಿ ಶೇ. 56ರಷ್ಟು ಪ್ರಗತಿ ಸಾಧಿಸಿದೆ.

ಆರ್ಥಿಕ 1,193 ಕೋಟಿ ಬಳಕೆ: ಹೈಕ ಮಂಡಳಿಯು 1,585 ಕೋಟಿ ರೂ. ಆರ್ಥಿಕ ಗುರಿ ನಿಗಪಡಿಸಿದ್ದು, ಬಳ್ಳಾರಿ ಜಿಲ್ಲೆಯು 246 ಕೋಟಿ ಗುರಿಯಲ್ಲಿ 148 ಕೋಟಿ ವೆಚ್ಚ ಮಾಡಿದೆ. ಬೀದರ್‌ 231 ಕೋಟಿಯಲ್ಲಿ 173 ಕೋಟಿ ವ್ಯಯಿಸಿದೆ. ಕಲಬುರಗಿ-473 ಕೋಟಿಯಲ್ಲಿ 372 ಕೋಟಿ ವ್ಯಯಿಸಿದೆ. ಕೊಪ್ಪಳ ಜಿಲ್ಲೆ 174 ಕೋಟಿಯಲ್ಲಿ, 157 ಕೋಟಿ ವೆಚ್ಚ ಮಾಡಿದೆ. ರಾಯಚೂರು ಜಿಲ್ಲೆ 272 ಕೋಟಿಯಲ್ಲಿ 182 ಕೋಟಿ ವ್ಯಯಿಸಿದೆ. ಯಾದಗಿರಿ 178 ಕೋಟಿಯಲ್ಲಿ 153 ಕೋಟಿ ಕಾಮಗಾರಿಗಳಿಗೆ ವೆಚ್ಚ ಮಾಡಿದ್ದರೆ, ಆಡಳಿತಾತ್ಮಕ 9 ಕೋಟಿಯಲ್ಲಿ 5 ಕೋಟಿ ವ್ಯಯಿಸಿದೆ. ಒಟ್ಟು ಒಂದು ವರ್ಷದಲ್ಲಿ 1585 ಕೋಟಿ ರೂ.ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಸಿ 1193 ಕೋಟಿ ವೆಚ್ಚ ಮಾಡಿದ್ದು ದಾಖಲೆಗಳಿಂದ ತಿಳಿದು ಬಂದಿದೆ.

ಹೈಕ ಕಾಮಗಾರಿಗಳ ಅಭಿವೃದ್ಧಿಯಲ್ಲಿ ನಾವು ಮುಂದಿದ್ದೇವೆ. ಗುರಿಗೆ ತಕ್ಕಂತೆ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, ಇನ್ನೂ ಕೆಲವು ಕಾಮಗಾರಿ ಪ್ರಗತಿಯ ಹಂತದಲ್ಲಿವೆ. ಈ ಪ್ರಗತಿ ವರದಿ 2014-15ರಿಂದ 2017-18ರ ವರೆಗಿನ ಕಾಮಗಾರಿಗಳಾಗಿವೆ. ಕೊಪ್ಪಳ ಜಿಲ್ಲೆ ಮೊದಲಿರುವುದಕ್ಕೆ ತುಂಬ ಸಂತೋಷವಾಗುತ್ತಿದೆ.
ಪಿ. ಸುನೀಲ ಕುಮಾರ,
ಕೊಪ್ಪಳ ಜಿಲ್ಲಾಧಿಕಾರಿ

ದತ್ತು ಕಮ್ಮಾರ

ಟಾಪ್ ನ್ಯೂಸ್

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.