ಬಸವಣ್ಣ ಜಾಗತಿಕ ಮೇರು ವ್ಯಕ್ತಿ

ಕಾಯಕ, ದಾಸೋಹ, ಅನುಭಾವ ತತ್ವಗಳನ್ನು ಜಗತ್ತಿಗೆ ನೀಡಿದ ಬಸವಣ್ಣ

Team Udayavani, May 7, 2019, 10:34 AM IST

hubali-tdy-3..

ಹುಬ್ಬಳ್ಳಿ: ಸಂಸ್ಕೃತ ಪಾರಮ್ಯ ಕಾಲದಲ್ಲಿ ಅಚ್ಚಕನ್ನಡದಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವಂತೆ ವಚನಗಳನ್ನು ರಚಿಸಿ ಸಾಮಾಜಿಕ ಕ್ರಾಂತಿ ಮಾಡಿದ ಬಸವಣ್ಣ ಕೇವಲ ನಮ್ಮ ನಾಡಿಗೆ ಸಿಮೀತ ವ್ಯಕ್ತಿಯಲ್ಲ, ಜಾಗತಿಕ ಮೇರು ವ್ಯಕ್ತಿಯಾಗಿದ್ದಾರೆ ಎಂದು ರುದ್ರಾಕ್ಷಿ ಮಠದ ಶ್ರೀಬಸವಲಿಂಗ ಸ್ವಾಮೀಜಿ ಹೇಳಿದರು.

ಬಸವ ಜಯಂತಿ ನಿಮಿತ್ತ ಮೂರುಸಾವಿರ ಮಠದ ಆವರಣದಲ್ಲಿ ವೀರಶೈವ ಸಂಘಟನಾ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯಕ್ಕೆ ವಚನಗಳನ್ನು ನೀಡಿದ್ದಲ್ಲದೇ ಶರಣ ಹಾಗೂ ಶರಣೆಯರಿಗೆ ವಚನಗಳನ್ನು ರಚಿಸಲು ಪ್ರೇರೇಪಿಸಿದ ಮಹಾತ್ಮ ಬಸವಣ್ಣ. ಲಿಂಗ, ವರ್ಣ, ವರ್ಗ ಭೇದ ಹೋಗಲಾಡಿಸಲು ಪ್ರಯತ್ನ ಪಟ್ಟ ವ್ಯಕ್ತಿ ಎಂದರು.

ಬಸವಣ್ಣ ಕಾಯಕ, ದಾಸೋಹ ಹಾಗೂ ಅನುಭಾವ ತತ್ವಗಳನ್ನು ಜಗತ್ತಿಗೆ ನೀಡಿದ್ದಾನೆ. ಶರಣ ಪರಂಪರೆಯ ವಚನಗಳನ್ನು ಓದಿ ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಬಸವಣ್ಣನ ವಚನಗಳ ಚಿಂತನೆ ಬೋಧನೆಯೊಂದಿಗೆ ಆಚರಣೆಯೂ ನಡೆಯಬೇಕಿದೆ. ಆಗ ಸಮಾಜ, ದೇಶ ಸುಧಾರಣೆಗೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಸಾಧಕರಾದ ರಾಹುಲ್ ಸಂಕನೂರ, ವಿಜಯಕುಮಾರ ಚೌರಾಸಿಯಾ, ಸಂಗಮೇಶ ಗುಬ್ಬಿ ಅವರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿದ ಐಎಎಸ್‌ ಟಾಪರ್‌ ರಾಹುಲ್ ಸಂಕನೂರ ಮಾತನಾಡಿ, ಗುರಿ ದೊಡ್ಡದಾಗಿರಬೇಕೆನ್ನುವ ಮಹತ್ವದ ಪಾಠವನ್ನು ಮಕ್ಕಳಿಗೆ ಕಲಿಸಬೇಕು. ದೊಡ್ಡ ಗುರಿ ಇಟ್ಟುಕೊಳ್ಳುವುದರೊಂದಿಗೆ ಶ್ರದ್ಧೆ, ನಿಷ್ಠೆಯಿಂದ ಗುರಿಯೆಡೆಗೆ ಸಾಗಬೇಕು ಎಂಬುದನ್ನು ಪಾಲಕರು ಮಕ್ಕಳಿಗೆ ತಿಳಿಸಿಕೊಡಬೇಕು. ಮಕ್ಕಳನ್ನು ಸಾಧನೆಗೆ ಪ್ರೇರೇಪಿಸುವುದು ಪಾಲಕರ ಜವಾಬ್ದಾರಿ ಎಂದರು.

ಸತತ 4 ವರ್ಷ ಪ್ರಯತ್ನದ ನಂತರ ನಾನು ಐಎಎಸ್‌ ಉತ್ತೀರ್ಣನಾಗಿದ್ದೇನೆ. ಪರಿಶ್ರಮದಿಂದ ಯಾರಾದರೂ ಸಾಧನೆ ಮಾಡಬಹುದೆಂಬುದಕ್ಕೆ ನಾನೇ ಸಾಕ್ಷಿ ಎಂದರು.

ಚನ್ನಬಸಪ್ಪ ಧಾರವಾಡಶೆಟ್ಟರ ಅಧ್ಯಕ್ಷತೆ ವಹಿಸಿದ್ದರು. ಶ್ರೀಶೈಲಪ್ಪ ಶೆಟ್ಟರ, ಜಗದೀಶ ಕಾಳಣ್ಣವರ, ಅಂದಾನಪ್ಪ ಹರದಾರಿ, ಬಸವರಾಜ ಹತ್ತಿಕಾಳ, ಅಂದಾನಪ್ಪ ಸಜ್ಜನರ, ವೀರಣ್ಣ ನೀರಲಗಿ, ತಾರಾದೇವಿ ವಾಲಿ, ಜಯಲಕ್ಷ್ಮಿ ಉಮಚಗಿ ಇದ್ದರು.

ಟಾಪ್ ನ್ಯೂಸ್

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.