ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವ : ಫ್ರಾನ್ಸ್ ಪ್ರತಿಪಾದನೆ
Team Udayavani, May 7, 2019, 11:08 AM IST
ವಾಷಿಂಗ್ಟನ್ : ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯನಾಗಿರುವುದು ಅಗತ್ಯವಿದೆ ಎಂದು ಫ್ರಾನ್ಸ್ ದೃಢವಾಗಿ ಹೇಳಿದೆ.
ಬದಲಾಗುತ್ತಿರುವ ಭೌಗೋಳಿಕ ರಾಜಕೀಯ ಸನ್ನಿವೇಶಗಳಿಗೆ ಅನುಗುಣವಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸುಧಾರಣೆಗಳನ್ನು ತರುವ ಮತ್ತು ಅದನ್ನು ವಿಸ್ತರಿಸುವ ಅಗತ್ಯವಿದೆ ಎಂದು ಭಾರತ ಬಹಳ ಹಿಂದಿನಿಂದಲೂ ಒತ್ತಾಯಿಸುತ್ತಿದ್ದು ತಾನು ಖಾಯಂ ಸದಸ್ಯತ್ವ ಪಡೆಯುವುದಕ್ಕೆ ಅತ್ಯಂತ ಹೆಚ್ಚಿನ ಅರ್ಹತೆ ಹೊಂದಿದ್ದೇನೆ ಎಂದು ಪ್ರತಿಪಾದಿಸಿಕೊಂಡು ಬಂದಿದೆ.
ಭಾರತದಂತೆ ಜರ್ಮನಿ, ಬ್ರಝಿಲ್ ಮತ್ತು ಜಪಾನ್ ದೇಶಗಳಿಗೂ ವಿಶ್ವಸಂಸ್ಥೆಯ ವಿಸ್ತೃತ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ಇರುವ ಅಗತ್ಯವಿದೆ ಎಂದು ವಿಶ್ವಸಂಸ್ಥೆಯಲ್ಲಿ ಫ್ರಾನ್ಸ್ ರಾಯಭಾರಿಯಾಗಿರುವ ಫ್ರಾನ್ಸ್‌ವಾ ದೆಲಾತ್ರೆ ಅವರು ಹೇಳಿದರು.
ನೀತಿಗಳಿಗೆ ಸಂಬಂಧಿಸಿದಂತೆ ಫ್ರಾನ್ಸ್ ಮತ್ತು ಜರ್ಮನಿ ಬಲವಾದ ನೀತಿಯನ್ನು ಹೊಂದಿದ್ದು ಭದ್ರತಾ ಮಂಡಳಿಯಲ್ಲಿ ಅವು ಜತೆಗೂಡಿ ಕೆಲಸ ಮಾಡುತ್ತಿವೆ. ಅಂತೆಯೇ ಮಹತ್ತರ ವಿಚಾರಗಳಲ್ಲಿ ಅವು ಮಾತುಕತೆಗಳ ಮೂಲಕ ಉತ್ತಮ ಯಶಸ್ಸು ಸಾಧಿಸಿವೆ. ವ್ಯೂಹಾತ್ಮಕ ತಂತ್ರಗಾರಿಕೆಯ ರೂಪಣೆಗಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸುಧಾರಣೆ, ವಿಸ್ತರಣೆಯ ಅಗತ್ಯ ಈಗ ಹಿಂದೆಂದಿಗಿಂತಲೂ ಹೆಚ್ಚಿದೆ ಎಂದು ದೆಲಾತ್ರೆ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.