ಮಂಗಳೂರಿನಲ್ಲಿ ಇಂದೂ ನೀರಿಲ್ಲ
Team Udayavani, May 8, 2019, 6:10 AM IST
ಮಂಗಳೂರು: ಮಂಗಳೂರಿಗೆ ನೀರು ಒದಗಿಸುವ ತುಂಬೆ ಅಣೆಕಟ್ಟಿನಲ್ಲಿ ನೀರಿನ ಪ್ರಮಾಣದಲ್ಲಿ ಕುಸಿತ ಹಿನ್ನೆಲೆಯಲ್ಲಿ ರೇಷನಿಂಗ್ ನಿಯಮದಂತೆ ಮೇ 8ರಂದು ಕೂಡ ಮಂಗಳೂರು ನಗರಕ್ಕೆ ನೀರು ಸರಬರಾಜು ಸ್ಥಗಿತವಾಗಲಿದೆ. ಮಂಗಳವಾರ ರೇಷನಿಂಗ್ ಪರಿಣಾಮ ನಗರದಲ್ಲಿ ನೀರಿಲ್ಲದೆ ಜನರು ಸಮಸ್ಯೆ ಎದುರಿಸಿದರು.
ನಿಯಮದ ಪ್ರಕಾರ, ಮೇ 7ರಂದು ಬೆಳಗ್ಗೆ 6 ಗಂಟೆಯಿಂದ ಮೇ 9ರ ಬೆಳಗ್ಗೆ 6 ಗಂಟೆಯವರೆಗೆ ನೀರು ಪೂರೈಕೆ ಸ್ಥಗಿತಗೊಳಿಸಲಾಗುತ್ತದೆ. ಮೇ 9ರ ಬೆಳಗ್ಗೆ 6 ಗಂಟೆಯಿಂದ ಮೇ 13ರ ಬೆಳಗ್ಗೆ 6 ಗಂಟೆಯವರೆಗೆ 96 ತಾಸುಗಳ ಕಾಲ ನೀರು ಸರಬರಾಜು ಇರಲಿದೆ.
ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ದಿನಕ್ಕೆ 5 ರಿಂದ 5 ಸೆಂ.ಮೀ ಕುಸಿಯುತ್ತಿದೆ. ಸೋಮವಾರ ಬೆಳಗ್ಗೆ 4.38 ಮೀ. ಇದ್ದ ನೀರಿನ ಮಟ್ಟ ಸಂಜೆಯ ವೇಳೆಗೆ 4.34 ಮೀ.ಗೆ ಇಳಿದಿತ್ತು. ಮಂಗಳವಾರ ಡ್ಯಾಂನಲ್ಲಿ ನೀರಿನ ಪ್ರಮಾಣ 4.27 ಮೀ. ಇದೆ. ಪ್ರಸ್ತುತ ರೂಪಿಸಿರುವ ನೀರಿನ ರೇಷನಿಂಗ್ ಸ್ವರೂಪ ಮೇ 21ರ ವರೆಗೆ ಜಾರಿಯಲ್ಲಿರುತ್ತದೆ.
ರೇಷನಿಂಗ್ ಹಿನ್ನೆಲೆಯಲ್ಲಿ ನೀರು ಸರಬರಾಜು ಮಾರ್ಗದಲ್ಲಿರುವ ಕೊನೆಯ ಹಾಗೂ ಎತ್ತರದ ಪ್ರದೇಶಗಳಿಗೆ ನೀರು ಲಭ್ಯತೆ ದುಸ್ತರವಾಗಿದ್ದು ಮಂಗಳೂರಿನ ಜನತೆ ಕುಡಿಯುವ ನೀರಿಗಾಗಿ ಸಂಕಷ್ಟ ಅನುಭವಿಸುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.