ನವಯುಗಕ್ಕೆ ನಾಂದಿ ಹಾಡಿದ ಕೀರ್ತಿ ಬಸವಣ್ಣನವರದು
ಲಿಂಗಾಯತ ಸಂಘಟನೆಗಳಿಂದ ವಿಭಿನ್ನ ಕಾರ್ಯಕ್ರಮ
Team Udayavani, May 8, 2019, 12:09 PM IST
ಬೆಳಗಾವಿ: ಮಂಗಳವಾರ ನಡೆದ ಭವ್ಯ ಮೆರವಣಿಗೆಗೆ ಪೊಲೀಸ್ ಆಯುಕ್ತ ಲೋಕೇಶ ಕುಮಾರ ಹಾಗೂ ಡಿಸಿಪಿ ಸೀಮಾ ಲಾಟ್ಕರ್ ಚಾಲನೆ ನೀಡಿದರು.
ಬೆಳಗಾವಿ: ಕಾಯಕಯೋಗಿ ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮ ಬೆಳಗಾವಿಯಲ್ಲಿ ಮಂಗಳವಾರ ಬಹಳ ವೈಭವದಿಂದ ನಡೆಯಿತು. ಬೆಳಗ್ಗೆ ಜಿಲ್ಲಾಡಳಿತದ ವತಿಯಿಂದ ಗೋವಾವೇಸ್‌ದ ಬಸವೇಶ್ವರ ವೃತ್ತದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ವಿಶಾಲ್ ಆರ್. ಬಸವಣ್ಣನವರ ಪ್ರತಿಮೆಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದಲ್ಲದೇ ವಿವಿಧ ಲಿಂಗಾಯತ ಸಂಘಟನೆಗಳ ವತಿಯಿಂದ ಬಸವ ಜಯಂತಿ ಅಂಗವಾಗಿ ವಿಭಿನ್ನ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿತ್ತು.
ಶಾಸಕರಿಂದ ಪೂಜೆ; ಬೆಳಗಾವಿಯ ಬಸವ ದಳ, ಬಸವ ಸೇವಾ ಸಮಿತಿ, ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಅನಿಲ ಬೆನಕೆ ಬಸವೇಶ್ವರರ ಪ್ರತಿಮೆಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಸವೇಶ್ವರರ ವಚನ ಸಾಹಿತ್ಯ, ತತ್ವಗಳು ಹಾಗೂ ಅವರ ಮಾರ್ಗದರ್ಶನ ನಮ್ಮೆಲ್ಲರಿಗೂ ಮಾದರಿಯಾಗಿವೆ. ಈ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ಭವ್ಯ ಮೆರವಣಿಗೆ: ನಂತರ ಸಂಜೆ ನಗರದ ಚನ್ನಮ್ಮ ವೃತ್ತದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿ ಉತ್ಸವ ಕೇಂದ್ರ ಸಮಿತಿ ಆಶ್ರಯದಲ್ಲಿ ನಡೆದ ಭವ್ಯ ಮೆರವಣಿಗೆಗೆ ನಗರ ಪೊಲೀಸ್ ಆಯುಕ್ತ ಲೋಕೇಶಕುಮಾರ, ಡಿಸಿಪಿ ಸೀಮಾ ಲಾಟಕರ ಚಾಲನೆ ನೀಡಿದರು. ವಿವಿಧ ಜಾನಪದ ಕಲಾವಿದರು ಹಾಗೂ ಲಿಂಗಾಯತ ಸಂಘಟನೆಗಳ ಸದಸ್ಯರು ತಮ್ಮ ಕಲಾ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದರು. ಸಾಮೂಹಿಕ ನೃತ್ಯ, ಜಗ್ಗಲಗಿ, ಡೊಳ್ಳು ಕುಣಿತ ಮೆರವಣಿಗೆಯ ವಿಶೇಷ ಆಕರ್ಷಣೆಯಾಗಿದ್ದವು. ಈ ಸಂದರ್ಭದಲ್ಲಿ ಲಿಂಗಾಯತ ಸಂಘಟನೆ ಮುಖಂಡರಾದ ಕಲ್ಯಾಣರಾವ್ ಮುಚಳಂಬಿ, ಡಾ. ಎಚ್.ಬಿ. ರಾಜಶೇಖರ, ಮಾಜಿ ಮಹಾಪೌರ ಸಿದ್ದನಗೌಡ ಪಾಟೀಲ, ಮಾಜಿ ಉಪಮಹಾಪೌರ ಜ್ಯೋತಿ ಭಾವಿಕಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.