ವೈಭವದ ನಡೆದ ಬಸವೇಶ್ವರರ ತೊಟ್ಟಿಲು ಮೆರವಣಿಗೆ
Team Udayavani, May 8, 2019, 2:54 PM IST
ಬಸವಕಲ್ಯಾಣ: ಮಹಾತ್ಮ ಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಬಸವಣ್ಣನವರ ತೊಟ್ಟಿಲು ಮೆರವಣಿಗೆ ನಡೆಯಿತು.
ಬಸವಕಲ್ಯಾಣ: ಮಹಾತ್ಮ ಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಂಗಳವಾರ ಬಸವೇಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಬೆಳಗ್ಗೆ ಬಸವಣ್ಣನವರ ಮೂರ್ತಿಗೆ ಅಷ್ಠಗಂಧ ಪೂಜೆ ಹಾಗೂ ಬಸವ ಭಕ್ತರಿಂದ ವಚನ ಪಠಣ, ಬಸವಣ್ಣವರ ಬೆಳ್ಳಿ ತೊಟ್ಟಿಲು ಪೂಜೆ ಹಾಗೂ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಶಾಸಕ ಬಿ.ನಾರಾಯಣರಾವ್ ಬೆಳ್ಳಿ ತೊಟ್ಟಿಲು ಪೂಜೆ ನೆರವೇರಿಸಿದರು. ಸಹಾಯಕ ಆಯುಕ್ತ ಜ್ಞಾನೇಂದ್ರಕುಮಾರ ಗಂಗಾವಾರ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ನಗರದ ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ| ಬಿ.ಆರ್.ಅಂಬೇಡ್ಕರ್ ವೃತ್ತದ ಮುಖಾಂತರ ಶಿವಶರಣ ಹರಳಯ್ಯ ವೃತ್ತದಲ್ಲಿ ಸಮಾಪ್ತಿಗೊಂಡಿತು.
ಮೆರವಣಿಗೆ ಉದಕ್ಕೂ ವಿಶ್ವಗುರು ಬಸವಣ್ಣನವರಿಗೆ, ಮಹಾನ್ ಮಾನವತಾವಾದಿ ಹಾಗೂ ವನಚಕ್ರಾಂತಿ ರೂವಾರಿ, ಕಾಯಕ, ದಾಸೋಹ ಸಂಸ್ಕೃತಿಯನ್ನು ಅನುಷ್ಠಾನಕ್ಕೆ ತಂದ ಮಹಾನ್ ನಾಯಕ ಬಸವಣ್ಣನಣ್ಣವರಿಗೆ ಜೈಹೋ ಎಂಬ ಘೋಷಣೆಗಳು ಕೇಳಿಬಂದವು.
ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳ ನೃತ್ಯ, ಡೊಳ್ಳು ಕುಣಿತ, ಮಕ್ಕಳ ಕೋಲಾಟ ಹಾಗೂ ಶರಣರ ಸ್ತಬ್ಧ ಚಿತ್ರಗಳು ಸಾರ್ವಜನಿಕರ ಮನಸ್ಸು ಸೆಳೆದವು. ಬೇಸಿಗೆ ಹಿನ್ನೆಲೆಯಲ್ಲಿ ರಸ್ತೆ ಉದಕ್ಕೂ ಬಸವಾಭಿಮಾನಿಗಳು ಮತ್ತು ಸಾರ್ವಜನಿಕರು ಅಲ್ಲಲ್ಲಿ ಕುಡಿಯುವ ನೀರಿನ ಮತ್ತು ದಾಸೋಹ ವ್ಯವಸ್ಥೆ ಮಾಡಲಾಗಿತ್ತು.
ಡಾ| ಗಂಗಾಂಬಿಕಾ ಅಕ್ಕ, ತಹಶೀಲ್ದಾರ್ ಸಾವಿತ್ರಿ ಶರಣು ಸಲಗರ, ಶ್ರೀ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿ, ವಿಶ್ವಸ್ಥ ಸಮಿತಿ ಪದಾಧಿಕಾರಿಗಳು, ಬಸವಾಭಿಮಾನಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.