ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣಗೊಳ್ಳಲಿ
ಹಿರಿಯೂರು ತಾಲೂಕಿನಲ್ಲಿ ಬರಗಾಲ ಇರುವುದರಿಂದ ಕೃಷಿಕರಿಗೆ ಸಂಕಷ್ಟ: ಪೂರ್ಣಿಮಾ ಶ್ರೀನಿವಾಸ್
Team Udayavani, May 8, 2019, 5:41 PM IST
ಹಿರಿಯೂರು: ವಾಣಿವಿಲಾಸ ಜಲಾಶಯಕ್ಕೆ ನೀರು ಹರಿಸುವಂತೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಒತ್ತಾಯಿಸಿದರು
ಹಿರಿಯೂರು: ತಾಲೂಕಿನಲ್ಲಿ ತೀವ್ರವಾದ ಬರಗಾಲ ಪರಿಸ್ಥಿತಿ ತಲೆದೋರಿದ್ದು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದ್ದು, ಕೃಷಿಕರ ತೋಟಗಳು ಒಣಗುತ್ತಿವೆ. ಆದ್ದರಿಂದ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಬೇಗ ಮುಗಿಸಿ ವಾಣಿವಿಲಾಸ ಸಾಗರ ಜಲಾಶಯಕ್ಕೆ ನೀರು ಹರಿಸುವಂತೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಒತ್ತಾಯಿಸಿದರು.
ವಾಣಿವಿಲಾಸ ಸಾಗರ ಹೋರಾಟ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್ ಹಾಗೂ ಕಾರ್ಯಕರ್ತರೊಂದಿಗೆ ವಿಶ್ವೇಶ್ವರಯ್ಯ ಜಲ ಮಂಡಳಿ ನಿಗಮದ ವ್ಯಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಅಭಿಯಂತರರನ್ನು ಭೇಟಿ ಮಾಡಿದ್ದ ಅವರು ಈ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸುವಂತೆ ಮನವಿ ಮಾಡಿದರು.
ಮನವಿಗೆ ಸ್ಪಂದಿಸಿದ ವಿಶ್ವೇಶ್ವರಯ್ಯ ಜಲ ಮಂಡಳಿ ನಿಗಮದ ವ್ಯವಸ್ಥಾಪಕರು ಬಾಕಿ ಉಳಿದಿರುವ ಕಾಮಗಾರಿಗಳ ಬಗ್ಗೆ ಶಾಸಕಿಗೆ ವಿವರ ನೀಡಿದರು. ಜೂನ್ ಅಂತ್ಯದೊಳಗೆ ವಿವಿ ಸಾಗರ ಜಲಾಶಯಕ್ಕೆ ನೀರು ಹರಿಸುವುದಾಗಿ ಭರವಸೆ ನೀಡಿದರು.
ಮಾತಿಗೆ ತಪ್ಪಿದಲ್ಲಿ ಹೋರಾಟ ಸಮಿತಿ ನೇತೃತ್ವದಲ್ಲಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸುವುದಾಗಿ ಹೋರಾಟ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್ ತಿಳಿಸಿದರು. ಈ ಸಂದರ್ಭದಲ್ಲಿ ಕೃಷಿಕ ಸಮಾಜದ ಅಧ್ಯಕ್ಷ ಹಾಗೂ ಹೋರಾಟ ಸಮಿತಿ ಗೌರವಾಧ್ಯಕ್ಷ ಎಚ್.ಆರ್. ತಿಮ್ಮಯ್ಯ, ರೈತ ಮುಖಂಡರಾದ ಆಲೂರು ಸಿದ್ದರಾಮಣ್ಣ, ಯಳನಾಡು ರಾಮಚಂದ್ರಪ್ಪ, ಡಾ| ಹನುಮಂತರಾಯಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.