ಪಟ್ಟಣ ಪಂಚಾಯಿತಿನಲ್ಲಿ 13 ಸ್ಥಾನ ಗೆಲ್ಲುವುದಕ್ಕೆ ಶ್ರಮಿಸಿ


Team Udayavani, May 9, 2019, 3:00 AM IST

pattana

ಹನೂರು: ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಳೆದ ಬಾರಿ 13 ವಾರ್ಡುಗಳ ಪೈಕಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು 9 ವಾರ್ಡುಗಳಲ್ಲಿ ಜಯಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಾಗಿತ್ತು.

ಈ ಬಾರಿ 13ಕ್ಕೆ 13 ವಾರ್ಡುಗಳಲ್ಲಿ ಗೆಲುವು ಸಾಧಿಸುವ ಮೂಲಕ ಪಟ್ಟಣ ಕಾಂಗ್ರೆಸ್‌ನ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ನರೇಂದ್ರ ರಾಜುಗೌಡ ಹೇಳಿದರು.

ಪಟ್ಟಣದ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಪಪಂ ಚುನಾವಣೆ ಹಿನ್ನೆಲೆ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಮೇ 29ರಂದು ಪಟ್ಟಣ ಪಂಚಾಯಿತಿಗೆ ಚುನಾವಣೆ ಘೋಷಣೆಯಾಗಿದ್ದು ಆಕಾಂಕ್ಷಿಗಳು ಇಂದಿನಿಂದಲೇ ನಿಗದಿತ ಅರ್ಜಿ ಪಡೆದು ಅರ್ಜಿ ಸಲ್ಲಿಸಬೇಕು. ಪಕ್ಷದ ಅಭ್ಯರ್ಥಿಯನ್ನು ಚುನಾವಣಾ ವೀಕ್ಷಕರು ವಾರ್ಡುಗಳಲ್ಲಿ ಸಮೀಕ್ಷೆ ನಡೆಸಿ ಅಭ್ಯರ್ಥಿ ಘೋಷಣೆ ಮಾಡಲಾಗುವುದು ಎಂದರು.

ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಡೆ: ಹನೂರು ಪಟ್ಟಣ ದಿವಂಗತ ರಾಜುಗೌಡರ ಕಾಲದಿಂದಲೂ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಆದರೆ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ನಮ್ಮ ಒಳಗಿನ ಕೆಲ ವೈಯಕ್ತಿಕ ಭಿನ್ನಾಭಿಪ್ರಾಯ ಮತ್ತು ವಿವಿಧ ಕಾರಣಗಳಿಂದ ಕಾಂಗ್ರೆಸ್‌ ಪಕ್ಷಕ್ಕೆ ಸ್ವಲ್ಪ ಪ್ರಮಾಣದ ಹಿನ್ನೆಡೆಯಾಗಿ ಕಾಂಗ್ರೆಸ್‌ ಪಕ್ಷಕ್ಕಿಂತ ಬಿಜೆಪಿ ಪಕ್ಷಕ್ಕೆ 101 ಮತಗಳು ಹೆಚ್ಚಾಗಿದ್ದವು.

ಆದ್ದರಿಂದ ಪ್ರಸಕ್ತ ಚುನಾವಣೆಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಗೆ ಯಾವುದೇ ಆಸ್ಪದ ನೀಡದೆ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಜಿಪಂ ಸದಸ್ಯ ಬಸವರಾಜು ಮಾತನಾಡಿ, ಹನೂರು ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಮಾಡಬೇಕು ಎಂದು ಕಳೆದ 30 ವರ್ಷಗಳಿಂದಲೂ ಶ್ರಮಿಸಲಾಗುತಿತ್ತು. ಆ ಕನಸು ಇದೀಗ ಶಾಸಕ ನರೇಂದ್ರ ಅವರ ಅವಿರತ ಶ್ರಮದಿಂದ ಸಾಕಾರವಾಗಿದೆ ಎಂದರು.

ಕಾಂಗ್ರೆಸ್‌ ಸೋಲಿಸಲು ಕಾಂಗ್ರೆಸ್‌ನವರಿಂದ ಮಾತ್ರ ಸಾಧ್ಯ: ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ಕಾಂಗ್ರೆಸ್‌ನವರಿಂದ ಮಾತ್ರ ಸಾಧ್ಯವೇ ಹೊರತು ಬಿಜೆಪಿ ಅಥವಾ ಜೆಡಿಎಸ್‌ ಪಕ್ಷದವರಿಂದ ಸಾಧ್ಯವಿಲ್ಲ.

ಆದುದರಿಂದ ಕಾಂಗ್ರೆಸ್‌ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ವೈಯಕ್ತಿಕ ದ್ವೇಷ ಅಥವಾ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷದ ಅಭ್ಯರ್ಥಿಗಳ ಪರ ಕಾರ್ಯನಿರ್ವಹಿಸಿದಲ್ಲಿ 13ಕ್ಕೆ 13 ಸ್ಥಾನಗಳನ್ನೂ ಗೆಲ್ಲಬಹುದು ಎಂದು ತಿಳಿಸಿದರು.

ಚುನಾವಣಾ ವೀಕ್ಷಕ ಬಿ.ಕೆ.ರವಿಕುಮಾರ್‌ ಮಾತನಾಡಿ, ಪಕ್ಷದ ಕಚೇರಿಯಲ್ಲಿ ಇಂದಿನಿಂದಲೇ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು ಚುನಾವಣೆಗೆ ಸ್ಫರ್ಧಿಸಲು ಇಚ್ಚಿಸುವ ಆಕಾಂಕ್ಷಿಗಳು ನಿಗದಿತ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಾಗಿದ್ದಲ್ಲಿ 3ಸಾವಿರ, ಪ.ಜಾತಿ ಅಥವಾ ಪಂಗಡದ ಅಭ್ಯರ್ಥಿಗಳಾಗಿದ್ದಲ್ಲಿ 1,500 ರೂ. ಶುಲ್ಕಗಳ ಡಿಮ್ಯಾಂಡ್‌ ಡ್ರಾಫ್ಟ್ನೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಮಾಹಿತಿ ನೀಡಿದರು.

ಚುನಾವಣಾ ವೀಕ್ಷಕರಾದ ಉಮೇಶ್‌, ಸುಹೇಲ್‌ ಅಲಿಖಾನ್‌, ಅರುಣ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಈಶ್ವರ್‌, ಕೆಂಪಯ್ಯ, ಮುಖಂಡರಾದ ಪಾಳ್ಯ ಕೃಷ್ಣ, ಜಯಪ್ರಕಾಶ್‌ ಗುಪ್ತ, ಚಿಕ್ಕತಮ್ಮಯ್ಯ, ಮಾದೇಶ್‌, ಮಹೇಶ್‌, ಬಸವರಾಜು ಇನ್ನಿತರರು ಇದ್ದರು.

ಟಾಪ್ ನ್ಯೂಸ್

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.