ಬಂಟ್ವಾಳ: ಪೈಪ್ ಒಡೆದು ನೀರು ಪೋಲು
Team Udayavani, May 9, 2019, 5:50 AM IST
ಬಂಟ್ವಾಳ: ಪುರಸಭಾ ವ್ಯಾಪ್ತಿಯ ನಗರ ಕೇಂದ್ರ ಬಂಟ್ವಾಳ ಪೇಟೆಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ನೀರು ಹರಿದು ಹೋಗುವ ಮೂಲಕ ಪೋಲಾಗುತ್ತಿದೆ. ಪುರಸಭೆಯ ಆಡಳಿತಕ್ಕೆ ಲಿಖೀತ ದೂರು ನೀಡಿದರೂ ಸ್ಪಂದನವಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಮಿತಿಯಲ್ಲಿ ನೀರು ಬಳಕೆ ಮಾಡುವಂತೆ ಜಿಲ್ಲಾಡಳಿತ ಆದೇಶ ಮಾಡಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ನೀರಿನ ಅಭಾವ ಉಂಟಾಗಿದೆ. ಆದುದರಿಂದ ಪೈಪ್ ಒಡೆದು ನೀರು ಪೋಲಾಗುತ್ತಿರುವ ಬಗ್ಗೆ ಗಮನ ಹರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಬಂಟ್ವಾಳ ಬೈಪಾಸ್, ಜಕ್ರಿಬೆಟ್ಟು ಕಡೆಗಳಲ್ಲಿ ಪೈಪ್ ಒಡೆದು ನೀರು ಪೋಲಾಗುತ್ತಿದೆ. ಪೈಪ್ ಒಡೆದ ಕಾರಣದಿಂದ ಎತ್ತರ ಪ್ರದೇಶಗಳ ಮನೆಗೆ ನೀರಿನ ಒತ್ತಡ ಕಡಿಮೆಯಾಗಿ ನೀರು ಬರುತ್ತಿಲ್ಲ. ಇಲಾಖೆಯ ಅಧಿಕಾರಿಗಳು ಪೋಲಾಗುತ್ತಿರುವ ನೀರಿನ ಈ ಬಗ್ಗೆ ಗಮನಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.