ಕುಂದಗೋಳದಲ್ಲಿ ಭರ್ಜರಿ ರೋಡ್ ಶೋ, ಬಿರುಸಿನ ಪ್ರಚಾರ
Team Udayavani, May 9, 2019, 3:09 AM IST
ಉಪ ಚುನಾವಣೆ ನಡೆಯಲಿರುವ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಕಾವು ಜೋರಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪರ ನಾಯಕರು ಮತಯಾಚನೆಯಲ್ಲಿ ತೊಡಗಿದ್ದಾರೆ. ಅಂಚಟಗೇರಿ ಹಾಗೂ ಮಾವನೂರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ ಪರ ಮಾಜಿ ಸಚಿವ ಶ್ರೀರಾಮುಲು ಭರ್ಜರಿ ರೋಡ್ ಶೋ ನಡೆಸಿದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಸಚಿವ ಸತೀಶ ಜಾರಕಿಹೊಳಿ ಪ್ರಚಾರ ನಡೆಸಿದರು.
“ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ, ಬಿಎಸ್‌ವೈ ಸಿಎಂ’
ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೆ ಬರಲಿದ್ದು, ಬಿ.ಎಸ್.ಯಡಿಯೂರಪ್ಪ ಮತ್ತೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ. ಕುಂದಗೋಳ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಅಂಚಟಗೇರಿಯಲ್ಲಿ ಮಾಧ್ಯಮರೊಂದಿಗೆ ಮಾತನಾಡಿ, ಬಿಜೆಪಿ 104 ಶಾಸಕರನ್ನು ಹೊಂದಿದೆ.
ಕುಂದಗೋಳ ಹಾಗೂ ಚಿಂಚೋಳಿ ಉಪ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಶಾಸಕರ ಸಂಖ್ಯೆಯನ್ನು 106ಕ್ಕೆ ಹೆಚ್ಚಿಸಿಕೊಳ್ಳಲಿದೆ. ಪಕ್ಷೇತರ ಅಭ್ಯರ್ಥಿಗಳ ಸಹಕಾರದೊಂದಿಗೆ ಸರಕಾರ ರಚಿಸಲಾಗುವುದು. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದರು.
ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಚುನಾವಣಾ ಇಲಾಖೆಗೆ ಪತ್ರ ಬರೆದು ಅಭಿವೃದ್ಧಿ ಕಾಮಗಾರಿ ಆರಂಭಿಸಲು ಅನುಕೂಲ ಕಲ್ಪಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಬರಪೀಡಿತ ಪ್ರದೇಶಗಳ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಕೆಲಸ ಮಾಡಬೇಕು.
ಕೇವಲ ಕಮೀಷನ್ ಆಸೆಗಾಗಿ ಹಾಗೂ ಕೇವಲ ನಾಲ್ಕು ಜಿಲ್ಲೆಗಳ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಬಾರದು. ಉತ್ತರ ಕರ್ನಾಟಕದಲ್ಲಿ ಬರಗಾಲ ಆವರಿಸಿದ್ದು, ಜನ-ಜಾನುವಾರುಗಳು ಕುಡಿಯಲು ನೀರಿಲ್ಲದೇ ಪರಿತಪಿಸುತ್ತಿದ್ದು, ಚುನಾವಣೆ ನೆಪದಲ್ಲಾದರೂ ಮುಖ್ಯಮಂತ್ರಿಗಳು ಉತ್ತರ ಕರ್ನಾಟಕಕ್ಕೆ ಆಗಮಿಸಿ ಇಲ್ಲಿನ ಪರಿಸ್ಥಿತಿ ನೋಡಬೇಕು ಎಂದರು.
ನಕಲಿ ಮತದಾನ ಶಂಕೆ: ಸೋಲಿನ ಭೀತಿಯಿಂದ ಮಂಡ್ಯ, ಹಾಸನದಲ್ಲಿ ನಕಲಿ ಮತದಾನ ನಡೆದಿರುವ ಶಂಕೆ ಇದೆ. ಕೇವಲ ಒಂದೇ ಗಂಟೆಯಲ್ಲಿ ಶೇ.20 ಮತದಾನ ಹೆಚ್ಚಾಗಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಬಗ್ಗೆ ತನಿಖೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ ಎಂದು ಶ್ರೀರಾಮುಲು ಹೇಳಿದರು.
ಶ್ರೀರಾಮುಲು ರೋಡ್ ಶೋ: ಕುಂದಗೋಳ ವಿಧಾನಸಭಾ ಕ್ಷೇತ್ರದ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿಯಲ್ಲಿ ಬುಧವಾರ ಮಾಜಿ ಸಚಿವ ಶ್ರೀರಾಮುಲು ಅವರು ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ ಪರ ರೋಡ್ ಶೋ ಮೂಲಕ ಮತಯಾಚಿಸಿದರು.
ನಂತರ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಸೋಲು ಕಂಡಿರುವ ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ ಅವರನ್ನು ಈ ಬಾರಿ ಅತ್ಯಧಿಕ ಮತಗಳಿಂದ ಜಯ ಗಳಿಸುವಂತೆ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೂ ಮೊದಲು, ಕುಂದಗೋಳ ತಾಲೂಕಿನ ಮಾವನೂರು ಗ್ರಾಮದಲ್ಲಿ ರೋಡ್ ಶೋ ನಡೆಸಿ, ಮತಯಾಚಿಸಿದರು. ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ, ಎಂ.ಆರ್.ಪಾಟೀಲ, ಮೋಹನ ಲಿಂಬಿಕಾಯಿ, ಜಿಲ್ಲಾಧ್ಯಕ್ಷ ಈರಣ್ಣಾ ಜಡಿ ಸೇರಿದಂತೆ ಮೊದಲಾದವರು ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.