“ಮಾನವೀಯತೆಗಿಂತ ಮಿಗಿಲಾದ ಜಾತಿಯಿಲ್ಲ ‘
Team Udayavani, May 9, 2019, 6:30 AM IST
ಮಹಾನಗರ: ಅಂತಾರಾಷ್ಟ್ರೀಯ ವಿಶ್ವ ರೆಡ್ ಕ್ರಾಸ್ ದಿನಾಚರಣೆಯ ಅಂಗವಾಗಿ ಮೇ 8ರಂದು ನಗರದ ಜಿಲ್ಲಾ ಗೃಹರಕ್ಷಕದಳ ಮೇರಿಹಿಲ್ ಕಚೇರಿ ಆವರಣದಲ್ಲಿ ಗಿಡ ನೆಡುವುದರ ಮೂಲಕ ಸಾಂಕೇತಿಕವಾಗಿ ಆಚರಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ.ಮುರಲೀ ಮೋಹನ್ ಚೂಂತಾರು ಮಾತನಾಡಿ, ಅಂತಾರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ, ಮಾನವೀಯ ಕಳಕಳಿ ಹೊಂದಿರುವ ಸಾಮೂಹಿಕ ಸಂಘಟನೆಯಾಗಿದ್ದು ವಿಶ್ವಾದ್ಯಂತ ತನ್ನ ಶಾಖೆಗಳನ್ನು ಹೊಂದಿದೆ.
ಮಾನವೀಯತೆಗಿಂತ ಮಿಗಿಲಾದ ಜಾತಿ ಇಲ್ಲ ಎಂಬ ತತ್ತÌದೊಂದಿಗೆ ಕೆಲಸ ನಿರ್ವಹಿಸುತ್ತ ಮಾನವೀಯತೆ ಮುಖಾಂತರ ಜಗತ್ತಿಗೆ ಶಾಂತಿಯನ್ನು ಪಸರಿಸುವ ಕೆಲಸವನ್ನು ಮಾಡುತ್ತಿವೆ. ಪ್ರತಿಯೊಬ್ಬ ಮನುಷ್ಯರು ರೆಡ್ ಕ್ರಾಸ್ ತತ್ವ ಧ್ಯೇಯಗಳನ್ನು ಜೀವನದಲ್ಲಿ ಅಳವಡಿಸಬೇಕಾದ ಅನಿವಾರ್ಯವಿದೆ ಎಂದು ಕರೆ ನೀಡಿದರು.
ಲಯನ್ಸ್ ಕ್ಲಬ್ ತುಳುನಾಡು ಅಧ್ಯಕ್ಷ ವಿಲ್ಸನ್ ದಿವಾಕರ್, ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರಾದ ಅಜಯ್ ಕುಮಾರ್, ಮಾನವ ಹಕ್ಕುಗಳ ಪ್ರಾಧಿಕಾರ ಇದರ ಸಿಇಒ ಶಿವರಾಜ್ ಅಯ್ಯರ್, ಪರಿಸರವಾದಿ, ಅರಣ್ಯ ಮಿತ್ರ ಪ್ರಶಸ್ತಿ ವಿಜೇತ ಮಾಧವ ಉಲ್ಲಾಳ್ ಉಪಸ್ಥಿತರಿದ್ದರು. ಕಚೇರಿಯ ಅಧೀಕ್ಷಕ ರತ್ನಾಕರ್, ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ.ಎಸ್. ಉಪಸ್ಥಿತರಿದ್ದರು. ಗೃಹರಕ್ಷಕ ರಮೇಶ್ ಭಂಡಾರಿ, ದಿವಾಕರ್, ಸನತ್ ಕುಮಾರ್ ಆಳ್ವ, ಸುಖೀತಾ ಶೆಟ್ಟಿ , ದೀಕ್ಷಾ ಮತ್ತು ಶಿಲ್ಪಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.