ಮನೆ ಕಟ್ಟುವ ಕನಸಿಗೆ ಹೊಯಿಗೆಯ ಹೊಡೆತ

ಕಾರ್ಕಳದಲ್ಲಿ ವಸತಿ ಯೋಜನೆಯ 674 ಮನೆ ಕಾಮಗಾರಿ ಸ್ಥಗಿತ

Team Udayavani, May 9, 2019, 6:11 AM IST

mane

ಕಾರ್ಕಳ: ಮನೆಯ ಕನಸು ಹೊತ್ತು ಮನೆ ನಿರ್ಮಾಣ ಮಾಡಲು ಮುಂದಾದ ಕುಟುಂಬಗಳು ಮರಳು ದೊರೆಯದೇ ಕಾಮಗಾರಿಯನ್ನು ನಿಲ್ಲಿಸುವಂತ ದುಃಸ್ಥಿತಿ ಕಾರ್ಕಳದಲ್ಲಿದೆ. ಸರಕಾರದ ವಸತಿ ಯೋಜನೆಯಡಿ ಮಂಜೂರಾದ ಬಹುತೇಕ ಮನೆಗಳ ಕಾಮಗಾರಿ ಅತಂತ್ರ ಸ್ಥಿತಿಯಲ್ಲಿದೆ. 2017-18ರಲ್ಲಿ ಕಾರ್ಕಳ ತಾಲೂಕಿನಲ್ಲಿ ಸರಕಾರದಿಂದ ಮಂಜೂರಾತಿ ಪಡೆದ 1080 ಮನೆಗಳಲ್ಲಿ ಕೇವಲ 406 ಮನೆ ಕಾಮಗಾರಿ ಮಾತ್ರ ಪೂರ್ಣಗೊಂಡಿದೆ. 405 ಮನೆಗಳ ಕಾಮಗಾರಿ ವಿವಿಧ ಹಂತದಲ್ಲಿದ್ದು, 269 ಮನೆ ಕಾಮಗಾರಿಗೆ ಚಾಲನೆಯೇ ದೊರಕಿಲ್ಲ. ಇದಕ್ಕೆ ಪ್ರಮುಖ ಕಾರಣ ಮರಳಿನ ಅಭಾವ ಎನ್ನಲಾಗುತ್ತಿದೆ.

ಕೆಲಸ ನಡೆಯುತ್ತಿಲ್ಲ

ಮನೆ ನಿರ್ಮಾಣ ಸೇರಿದಂತೆ ಮರಳಿಲ್ಲದೇ ಯಾವೊಂದು ಕೆಲಸ ಕಾರ್ಯಗಳೂ ಆಗುತ್ತಿಲ್ಲ. ಹೊಸ ಮನೆ ಕಟ್ಟುವ ಕನಸು ಕಾಣುತ್ತಿರುವ ಕುಟುಂಬ ಮರಳಿನ ಅಭಾವವನ್ನು ನೆನೆದು ಸುಮ್ಮನಿರುವಂತೆ ಮಾಡಿದೆ. ಶಿಥಿಲಗೊಂಡ ಮನೆಯವರು ಗಾಳಿ ಮಳೆಗೆ ಅದೇ ಮನೆಯಲ್ಲಿ ಜೀವನ ದೂಡುವಂತಾಗಿದೆ. ಆಶ್ರಯ ಯೋಜನೆಗಳಲ್ಲಿ ಮನೆ ನಿರ್ಮಾಣಕ್ಕೆ ಆದೇಶ ಪ್ರತಿ ತಗೊಂಡವರಿಗೆ ಮನೆ ನಿರ್ಮಾಣ ಮಾಡಲು ಸಾಧ್ಯವಾಗದೇ ಅನುದಾನ ವಾಪಾಸಾಗುವ ಆತಂಕದಲ್ಲಿದ್ದಾರೆ.

ಕಾರ್ಮಿಕರಿಗೂ ಕಷ್ಟ

ಮರಳಿನ ಕೊರತೆಯಿಂದ ಕಾರ್ಮಿಕರು ಉದ್ಯೋಗವಿಲ್ಲದೇ ಅವರ ಬದುಕನ್ನು ಸಂಕಷ್ಟಕ್ಕೆ ದೂಡಿದೆ. ಮರಳಿನ ಕುರಿತಂತೆ ಸ್ಪಷ್ಟ ನಿಯಮ ರೂಪಿಸುವಲ್ಲಿ ಜಿಲ್ಲಾಡಳಿತ, ಸರಕಾರಗಳು ವಿಫಲವಾಗಿವೆ. ನಿಯಮ ಸಡಿಲಗೊಳಿಸುವಂತೆ, ಸಾಗಾಟದ ನಿರ್ಬಂಧ ತೆರವಿಗೆ ಆಗ್ರಹಿಸಿ ಇತ್ತೀಚೆಗೆ ಕಾರ್ಕಳದಲ್ಲಿ ಪ್ರತಿಭಟನೆ ನಡೆಯಿತು. ಚುನಾವಣೆ ಬಹಿಷ್ಕಾರದ ಮಾತುಗಳೂ ಇತ್ತು. ಆದರೆ ಇವ್ಯಾವುದು ಸಂಬಂಧಪಟ್ಟವರಿಗೆ ಕೇಳಿಸಲಿಲ್ಲ.

ಸರಕಾರಿ ಕಾಮಗಾರಿಗೂ ತಡೆ

ಮನೆ, ಕಟ್ಟಡ ನಿರ್ಮಾಣಕ್ಕೆ ಮಾತ್ರ ಸಮಸ್ಯೆಯಲ್ಲದೇ ಸರಕಾರದ ಕಾಮಗಾರಿಗೂ ಮರಳಿನ ಕೊರತೆಯ ಬಿಸಿ ತಟ್ಟಿದೆ.

ಕಾರ್ಕಳದಲ್ಲಿ ಲೋಕೋಪಯೋಗಿ, ಸಿಆರ್‌ಎಫ್‌ ಸೇರಿದಂತೆ ವಿವಿಧ ಯೋಜನೆಗಳಡಿ ಮಂಜೂರಾದ ಸುಮಾರು 20 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗಳು ಸ್ಥಗಿತಗೊಂಡಿವೆೆ. ಕಾರ್ಕಳ ಪೇಟೆಯಲ್ಲಿ ನಿರ್ಮಾಣವಾಗುತ್ತಿರುವ ಪೊಲೀಸ್‌ ವಸತಿ ಗೃಹ, ವಿದ್ಯಾರ್ಥಿನಿಲಯ, ಶಾಲಾ ಕಟ್ಟಡಗಳು, ಪಂಚಾಯತ್‌ ಕಟ್ಟಡಗಳಿಗೂ ಮರಳಿನ ಅಭಾವ ಅಧಿಕವಾಗಿ ಬಾಧಿಸಿದೆ.

ಎಂ. ಸ್ಯಾಂಡ್‌ಗಿಲ್ಲ ಬೇಡಿಕೆ

ಎಂ. ಸ್ಯಾಂಡ್‌ ಮರಳಿಗೆ ಪರ್ಯಾಯವಾಗಿ ಬಳಕೆಯಾಗುತ್ತಿದ್ದರೂ ಅದನ್ನು ಬಳಕೆ ಮಾಡುವವರ ಸಂಖ್ಯೆ ವಿರಳ.

ಸರಕಾರಿ ಎಂಜಿನಿಯರ್‌ಗಳೇ ಎಂ. ಸ್ಯಾಂಡ್‌ ಅಳವಡಿಕೆಗೆ ಮಾನ್ಯತೆ ನೀಡುತ್ತಿಲ್ಲ ಎಂದು ಗುತ್ತಿಗೆದಾರರೋರ್ವರು ಹೇಳುತ್ತಾರೆ. ಎಂ.ಸ್ಯಾಂಡ್‌ ಧೂಳಿನಂತಿದ್ದು, ಅದರ ಗುಣಮಟ್ಟವೂ ಚೆನ್ನಾಗಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

  • ರಾಮಚಂದ್ರ ಬರೆಪ್ಪಾಡಿ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.