ಮೋಜಿಗಾಗಿ ಯುದ್ಧ ಹಡಗು ಬಳಕೆ
ರಾಜೀವ್ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯಿಂದ ಹೊಸ ಆರೋಪ
Team Udayavani, May 9, 2019, 6:28 AM IST
ಹೊಸದಿಲ್ಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ತಮ್ಮ ವೈಯಕ್ತಿಕ ಟ್ಯಾಕ್ಸಿಯ ರೀತಿ ಐಎನ್‌ಎಸ್ ವಿರಾಟ್ ಯುದ್ಧ ಹಡಗನ್ನು ಮೋಜಿಗಾಗಿ ಬಳಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೊಸ ಆರೋಪ ಮಾಡಿದ್ದಾರೆ. ಹೊಸ ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, 1988ರಲ್ಲಿ ಲಕ್ಷದ್ವೀಪದಲ್ಲಿ 10 ದಿನಗಳ ಖಾಸಗಿ ಪ್ರವಾಸ ಕೈಗೊಂಡಿದ್ದ ರಾಜೀವ್, ತಮ್ಮ ಪ್ರಯಾಣಕ್ಕೆ ಐಎನ್‌ಎಸ್ ವಿರಾಟ್ ಬಳಸಿದ್ದರು. ಇವರೊಂದಿಗೆ ಇಟಲಿಯ ಪ್ರಜೆಗಳೂ ಇದ್ದರು. ಯುದ್ಧ ಹಡಗಿನಲ್ಲಿ ವಿದೇಶಿ ಪ್ರಜೆಗಳನ್ನು ಕರೆದುಕೊಂಡು ಹೋಗುವ ಮೂಲಕ ದೇಶದ ಭದ್ರತೆಯನ್ನೇ ರಾಜೀವ್ ಹರಾಜಿಗಿಟ್ಟಿದ್ದರು ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.
ಪ್ರಾಮಾಣಿಕ ಎಂದು ತಮ್ಮ ಹೊಗಳುಭಟರಿಂದ ಕರೆಸಿ ಕೊಂಡಿದ್ದ ರಾಜೀವ್ ಗಾಂಧಿ ಕೊನೆಗೆ ಭ್ರಷ್ಟಾಚಾರಿ ನಂ.1 ಆಗಿದ್ದರು ಎಂದು ಇತ್ತೀಚೆಗಷ್ಟೇ ಮಾಡಿದ ಆರೋಪ ಭಾರಿ ಚರ್ಚೆಗೀಡಾಗಿರುವ ಮಧ್ಯೆಯೇ ಇನ್ನೊಂದು ಗಂಭೀರ ಆರೋಪವನ್ನು ಮೋದಿ ಮಾಡಿದ್ದಾರೆ.
ದಿಲ್ಲಿಯಲ್ಲಿ ಮೇ 12 ರಂದು ಮತದಾನ ನಡೆಯಲಿದ್ದು, ಬುಧವಾರ ಮೋದಿ ಮೊದಲ ರ್ಯಾಲಿ ನಡೆಸಿದ್ದಾರೆ. ಇದೇ ವೇಳೆ ದ್ವೇಷವನ್ನು ಹರಡುವ ಪ್ರಧಾನಿ ನರೇಂದ್ರ ಮೋದಿಗೆ ಪ್ರೀತಿಯನ್ನು ನೀಡುತ್ತೇವೆ ಎಂದು ಹೇಳಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಮೋದಿ ತಿರುಗೇಟು ನೀಡಿದ್ದಾರೆ.
ಕುರುಕ್ಷೇತ್ರದಲ್ಲಿ ಮಾತನಾಡಿದ ಪ್ರಧಾನಿ ‘ಕಾಂಗ್ರೆಸ್ ನಾಯಕರೊಬ್ಬರು ನನ್ನನ್ನು ಕೀಟ, ಮತ್ತೂಬ್ಬರು ಹುಚ್ಚು ನಾಯಿ, ಭಸ್ಮಾಸುರ, ವಿದೇಶಾಂಗ ಸಚಿವರಾಗಿದ್ದ ನಾಯಕರೊಬ್ಬರು ಮಂಗ, ಮತ್ತೂಬ್ಬ ನಾಯಕರು ದಾವೂದ್ ಇಬ್ರಾಹಿಂ ಎಂದು ಜರೆದಿದ್ದಾರೆ. ಅವರು ನನ್ನ ತಾಯಿಯನ್ನೂ ಬಿಡಲಿಲ್ಲ. ಪ್ರಧಾನಿಯಾದ ಬಳಿಕ ನನ್ನ ತಂದೆ ಯಾರು ಎಂದು ಪ್ರಶ್ನೆ ಮಾಡಿದವರು ಇದ್ದಾರೆ’ ಎಂದು ಲಘುವಾಗಿಯೇ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತಗೆದುಕೊಂಡಿದ್ದಾರೆ. ತಮ್ಮನ್ನು ತುಂಡು ತುಂಡು ಮಾಡಬೇಕು ಎಂದು ಹೇಳಿದವರಿಗೆ ಕಾಂಗ್ರೆಸ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದೆ ಎಂದು ದೂರಿದ್ದಾರೆ.
ಜೈಲಿನ ಬಳಿಗೆ ತಂದಿದ್ದೇನೆ: ಫತೇಪುರದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಈ ಚೌಕಿದಾರ ರೈತರ ಭೂಮಿ ಕಬಳಿಸಿದ ವ್ಯಕ್ತಿ (ರಾಬರ್ಟ್ ವಾದ್ರಾ)ಯನ್ನು ಜೈಲಿನ ಬಳಿಗೆ ಕರೆತಂದಿದ್ದೇನೆ. ಇದೀಗ ಆತ ಜಾಮೀನು ಪಡೆಯಲು ಕೋರ್ಟ್, ಜಾರಿ ನಿರ್ದೇಶನಾಲಯ ಕಚೇರಿಗಳಿಗೆ ಅಲೆಯುತ್ತಿದ್ದಾನೆ ಎಂದು ಲೇವಡಿ ಮಾಡಿದ್ದಾರೆ. ನಿಮ್ಮ ಆಶೀರ್ವಾದದಿಂದ ಈ ಚೌಕಿದಾರ ರೈತರನ್ನು ಲೂಟಿ ಮಾಡಿದವರನ್ನು ಜೈಲಿನ ಅಂಚಿಗೆ ಕರೆ ತಂದಿದ್ದಾನೆ ಎಂದು ಪ್ರಧಾನಿ ಹೇಳಿಕೊಂಡಿದ್ದಾರೆ.
ಬಿಜೆಪಿ ವಿರುದ್ಧ ಕ್ವಿಟ್ ಇಂಡಿಯಾ ಚಳವಳಿ
1942 ರಲ್ಲಿ ಬ್ರಿಟಿಷರ ವಿರುದ್ಧ ಹೋರಾಡಲು ಕ್ವಿಟ್ ಇಂಡಿಯಾ ಚಳವಳಿ ನಡೆಸಲಾಗಿತ್ತು, ಈಗ ನಾವು ಬಂಡವಾಳಶಾಹಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಲು ಹೋರಾಟ ನಡೆಸುತ್ತಿದ್ದೇವೆ ಎಂದು ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ. ಮಿಡ್ನಾಪುರದ ದೆಬ್ರಾದಲ್ಲಿ ಮಾತನಾಡಿದ ಅವರು ದೇಶದಲ್ಲಿ ಸದ್ಯ ತುರ್ತು ಪರಿಸ್ಥಿತಿ ಸನ್ನಿವೇಶವಿದೆ. ಸಾರ್ವಜನಿಕವಾಗಿ ಮಾತನಾಡಲೂ ಜನ ಹೆದರುವಂತಾಗಿದೆ. ಬಂಡವಾಳಶಾಹಿ ಹಾಗೂ ಬೆದರಿಕೆ ತಂತ್ರವನ್ನು ನಿಲ್ಲಿಸಿ ಎಂದು ದೀದಿ ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್, ನೀವು ಎಲ್ಲ ಮಿತಿಯನ್ನೂ ಮೀರಿದ್ದೀರಿ. ಆದರೆ ನೆನಪಿಡಿ, ನೀವು ಒಂದು ರಾಜ್ಯದ ಮುಖ್ಯಮಂತ್ರಿ, ಅವರು ಪ್ರಧಾನ ಮಂತ್ರಿ. ನಾಳೆ ನೀವು ಅವರೊಂದಿಗೆ ಮಾತನಾಡಬೇಕಾಗುತ್ತದೆ ಎಂದಿದ್ದಾರೆ.
ಬಿಎಸ್‌ಪಿ ನಾಯಕಿ ಮಾಯಾವತಿ ಪ್ರಧಾನಿಯಾದರೆ ಅಭ್ಯಂತರವಿಲ್ಲ ಎಂದು ಎಸ್‌ಪಿ ಅಧ್ಯಕ್ಷ ಅಖೀಲೇಶ್ ಯಾದವ್ ಹೇಳಿದ್ದಾರೆ. ಜತೆಗೆ ಎಸ್‌ಪಿ-ಬಿಎಸ್‌ಪಿ ನಡುವೆ ಹಿತಾಸಕ್ತಿಗಳ ಸಂಘರ್ಷ ಉಂಟಾಗುವುದಿಲ್ಲ ಎಂದಿದ್ದಾರೆ. ‘ಮುಂಬಯಿ ಮಿರರ್’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮಾಯವತಿ ನಾನು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗುವುದನ್ನೂ ಎದುರು ನೋಡುತ್ತಿದ್ದಾರೆ ಎಂದಿದ್ದಾರೆ. ಹಿಂದಿನ ಸಂದರ್ಭಗಳಲ್ಲಿ ಎರಡೂ ಪಕ್ಷಗಳ ನಡುವೆ ಉತ್ತಮ ಬಾಂಧವ್ಯ ಇರಲಿಲ್ಲ. ಈಗ ಇದೆ ಎಂದಿದ್ದಾರೆ. ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಹಿಂದಿನಿಂದ ಕೈಜೋಡಿಸಿದ್ದು, ಮಾಯಾವತಿಗೆ ಮೋಸ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸುತ್ತಿದ್ದಂತೆಯೇ ಅಖೀಲೇಶ್ ಈ ಹೇಳಿಕೆ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.