ಸವಣೂರು: ಪುಣ್ಚಪ್ಪಾಡಿ – ಓಡಂತರ್ಯ ಕಾಲನಿಗಿಲ್ಲ ನೀರು

ಬರಿದಾದ ಜಾಕ್‌ವೆಲ್, ಗೌರಿ ಹೊಳೆಯಲ್ಲೂ ನೀರಿಲ್ಲ; ಸಾರ್ವಜನಿಕರ ಪರದಾಟ

Team Udayavani, May 9, 2019, 7:09 AM IST

22

ಸವಣೂರು: ಕಳೆದ ವರ್ಷ ಮೇ ತಿಂಗಳ ಆರಂಭದಲ್ಲೇ ಮಳೆ ಸುರಿದಿದೆ. ಆದರೆ ಈ ಬಾರಿ ಮಳೆಯ ಬದಲು ಬಿಸಿಲಿನ ತೀವ್ರತೆ ದಿನೇ ದಿನೇ ಏರುತ್ತಿದೆ. ಎಲ್ಲೆಡೆ ಕುಡಿಯುವ ನೀರಿಗೂ ತತ್ವಾರ. ಜಾಕ್‌ವೆಲ್ ನಂಬಿದ್ದ ಸವಣೂರು ಗ್ರಾ.ಪಂ. ವ್ಯಾಪ್ತಿಯ ಪುಣ್ಚಪ್ಪಾಡಿ ಗ್ರಾಮದ ಓಡಂತರ್ಯ ಪರಿಶಿಷ್ಟ ಜಾತಿ ಕಾಲನಿಯ ಜನತೆ ಕುಡಿಯುವ ನೀರಿಗಾಗಿ ಅಲೆದಾಡುವ ಸ್ಥಿತಿ ಬಂದಿದೆ.

ಓಡಂತರ್ಯದಲ್ಲಿ ಹರಿಯುತ್ತಿರುವ ಗೌರಿಹೊಳೆಯಲ್ಲಿ ಇಲ್ಲಿನ ನಿವಾಸಿಗಳಿಗೆ ಕೃಷಿ ಹಾಗೂ ಕುಡಿಯುವ ನೀರಿನ ಉದ್ದೇಶಕ್ಕಾಗಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಜಾಕ್‌ವೆಲ್ ನಿರ್ಮಾಣ ಮಾಡಲಾಗಿದೆ. ಈ ಜಾಕ್‌ವೆಲ್ನಲ್ಲಿ ಮಾರ್ಚ್‌ ಅಂತ್ಯದಲ್ಲೇ ನೀರು ಬತ್ತಿ ಹೋಗಿದೆ. ಹೊಳೆಯಲ್ಲಿಯೂ ನೀರು ಬತ್ತಿ ಹೋಗಿದೆ.

ಜಾಕ್‌ವೆಲ್ ಅನ್ನು ನಿಗದಿತ ಪ್ರಮಾಣದಲ್ಲಿ ಆಳ ಮಾಡದೇ ಇರುವುದರಿಂದ ನೀರಿನ ಸಮಸ್ಯೆ ಎದುರಾಗಿದೆ. ಈ ಕುರಿತು ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರನಲ್ಲೇ ಇಲ್ಲಿನ ಕಾಲನಿ ಜನತೆ 2 ವರ್ಷಗಳ ಹಿಂದೆಯೇ ಕಾಮಗಾರಿ ನಡೆಸುವಾಗ ಹೇಳಿದ್ದರೂ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಜಾಕ್‌ವೆಲ್ ನಂಬಿ ಕೆಟ್ಟೆವು
ಹೊಳೆಯಲ್ಲಿ ನಿರ್ಮಿಸಿದ ಜಾಕ್‌ವೆಲ್ ನಂಬಿ 30 ಸಾವಿರಕ್ಕೂ ಹೆಚ್ಚು ಖರ್ಚು ಮಾಡಿ ಪೈಪ್‌ ಇನ್ನಿತರ ಅಗತ್ಯ ವಸ್ತುಗಳನ್ನು ಹಾಕಿದ್ದೇವೆ. ಈಗ ನೀರಿಲ್ಲದೆ ಪರಿತಪಿಸುವಂತಾಗಿದೆ ಎನ್ನುತ್ತಾರೆ ಬಳಕೆದಾರರು.

ಈ ಜಾಕ್‌ವೆಲ್ ನಂಬಿದರೆ ಕಷ್ಟ. ಒಂದೂವರೆ ತಿಂಗಳಿನಿಂದ ಬೇರೆ ಕಡೆಗಳಿಂದ ನೀರು ತರುತ್ತಿದ್ದೇವೆ. ಈಗ ಅಲ್ಲೂ ನೀರಿಲ್ಲ. ಮಳೆ ಬಾರದಿದ್ದರೆ ಕುಡಿಯುವುದಕ್ಕೂ ನೀರಿಲ್ಲ. ಕೊಳವೆ ಬಾವಿ ಕೊರೆಯಿಸಿದರೆ ಪರಿಹಾರ ಸಾಧ್ಯ. ಎಂಜಿನಿಯರ್‌ ನಿರ್ಲಕ್ಷ್ಯದಿಂದ ಈ ಸಮಸ್ಯೆಯಾಗಿದೆ ಎನ್ನುತ್ತಾರೆ ನೀರು ಬಳಕೆದಾರ ಧನರಾಜ್‌.

ಎಂಜಿನಿಯರ್‌ ನಿರ್ಲಕ್ಷ್ಯ
ಗುತ್ತಿಗೆದಾರರು ಜಾಕ್‌ವೆಲ್ ನಿರ್ಮಾಣ ಕಾಮಗಾರಿ ಮಾಡುವ ಸಮಯದಲ್ಲಿ ಸರಿಯಾಗಿ ಆಳ ಮಾಡಿಲ್ಲ. ಕಲ್ಲನ್ನು ಒಡೆಯದೆ ಹಾಗೇ ಬಿಟ್ಟಿದ್ದಾರೆ. ಇದರಿಂದ ಭವಿಷ್ಯದಲ್ಲಿ ಸಮಸ್ಯೆಯಾಗಲಿದೆ ಎನ್ನುವುದನ್ನು ಇಲಾಖೆ ಎಂಜಿನಿಯರ್‌ ಗಮನಕ್ಕೆ ತಂದಿದ್ದೇವೆ. ಆದರೆ ಅವರು ಕಾಮಗಾರಿ ಸ್ಥಳಕ್ಕೆ ಬಾರದೇ ನಿರ್ಲಕ್ಷ್ಯ ವಹಿಸಿದ್ದರಿಂದ ಈ ಸಮಸ್ಯೆಯಾಗಿದೆ.
– ನಾಗೇಶ್‌ ಓಡಂತರ್ಯ ಗ್ರಾ.ಪಂ. ಸದಸ್ಯ

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Punjalkatte: ರಾಷ್ಟ್ರೀಯ ಹೆದ್ದಾರಿ ಬದಿ ಕಸದ ರಾಶಿ; ಕ್ರಮಕ್ಕೆ ಆಗ್ರಹ

4

Uppinangady: ಪ್ರವಾಸಿ ಮಂದಿರ ಜಾಗದಲ್ಲಿ ಬಸ್‌ ನಿಲ್ದಾಣ?

3

Kadaba: ಮರ್ದಾಳ ಜಂಕ್ಷನ್‌; ಸ್ಪೀಡ್‌ ಬ್ರೇಕರ್‌ ಅಳವಡಿಕೆ

2

Bantwal: ಬಿ.ಸಿ.ರೋಡ್‌ ಸರ್ಕಲ್‌ ಅಡ್ಡಾದಿಡ್ಡಿ!

POlice

Sullia: ಮಹಿಳೆ ಶೌಚಾಲಯದಲ್ಲಿದ್ದ ವೇಳೆ ಫೋಟೋ ತೆಗೆದು ಕಿಡಿಗೇಡಿ ಪರಾರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

ಕಾರ್ಕಳ ನಗರದಲ್ಲೂ ನೆಟ್‌ ಕಿರಿಕಿರಿ!

8

Editorial: ಕುಂದಾಪುರದ ಹೆದ್ದಾರಿ ಸಮಸ್ಯೆ ಸರಿಪಡಿಸಿ

7

Mulki: ರಾಷ್ಟ್ರೀಯ ಹೆದ್ದಾರಿ; ಶೀಘ್ರ ಸರ್ವಿಸ್‌ ರಸ್ತೆ ಕಾಮಗಾರಿ

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

6

Editorial: ಸಂಚಾರ, ಪಾರ್ಕಿಂಗ್‌; ಸಮನ್ವಯದ ಕ್ರಮ ಆಗಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.