ಜವಾಬ್ದಾರಿ ಹಂಚಿಕೆ; ಕೈ ಮಹತ್ವದ ಸಭೆ


Team Udayavani, May 9, 2019, 11:09 AM IST

hub-1

ಹುಬ್ಬಳ್ಳಿ: ಕುಂದಗೋಳ ಉಪಚುನಾವಣೆ ಪ್ರಚಾರ ಹಾಗೂ ಪಕ್ಷದ ಮುಖಂಡರಿಗೆ ಹೊಣೆಗಾರಿಕೆ ನೀಡುವ ಕುರಿತು ಸಚಿವ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಇಲ್ಲಿನ ಕಾಟನ್‌ ಕೌಂಟಿ ಕ್ಲಬ್‌ನಲ್ಲಿ ಬುಧವಾರ ಸಭೆ ನಡೆದಿದ್ದು, ಕಾರ್ಯ ನಿರ್ವಹಣೆ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.

ಕ್ಷೇತ್ರ ವ್ಯಾಪ್ತಿಯ ಗ್ರಾಪಂಗಳಿಗೆ ನಿಯೋಜಿಸಿರುವ ಕೆಪಿಸಿಸಿ ಕಾರ್ಯದರ್ಶಿಗಳಿಗೆ ಮತಯಾಚನೆ ಹಾಗೂ ಪ್ರಚಾರ ನಡೆಸುವ ಕುರಿತು ಸಚಿವರಾದ ಡಿ.ಕೆ. ಶಿವಕುಮಾರ ಹಾಗೂ ಸತೀಶ ಜಾರಕಿಹೊಳಿ ಸಲಹೆ ಸೂಚನೆ ನೀಡಿದರು. ಈಗಾಗಲೇ ಪ್ರತಿ ಗ್ರಾಪಂಗಳಿಗೆ ಶಾಸಕರನ್ನು ನಿಯೋಜಿಸಿದ್ದು, ವೇದಿಕೆ ಸಭೆಗಳಿಗೆ ಹೆಚ್ಚಿನ ಒತ್ತು ನೀಡುವ ಬದಲು ಪ್ರತಿ ಬೂತ್‌ಗಳಲ್ಲಿ ಮತಯಾಚಿಸಬೇಕು. ಶಾಸಕರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಸಂಪರ್ಕ ಕೊಂಡಿಯಾಗಿ ಕೆಲಸ ಮಾಡಬೇಕು ಎಂದು ಸೂಚಿಸಲಾಗಿದೆ.

ನಿತ್ಯ ವರದಿ ನೀಡಬೇಕು: ಕೆಪಿಸಿಸಿ ಕಾರ್ಯದರ್ಶಿಗಳು, ಜಿಪಂ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಮೇಯರ್‌ಗಳಿಗೆ ಗ್ರಾಪಂ ಹೊಣೆಗಾರಿಕೆ ನೀಡಲಾಗಿದ್ದು, ಜವಾಬ್ದಾರಿ ವಹಿಸಿರುವ ಗ್ರಾಪಂ ವ್ಯಾಪ್ತಿಯ ಬೂತ್‌ಗಳಿಗೆ ತೆರಳಿ ಪ್ರಚಾರ ಕೈಗೊಳ್ಳಬೇಕು. ಪ್ರಚಾರದ ನಿತ್ಯದ ವಿದ್ಯಮಾನಗಳ ಕುರಿತು ವರದಿ ನೀಡಬೇಕು. ಕಾಂಗ್ರೆಸ್‌-ಜೆಡಿಎಸ್‌ ಎಂಬ ಭಿನ್ನಾಭಿಪ್ರಾಯ ಮರೆತು ಎಚ್ಚರ ವಹಿಸಿ ಕಾರ್ಯ ನಿರ್ವಹಿಸಬೇಕು. ಸ್ಥಳೀಯವಾಗಿ ಎರಡೂ ಪಕ್ಷದ ಕಾರ್ಯಕರ್ತರ ನಡುವಿನ ವೈಮನಸ್ಸು ಪರಿಹರಿಸಬೇಕು. ಸ್ಥಳೀಯ ಮುಖಂಡರ ಸಲಹೆ-ಮಾರ್ಗದರ್ಶನ ಪಡೆಯಬೇಕೆಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಕ್ರಮದ ಚರ್ಚೆ: ಪಕ್ಷದಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗು ವವರ ವಿರುದ್ಧ ಮೌನ ತಾಳುವ ಬದಲು, ಚುನಾವಣೆ ಮುಗಿದ ನಂತರ ಕಟ್ಟುನಿಟ್ಟಿನ ಶಿಸ್ತು ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತಾಗಿಯೂ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಹೇಳಲಾಗುತ್ತಿದೆ. ಎಐಸಿಸಿ ಕಾರ್ಯದರ್ಶಿ ವಿಶ್ವನಾಥ, ಪ್ರಸಾದ ಅಬ್ಬಯ್ಯ, ಶಾಸಕಿ ಅಂಜಲಿ ನಿಂಬಾಳ್ಕರ್‌, ಕಾಂಗ್ರೆಸ್‌ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ| ಪುಷ್ಪಾ ಅಮರನಾಥ ಇನ್ನಿತರರು ಸಭೆಯಲ್ಲಿದ್ದರು.

ಸಿದ್ದರಾಮಯ್ಯ ನಮ್ಮ ನಾಯಕ: ಸತೀಶ

ಸಿದ್ದರಾಮಯ್ಯನವರು ಮುಖ್ಯ ಮಂತ್ರಿಯಾಗಬೇಕು ಎನ್ನುವುದು ಸದ್ಯ ಚರ್ಚೆಯ ಪ್ರಶ್ನೆಯಲ್ಲ. ಅವರು ನಮ್ಮ ನಾಯಕರು. ಅದರಲ್ಲಿ ಎರಡು ಮಾತಿಲ್ಲ. ಮುಂದೆ ಸಿಎಂ ಆಗುವ ಕುರಿತ ಚರ್ಚೆ ಈಗ ಪ್ರಸ್ತುತವಲ್ಲ. ಮುಂದಿನ ದಿನಗಳಲ್ಲಿ ನೋಡೋಣ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ. ಕುಮಾರಸ್ವಾಮಿ ಅವರಿಗೆ ನಮ್ಮ ಹೈಕಮಾಂಡ್‌ ಆಶೀರ್ವಾದ ಮಾಡಿ ಸಹಕಾರ ನೀಡುವಂತೆ ನಮಗೆ ಸೂಚಿಸಿದೆ ಎಂದು ಸ್ಪಷ್ಟಪಡಿಸಿದರು. ಕುಂದಗೋಳ ಉಪ ಚುನಾವಣೆಯ ಪ್ರಚಾರ ಜವಾಬ್ದಾರಿ ಹಂಚಿಕೆ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಚುನಾವಣೆ ಮುಗಿಯುವವರೆಗೂ ನಾನು ಇಲ್ಲೇ ಇರುತ್ತೇನೆ. ಇದರ ನಡುವೆ 2 ದಿನ ಚಿಂಚೋಳಿಗೆ ಹೋಗುತ್ತೇನೆ. ಚಿಂಚೋಳಿ-ಕುಂದಗೋಳದಲ್ಲಿ ನಮ್ಮ ಗೆಲುವು ನಿಶ್ಚಿತ. ಈ ಎರಡೂ ಕ್ಷೇತ್ರಗಳ ಮೇಲೆ ಸರಕಾರ ನಿಂತಿದೆ ಎಂಬುದು ಸರಿಯಲ್ಲ ಎಂದರು.

ಕಾರ್ಯಕರ್ತರೊಂದಿಗೆ ಸಮಾಲೋಚನೆ

ಕುಂದಗೋಳ: ಈ ಚುನಾವಣೆ ಮಹತ್ವದ್ದಾಗಿದ್ದು, ಕಾಂಗ್ರೆಸ್‌ನ ಪ್ರತಿ ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ಗೆಲುವಿಗೆ ಕಾರಣರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದರು. ಪಟ್ಟಣದ ಅರವಿಂದ ಕಟಗಿ ಅವರ ಮನೆಯಲ್ಲಿ ನಡೆದ ಬೂತ್‌ಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಶಿವಳ್ಳಿ ಅವರು ಪಕ್ಷ ಹಾಗೂ ಕಾರ್ಯಕರ್ತರ ನಡುವೆ ಉತ್ತಮ ಬಾಂಧವ್ಯ ಹೊಂದಿದ್ದರು. ಅಲ್ಲದೆ ಎಲ್ಲ ಕಷ್ಟಗಳಿಗೆ ಸ್ಪಂದಿಸುವ ನಾಯಕರಾಗಿದ್ದರು. ಅವರ ಪತ್ನಿಯಾದ ಕುಸುಮಾ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು. ಅರವಿಂದ ಕಟಗಿ, ಜಗದೀಶ ಉಪ್ಪಿನ, ಸುರೇಶ ಗಂಗಾಯಿ, ಬಸವರಾಜ ವಟವಟಿ, ಇಸೂಫ ಚಡ್ಡಿ, ಅಜೀಜ ಕ್ಯಾಲ್ಗೊಂಡ ಇನ್ನಿತರರಿದ್ದರು.
ಕುಸುಮಾ ಗೆಲ್ಲಿಸುವುದೇ ಶಿವಳ್ಳಿ ಅವರಿಗೆ ನಿಜವಾದ ಶ್ರದ್ಧಾಂಜಲಿ
ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದಲ್ಲಿ ಬುಧವಾರ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು, ಸಿ.ಎಸ್‌. ಶಿವಳ್ಳಿ ಅವರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯ ನೋಡಿಕೊಂಡು ನಮ್ಮ ಅಭ್ಯರ್ಥಿ ಕುಸುಮಾವತಿ ಅವರಿಗೆ ಮತ ನೀಡುವ ಮೂಲಕ ಬಹುಮತದಿಂದ ಆರಿಸಿ ತರಬೇಕು ಎಂದರು. ಹಳಿಯಾಳ ಕ್ಷೇತ್ರದಿಂದ ಎಂಟು ಬಾರಿ ಗೆದ್ದು, ಎಂಟು ಜನ ಮುಖ್ಯಮಂತ್ರಿಗಳೊಂದಿಗೆ ಆಡಳಿತ ಮಾಡಿದ್ದೇನೆ. ಆದರೆ ಕಳೆದ ಐದು ವರ್ಷಗಳಲ್ಲಿ ಅತೀ ಹೆಚ್ಚು ಅಭಿವೃದ್ಧಿ ಕಾರ್ಯ ನಡೆದಿರುವುದು ಸಿದ್ದರಾಮಯ್ಯ ಸರಕಾರದಲ್ಲಿ. ರೈತರ 42 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಿರುವ ಮೊದಲ ಸರಕಾರ ಮೈತ್ರಿ ಸರಕಾರ ಎಂದು ಹೆಮ್ಮೆಯಿಂದ ಹೇಳಬಹುದು ಎಂದರು.

ಶಿವಳ್ಳಿ ಅವರು ಸಚಿವ ಸ್ಥಾನ ಪಡೆಯಬೇಕೆಂಬುದು ಬಹುದಿನದ ಆಸೆಯಾಗಿತ್ತು. ಆದರೆ ಅವರಿಗೆ ಸಚಿವ ಸ್ಥಾನ ಬಹಳ ತಡವಾಗಿ ಸಿಕ್ಕಿತು. ಹೋರಾಟದಿಂದಲೇ ಬೆಳೆದು ಬಂದ ಶಿವಳ್ಳಿ ಅವರು ಜನರ ಶ್ರೇಯೋಭಿವೃದ್ಧಿಗೆ ಸದಾ ಮುಂದಿದ್ದರು. ಅಂತಹ ಮಹಾನ್‌ ವ್ಯಕ್ತಿಯನ್ನು ಕಳೆದುಕೊಂಡಿದ್ದು ನಮ್ಮ ದುರ್ದೈವ. ಶಿವಳ್ಳಿ ಅವರಿಗೆ ನಿಜವಾದ ಶ್ರದ್ಧಾಂಜಲಿ ಸಲ್ಲಿಸಬೇಕೆಂದರೆ ಅವರ ಪತ್ನಿಯನ್ನು ಬಹುಮತದಿಂದ ಆರಿಸಿ ತರಬೇಕು ಎಂದು ಮನವಿ ಮಾಡಿದರು.

ಮಾಜಿ ಸಚಿವ ವಿನಯ ಕುಲಕರ್ಣಿ ಮಾತನಾಡಿ, ಕ್ಷೇತ್ರದಲ್ಲಿ ಅಪಾರ ಅಭಿವೃದ್ಧಿ ಕಾರ್ಯ ಮಾಡಿರುವ ಸಿ.ಎಸ್‌. ಶಿವಳ್ಳಿ ಅವರ ಹೆಸರು ಮತ್ತೆ ಬೆಳಗಬೇಕೆಂದರೆ ಅವರ ಪತ್ನಿಗೆ ಮತ ನೀಡಿ ಬಹುಮತದಿಂದ ಆರಿಸಿ ತರಬೇಕೆಂದು ಹೇಳಿದರು.

ಒಂದೇ ಮನೆಗೆ ಎರಡು ಪಕ್ಷಗಳ ಮುಖಂಡರು!

ಬುಧವಾರ ಅಂಚಟಗೇರಿ ಗ್ರಾಮದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಪರ ಹಾಗೂ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆಗೆ ಆಗಮಿಸಿದ್ದ ಉಭಯೇತರ ಮುಖಂಡರು ಒಂದೇ ಮನೆಗೆ ಹೋಗಿ ಇರುಸು ಮುರುಸುಗೊಂಡ ಘಟನೆ ನಡೆಯಿತು. ಮೊದಲೇ ಪ್ರಚಾರಕ್ಕೆ ಆಗಮಿಸಿದ್ದ ಬಿಜೆಪಿ ಮುಖಂಡರು ತಮ್ಮ ಪ್ರಚಾರ ಕಾರ್ಯ ಮುಗಿಸಿ ತೆರಳುವುದಕ್ಕಿಂತ ಮುಂಚೆ ಗ್ರಾಮದಲ್ಲಿನ ಮನೆಗೆ ತೆರಳಿದ್ದರು. ನಂತರ ಪ್ರಚಾರಕ್ಕೆ ಆಗಮಿಸಿದ ಕಾಂಗ್ರೆಸ್‌ ಮುಖಂಡರನ್ನು ಅದೇ ಸ್ಥಳಕ್ಕೆ ಕರೆದುಕೊಂಡು ಹೋಗಲಾಯಿತು. ಆದರೆ ಮನೆ ಕಾಂಪೌಂಡ್‌ವರೆಗೆ ತೆರಳಿದ ಆರ್‌.ವಿ. ದೇಶಪಾಂಡೆ, ವಿನಯ ಕುಲಕರ್ಣಿ ಅಲ್ಲಿಂದ ಮರಳಿ ಬಂದು ಬಳಿಕ ಮತ್ತೂಂದು ಮನೆ ಆವರಣದಲ್ಲಿ ನಿಂತು ಸಭೆಯನ್ನುದ್ದೇಶಿಸಿ ಮಾತನಾಡಿ ತೆರಳಿದರು.

ಅಸಮಾಧಾನ ಅಖೈರು

ಕಾಂಗ್ರೆಸ್‌ನಲ್ಲಿ 30 ವರ್ಷಗಳಿಂದ ಸೇವೆ ಸಲ್ಲಿಸಿ ಪಕ್ಷದ ಹಲವು ಸ್ಥಾನಗಳನ್ನು ಪಡೆದುಕೊಂಡು ತಾಪಂ ಸದಸ್ಯರಾಗಿ ಆಯ್ಕೆಯಾಗಿದ್ದ ರುದ್ರಪ್ಪ ಬಿಡ್ನಾಳ ಅವರು ಮುಖಂಡರ ಮುಂದೆ ತಮ್ಮ ಅಸಮಾಧಾನ ಹೊರಹಾಕಿದರು. 30 ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ನಮ್ಮನ್ನು ಕಡೆಗಣನೆ ಮಾಡಲಾಗುತ್ತಿದೆ. ಆದ್ದರಿಂದ ಪಕ್ಷದ ಎಲ್ಲ ಕಾರ್ಯಚಟುವಟಿಕೆಗಳಿಂದ ದೂರ ಉಳಿಯಲಾಗಿತ್ತು. ಆದರೆ ಇಂದು ಹಿರಿಯ ನಾಯಕರು ಆಗಮಿಸಿ ಮಾತನಾಡಿದ್ದಕ್ಕಾಗಿ ವೇದಿಕೆಗೆ ಬಂದಿದ್ದೇನೆ ಎಂದು ಅಸಮಾಧಾನ ಹೊರಹಾಕಿದರು.

ಮಕ್ಕಳ ಬಳಕೆ

ಅಂಚಟಗೇರಿ ಗ್ರಾಮದಲ್ಲಿ ಬುಧವಾರ ಮೈತ್ರಿ ಅಭ್ಯರ್ಥಿ ಕುಸುಮಾವತಿ ಪರ ಪ್ರಚಾರ ಸಮಯದಲ್ಲಿ ಚಿಕ್ಕಮಕ್ಕಳು ಕೊರಳಿಗೆ ಶಾಲು ಹಾಕಿಕೊಂಡು ಪ್ರಚಾರ ನಡೆಸುತ್ತಿರುವುದು ಕಂಡು ಬಂತು. ಮೆರವಣಿಗೆ ಮುಂಭಾಗದಲ್ಲಿಯೇ ಮಕ್ಕಳು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು.
ಬಿಜೆಪಿ ನಾಯಕರಿಂದ ಮನ ಬಂದಂತೆ ಹೇಳಿಕೆ: ಉಗ್ರಪ್ಪ

ಹುಬ್ಬಳ್ಳಿ: ಬಿಜೆಪಿ ನಾಯಕರು ಮಾನಸಿಕ ಸ್ಥಿಮಿತ ಕೊಳೆದುಕೊಂಡಿದ್ದು, ಮನಬಂದಂತೆ ಮಾತನಾಡುತ್ತಿದ್ದಾರೆ. ಇಂತಹವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆಂದು ಸಂಸದ ಉಗ್ರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಪ್ರಜಾಪ್ರಭುತ್ವ, ಸಂವಿಧಾನ ವ್ಯವಸ್ಥೆ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಹೀಗಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸಿದ್ದಾರೆ. ಸಮ್ಮಿಶ್ರ ಸರಕಾರ ಅಸ್ಥಿರಗೊಳಿಸುವ ಬಿಜೆಪಿ ಯತ್ನ ಫ‌ಲ ನೀಡಲ್ಲ. ಸರಕಾರ ಐದು ವರ್ಷ ಪೂರ್ಣಗೊಳಿಸಲಿದೆ ಎಂದರು.

ಮೋದಿ ಅಸಹಾಯಕತೆ: ಮಾಜಿ ಪ್ರಧಾನಿ ರಾಜೀವ್‌ ಗಾಂಧಿಯವರನ್ನು ಭ್ರಷ್ಟ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಸಹಾಯಕತೆ ಪ್ರದರ್ಶಿಸಿದ್ದಾರೆ. 62 ಕೋಟಿ ರೂ. ಬೋಫೋರ್ಸ್‌ ಹಗರಣದಲ್ಲಿ ರಾಜೀವಗಾಂಧಿ ಅವರ ಪಾತ್ರವಿಲ್ಲ ಎಂಬುದು ಸಾಬೀತಾಗಿದೆ. ರಫೇಲ್ ಹಗರಣ ಮರೆಮಾಚುವ ಕಾರಣಕ್ಕೆ ಮುಗಿದು ಹೋದ ಬೋಫೋರ್ಸ್‌ ವಿಚಾರ ಬಗ್ಗೆ ಪ್ರಧಾನಿ ಮಾತನಾಡುತ್ತಿದ್ದಾರೆಂದು ಹೇಳಿದರು.

ರಫೇಲ್ ಖರೀದಿಯಲ್ಲಿ ವಿಮಾನಗಳ ಸಂಖ್ಯೆ ಕಡಿಮೆ ಮಾಡುವುದರ ಜತೆಗೆ 526 ಕೋಟಿ ರೂ. ಮೌಲ್ಯದ ಯೋಜನೆಯನ್ನು 1570 ಕೋಟಿ ರೂ.ಗೆ ಹೆಚ್ಚಿಸಿರುವುದರಲ್ಲಿ ದೊಡ್ಡ ಹಗರಣ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ. ವಿಮಾನಗಳನ್ನು ಕಡಿಮೆ ಮಾಡಿ ದೇಶದ ಭದ್ರತೆಯನ್ನು ಅಲಕ್ಷಿಸಲಾಗಿದೆ. ಜಗತ್ತು ಕಂಡ ಅತಿ ದುರ್ಬಲ ಹಾಗೂ ಭ್ರಷ್ಟ ಪ್ರಧಾನಿ ನರೇಂದ್ರ ಮೋದಿಯಾಗಿದ್ದಾರೆಂದು ಆರೋಪಿಸಿದರು.

ಪ್ರಧಾನಿ ಮೋದಿ ಅವರನ್ನು ಬಳಸಿ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರು ಚೌಕಿದಾರ್‌ ಚೋರ್‌ ಎಂಬ ಶಬ್ದ ಬಳಸಿರುವುದು ಅಸಾಂವಿಧಾನಿಕವಲ್ಲ. ಒಂದು ವೇಳೆ ಅದು ಅಸಾಂವಿಧಾನಿಕ ಪದವಾಗಿದ್ದರೆ ಹಕ್ಕುಚ್ಯುತಿ ಮಂಡಿಸಲಿ ಎಂದು ಉಗ್ರಪ್ಪ ಹೇಳಿದರು.

ಸಾವಿನಲ್ಲೂ ರಾಜಕಾರಣ ಶೋಭೆಯಲ್ಲ : ಡಿಕೆಶಿ

ಹುಬ್ಬಳ್ಳಿ: ಕಾರ್ಯಕ್ರಮ ಒತ್ತಡ, ಆರೋಗ್ಯ ಬಗ್ಗೆ ಕಾಳಜಿ ವಹಿಸದ ಕಾರಣದಿಂದ ಸಿ.ಎಸ್‌. ಶಿವಳ್ಳಿ ಅವರು ಅಕಾಲಿಕ ಮರಣಕ್ಕೆ ತುತ್ತಾಗಬೇಕಾಯಿತು. ಇದು ಇಡೀ ರಾಜ್ಯಕ್ಕೆ ಗೊತ್ತಿರುವ ವಿಚಾರ. ಆದರೆ ಶಾಸಕ ಶ್ರೀರಾಮುಲು ಇವರ ಸಾವಿನಲ್ಲೂ ರಾಜಕಾರಣ ಮಾಡುತ್ತಿರುವುದು ಶೋಭೆಯಲ್ಲ ಎಂದು ಸಚಿವ ಡಿ.ಕೆ. ಶಿವಕುಮಾರ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಭಾವನಾತ್ಮಕ ವಿಷಯಗಳನ್ನು ರಾಜಕೀಯವಾಗಿ ಮಾತನಾಡುವ ಮೂಲಕ ಜನಪ್ರತಿನಿಧಿಗಳು ತಮ್ಮ ಗೌರವ ಕಳೆದುಕೊಳ್ಳುತ್ತಿದ್ದಾರೆ. ಆರೋಪ ಮಾಡುವುದಕ್ಕೂ ಒಂದು ಮಿತಿಯಿರಬೇಕು ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಖುರ್ಚಿ ಖಾಲಿ ಇಲ್ಲ ಎನ್ನುವುದನ್ನು ಶ್ರೀರಾಮುಲು ಅರ್ಥ ಮಾಡಿಕೊಳ್ಳಬೇಕು. ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಐದು ವರ್ಷ ಪೂರ್ಣಗೊಳಿಸಲಿದೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಕೊಟ್ಟಿದ್ದಾರೆ. ಸರಕಾರ ಬೀಳಿಸಿ ಅಧಿಕಾರಕ್ಕೆ ಬರಬೇಕೆನ್ನುವ ಆಸೆಯಿದ್ದರೆ ಬಿಜೆಪಿಯವರು ಈಗಲೇ ಬಿಡುವುದು ಒಳಿತು. ಜನರಿಂದ ಮೆಚ್ಚುಗೆ ಗಳಿಸಲು ಬಾಯಿಗೆ ಬಂದಂತೆ ಮಾತನಾಡಿ ತೆಗಳಿಸಿಕೊಳ್ಳುವ ಕೆಲಸ ಶ್ರೀರಾಮುಲು ಅಣ್ಣಾರಿಂದ ಆಗಬಾರದು ಎಂದು ವ್ಯಂಗ್ಯವಾಡಿದರು.

ರಾಹುಲ್ ಗಾಂಧಿಯವರ ಆಜ್ಞೆಯ ಮೇರೆಗೆ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಹೈಕಮಾಂಡ್‌ ದೆಹಲಿಗೆ ಬರುವಂತೆ ಸೂಚನೆ ನೀಡಿತ್ತು. ಒಂದಿಷ್ಟು ವಿಶ್ರಾಂತಿ ಬೇಕೆಂದು ಕೇಳಿದ್ದೇನೆ. ಕೆಲಸದ ಒತ್ತಡದಿಂದ ಒಂದಿಷ್ಟು ಆರೋಗ್ಯದಲ್ಲಿ ಏರುಪೇರಾಗಿತ್ತು. ಮೇ 9ರಂದು ನಡೆಯುವ ಸಚಿವ ಸಂಪುಟ ಸಭೆಗೂ ನಾನು ಹೋಗುತ್ತಿಲ್ಲ ಎಂದರು.

 

ಟಾಪ್ ನ್ಯೂಸ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.