ಶಹಾಪುರ ನಗರಸಭೆ ಅಧಿಸೂಚನೆ ಪ್ರಕಟ
ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ•ಮೇ 16 ನಾಮಪತ್ರ ಸಲ್ಲಿಕೆಗೆ ಕೊನೆ ದಿನ
Team Udayavani, May 9, 2019, 1:05 PM IST
ಶಹಾಪುರ: ನಗರದ ತಹಶೀಲ್ದಾರ್ ಕಚೇರಿಯಲ್ಲಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ನಗರಸಭೆ ಚುನಾವಣೆ ಕುರಿತು ಸಮಗ್ರ ಮಾಹಿತಿ ನೀಡಿದರು
ಶಹಾಪುರ: ನಗರಸಭೆ ಚುನಾವಣೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಅಧಿಸೂಚನೆಯೊಂದಿಗೆ ಮೇ 9ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭಗೊಳ್ಳಲ್ಲಿದೆ. ಮೇ. 16 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರ ಪರಿಶೀಲನೆ ಮತ್ತು ಮೇ 20ರಂದು ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ತಿಳಿಸಿದರು.
ಬುಧವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಗರಸಭೆ ಚುನಾವಣೆ ಕುರಿತು ಸಮಗ್ರ ಮಾಹಿತಿ ವಿವರಿಸಿದರು.
ಮೇ 29ರಂದು ಚುನಾವಣೆ ನಡೆಯಲ್ಲಿದ್ದು, ಅಗತ್ಯ ಬಿದ್ದಲ್ಲಿ ಮುಂಜಾಗೃತವಾಗಿ ಮೇ 30ರಂದು ಮರು ಮತದಾನಕ್ಕೆ ದಿನ ನಿಗದಿ ಪಡಿಸಲಾಗಿದೆ.
ಮೇ 31ರಂದು ಫಲಿತಾಂಶ ಪ್ರಕಟಣೆ ಮಾಡಲಾಗುತ್ತದೆ. ಶಹಾಪುರ ನಗರದಲ್ಲಿ ಒಟ್ಟು 31 ವಾರ್ಡ್‌ಗಳಿದ್ದು 51 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಒಟ್ಟು 48,031. ಜನ ಮತದಾರರ ಹೊಂದಿದ್ದು, ಇದರಲ್ಲಿ ಪುರುಷರು 24.000, ಮಹಿಳೆಯರು 24.023 ಮತ್ತು ಇತರರು 8 ಜನ ಮತದಾರರಿದ್ದಾರೆ.
ನಾಮಪತ್ರಗಳನ್ನು ಸಲ್ಲಿಸುವಾಗ ಅಭ್ಯರ್ಥಿಯೊಂದಿಗೆ ಒಟ್ಟು 5 ಜನರಿಗೆ ಮಾತ್ರ ಅವಕಾಶವಿದ್ದು, ಅದಕ್ಕಿಂತ ಹೆಚ್ಚು ಜನರಿಗೆ ಅವಕಾಶವಿಲ್ಲ. ಪ್ರತಿ ಅಭ್ಯರ್ಥಿ ಸಾಮಾನ್ಯ ಸ್ಥಾನಕ್ಕೆ 2000 ರೂ. ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಒಂದು ಸಾವಿರ ರೂ. ಠೇವಣಿ ಸಂದಾಯ ಮಾಡಬೇಕು.
ಅಲ್ಲದೆ ರಾಷ್ಟ್ರೀಯ ಪಕ್ಷಗಳಿಂದ ಸ್ಪರ್ಧಿಸುವರರು ನಿಯಮನುಸಾರ ಅರ್ಜಿ ನಂ.ಬಿ. ಪಡೆದು ಭರ್ತಿ ಮಾಡಬೇಕು. ಅಂತಹ ಪಕ್ಷಗಳಿಂದ ಅಲ್ಲದ ಅಭ್ಯರ್ಥಿಗಳು ಘೋಷಣಾ ನೀಡಬೇಕು ಮತ್ತು ಎಲ್ಲಾ ಅಭ್ಯರ್ಥಿಗಳು ಮತಪತ್ರದಲ್ಲಿ ಮುದ್ರಿಸಲು ಅಭ್ಯರ್ಥಿಗಳು ಎರಡು ಭಾವಚಿತ್ರಗಳನ್ನು ನೀಡಬೇಕು ಎಂದು ತಿಳಿಸಿದರು.
ಅಲ್ಲದೆ ನಾಮಪತ್ರ ಸಲ್ಲಿಸುವ ಆಯಾ ವಾರ್ಡ್‌ಗಳಿಗೆ ಸಂಬಂಸಿದಂತೆ 01ರಿಂದ 06ರಂತೆ ಆಯಾ ವಾರ್ಡ್‌ಗಳ ನಾಮಪತ್ರ ಸ್ವೀಕರಿಸಲು ಒಟ್ಟು ಐದು ಕಚೇರಿಗಳನ್ನು ಗುರುತಿಸಲಾಗಿದೆ. ಆಯಾ ವಾರ್ಡ್‌ನವರು ಆಯಾ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಬೇಕು.
ಒಟ್ಟು ಐದು ಜನ ಚುನಾವಣೆ ಅಧಿಕಾರಿ, ಐದು ಜನ ಚುನಾವಣೆ ಸಹಾಯಕ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂಗಮೇಶ ಜಿಡಗಾ, ನಗರಸಭೆ ಪೌರಾಯುಕ್ತ ಬಸವರಾಜ ಶಿವಪೂಜೆ ಇದ್ದರು.
ಲೋಕಸಭೆ ಚುನಾವಣೆಯಲ್ಲಿ ಮತದಾರರ ಎಡಗೈಯ ತೋರು ಬೆರಳಿಗೆ ಶಾಹಿ ಹಚ್ಚಲಾಗಿತ್ತು. ಆ ಶಾಹಿ ಇನ್ನು ಹೋಗದಿರುವ ಕಾರಣ. ನಗರಸಭೆ ಚುನಾವಣೆಯಲ್ಲಿ ಪ್ರತಿ ಮತದಾರರಿಗೆ ಎಡಗೈಯ ಉಂಗುರ ಬೆರಳಿಗೆ ಶಾಹಿಯನ್ನು ಹಚ್ಚಲಾಗುತ್ತದೆ. ರಾಜಕೀಯ ಪಕ್ಷಗಳು ಪ್ರಚಾರ ಸಭೆ, ಸಮಾರಂಭ ನಡೆಸಬೇಕಿದ್ದಲ್ಲಿ ಕಡ್ಡಾಯವಾಗಿ ಚುನಾವಣೆ ಅಧಿಕಾರಿಗಳಿಂದ ಪರವಾನಿಗೆ ಪಡೆಯಬೇಕು.
•ಶಂಕರಗೌಡ ಸೋಮನಾಳ
ಸಹಾಯಕ ಆಯುಕ್ತರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Belthangady: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಬಲಿಪೂಜೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.