ಚಿಕಿತ್ಸೆಗೆ ಆರೋಗ್ಯ ಕಾರ್ಡ್‌ ಕಡ್ಡಾಯವಲ್ಲ


Team Udayavani, May 9, 2019, 3:00 PM IST

kol-2

ಕೋಲಾರ: ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆಯನ್ನು ಪಡೆದುಕೊಳ್ಳಲು ಆರೋಗ್ಯ ಕಾರ್ಡ್‌ ಕಡ್ಡಾಯವಲ್ಲ. ರೋಗಿಗಳು ತಮ್ಮ ಬಳಿ ಇರುವ ಪಡಿತರ ಚೀಟಿ ಅಥವಾ ಆಧಾರ್‌ ಕಾರ್ಡ್‌ ತೋರಿಸಿ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯಕುಮಾರ್‌ ತಿಳಿಸಿದರು.

ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆ ಇದಾಗಿದೆ. ಬಿಪಿಎಲ್ ಕಾರ್ಡ್‌ ಹೊಂದಿದ ಬಡವರಿಗೆ ವಾರ್ಷಿಕ 5 ಲಕ್ಷ ರೂವವರಿಗೆ ಉಚಿತವಾಗಿ ಹಾಗೂ ಎಪಿಎಲ್ ಕಾರ್ಡ್‌ ಹೊಂದಿದವರಿಗೆ ಶೇ.30ರಷ್ಟು ಚಿಕಿತ್ಸಾ ವೆಚ್ಚವನ್ನು ಭರಿಸಿ ಸುವರ್ಣ ಆರೋಗ್ಯ ಟ್ರಸ್ಟ್‌ ವತಿಯಿಂದ ನೋಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದರು.

ಕಾರ್ಡ್‌ಗೆ 10 ರೂ.ಶುಲ್ಕ: ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳು, ಆರ್‌.ಎಲ್.ಜಾಲಪ್ಪ ವೈದ್ಯಕೀಯ ಸಂಸ್ಥೆ, ನ್ಯೂ ಕೋಲಾರ್‌ ನರ್ಸಿಂಗ್‌ ಹೋಂ, ಮಾಲೂರಿನ ಸಂಜನಾ ಆಸ್ಪತ್ರೆ ಹಾಗೂ ಮುಳಬಾಗಿಲಿನ ಪೂರ್ಣಿಮಾ ಆಸ್ಪತ್ರೆಗಳು ಈ ಯೋಜನೆಯಡಿ ನೋಂದಾಯಿಸಿಕೊಂಡು ಚಿಕಿತ್ಸೆ ನೀಡಲಾಗುತ್ತದೆ. ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಕಾರ್ಡ್‌ ಹೊಂದಿದ್ದರೆ ಯೋಜನೆಯ ಸೇವೆಗಳನ್ನು ಸುಲಲಿತವಾಗಿ ಪಡೆದುಕೊಳ್ಳಬಹುದು. ಹಾಗಾಗಿ ಈ ಕಾರ್ಡ್‌ಗಳನ್ನು ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಮಟ್ಟದ ಸಾರ್ವಜನಿಕ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 10 ರೂ.ಶುಲ್ಕದೊಂದಿಗೆ ಬಿಳಿಯ ಹಾಳೆಯ ಮೇಲೆ ಮಾಹಿತಿ ಮುದ್ರಿಸಿ ನೀಡಲಾಗುತ್ತದೆ ಎಂದು ತಿಳಿಸಿದರು.

ಬೇಸಿಗೆಯಲ್ಲಿ ಆರೋಗ್ಯದ ಎಚ್ಚರವಿರಲಿ: ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ನೀಡಿದ ಸೇವೆಗಳಿಗಾಗಿ ಜಿಲ್ಲೆಯ ವ್ಯಾಪ್ತಿಯಲ್ಲಿ ಇರುವ ಸರ್ಕಾರಿ ಆಸ್ಪತ್ರೆಗಳಿಗೆ 28,17,200 ರೂ.ಗಳನ್ನು ಸುವರ್ಣ ಆರೋಗ್ಯ ಟ್ರಸ್ಟ್‌ ವತಿಯಿಂದ ಪಾವತಿಸಲಾಗಿದೆ. ಈ ಹಣವನ್ನು ಆಸ್ಪತ್ರೆಗಳ ಅಭಿವೃದ್ಧಿ ಮತ್ತು ಅವಶ್ಯಕ ಸಲಕರಣೆಗಳನ್ನು ಖರೀದಿಸಲು ಬಳಸಿಕೊಳ್ಳಲಾಗುವುದು. ಬೇಸಿಗೆ ಬಿಸಿಲಿನಲ್ಲಿ ತೀವ್ರತರ ಏರಿಕೆ ಕಾಣಿಸಿಕೊಳ್ಳುತ್ತಿದೆ. ಇದರಿಂದ ಸೂರ್ಯಾಘಾತ ಮತ್ತು ಉಷ್ಣಾಘಾತ ಆಗುವ ಸಾಧ್ಯತೆಗಳಿವೆ. ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅದರಂತೆ ಯಾವುದೇ ರೀತಿಯ ಸಮಸ್ಯೆಗಳು ಕಂಡು ಬಂದಿಲ್ಲಿ ನಿರ್ಲಕ್ಷ್ಯ ವಹಿಸದೆ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ವಿವರಿಸಿದರು.

140 ಕೇಂದ್ರಕ್ಕೆ ಅನುಮತಿ: ಸೇವಾಸಿಂಧು ಯೋಜನೆಯ ಜಿಲ್ಲಾ ಸಮನ್ವಯಾಧಿಕಾರಿ ವಿಶಾಲಾಕ್ಷಿ ಮಾತನಾಡಿ, ಜಿಲ್ಲೆಯಲ್ಲಿ ಆಯುಷ್ಮಾನ್‌ ಭಾರತ್‌-ಕರ್ನಾಟಕ ಯೋಜನೆಯ ಸೇವೆಗಳನ್ನು ಒದಗಿಸಲು ಒಟ್ಟು 140 ಕೇಂದ್ರಗಳಿಗೆ ಅನುಮತಿ ನೀಡಲಾಗಿದೆ. ಈ ಪೈಕಿ 46 ಕೇಂದ್ರಗಳಲ್ಲಿ ಈಗಾಗಲೇ ವಿತರಣೆ ಮಾಡಲಾಗುತ್ತಿದೆ ಎಂದರು.

ಹೆಚ್ಚಿನ ಮೊತ್ತ ಪಡೆದರೆ ದೂರು ನೀಡಿ: ಸರ್ಕಾರವು ಕಾಗದದ ಕಾರ್ಡ್‌ಗೆ 10 ರೂ. ಹಾಗೂ ಪಿ.ವಿ.ಸಿ ಕಾರ್ಡ್‌ ಗಳಿಗೆ 35 ರೂ.ನಿಗದಿಪಡಿಸಿದೆ.

ಇದಕ್ಕಿಂತ ಹೆಚ್ಚಿನ ಹಣವನ್ನು ಯಾರೂ ಪಡೆಯುವಂತಿಲ್ಲ. ಅದರ ಜೊತೆಗೆ ಅವರಿಗೆ ಅನುಮತಿ ನೀಡಿರುವ ಕೇಂದ್ರದಲ್ಲೇ ಈ ಕಾರ್ಡ್‌ಗಳ ವಿತರಣೆ ಮಾಡಬೇಕು.

ಇದಕ್ಕೆ ಒಂದಷ್ಟು ಮುಂಜಾಗ್ರತೆಯ ಕ್ರಮಗಳನ್ನೂ ಸಹ ವಹಿಸಲಾಗಿದೆ. ಇದನ್ನೂ ಮೀರಿ ಯಾರಾದರೂ ಹೆಚ್ಚಿನ ಮೊತ್ತ ಪಡೆದುಕೊಂಡರೆ ಕೂಡಲೇ 080-44554455 ಗೆ ಕರೆ ಮಾಡಿ ದೂರು ನೀಡಬಹುದಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕುಷ್ಟ ರೋಗ ನಿಯಂತ್ರಣಾಧಿಕಾರಿ ಡಾ.ನಾರಾಯಣಸ್ವಾಮಿ, ಡಾ.ಮುರುಗೇಶ್‌, ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣಾಧಿಕಾರಿ ಪ್ರಸನ್ನ ಉಪಸ್ಥಿತರಿದ್ದರು.

ಸೇವಾ ಸಿಂಧು ಕೇಂದ್ರದಲ್ಲೂ ಕಾರ್ಡ್‌ ವಿತರಣೆ

ಆರೋಗ್ಯ ಕಾರ್ಡ್‌ಗಳ ವಿತರಣೆಗೆ ಸೇವಾಸಿಂಧು ಕೇಂದ್ರಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಮುಳಬಾಗಿಲು ಮತ್ತು ಬಂಗಾರಪೇಟೆ ತಾಲೂಕುಗಳಲ್ಲಿ ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಪಡೆದುಕೊಳ್ಳುತ್ತಿರುವ ಕುರಿತು ದೂರುಗಳ ಬಂದಿದ್ದು, ಈ ಕೇಂದ್ರಗಳನ್ನು ಮುಚ್ಚಲಾಗಿದೆ. ಜಿಲ್ಲೆಯಲ್ಲಿ ಏ.23ರ ಅಂತ್ಯಕ್ಕೆ 1,53,253 ನಾಗರಿಕರು ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಕಾರ್ಡ್‌ ಪಡೆದಿರುತ್ತಾರೆ. ಈ ಪೈಕಿ ಕೋಲಾರ ತಾಲೂಕು 1,06,209, ಶ್ರೀನಿವಾಸಪುರ- 11,860, ಮುಳಬಾಗಿಲು- 6,541, ಬಂಗಾರಪೇಟೆ- 14,153, ಕೆಜಿಎಫ್‌- 9,337, ಮಾಲೂರು – 5153 ಮಂದಿ ಈ ಕಾರ್ಡ್‌ಗಳನ್ನು ಪಡೆದುಕೊಂಡಿರುತ್ತಾರೆ ಎಂದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDP ಮುಖಂಡನ ಹತ್ಯೆಗೆ ನೆರವು: ಇಬ್ಬರು ಪೊಲೀಸರ ಅಮಾನತು

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

14-bng

Kolar: 1.25 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳು ಪತ್ತೆ

CM-Dineh

Eagles Eye: ಭ್ರೂಣಲಿಂಗ ಪತ್ತೆ ತಡೆಗೆ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ನಿಗಾ: ದಿನೇಶ್‌

Benga-Club

Bengaluru Press Club: ಸುದ್ದಿಗೋಷ್ಠಿ ನಡುವೆಯೇ ಮೃತಪಟ್ಟ ಕಾಂಗ್ರೆಸ್‌ ಕಾರ್ಯಕರ್ತ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.