“ಬರಗಾಲ ನಿಭಾಯಿಸಲು ಸರಕಾರ ವಿಫಲ’
Team Udayavani, May 10, 2019, 6:08 AM IST
ಉಡುಪಿ: ರಾಜ್ಯ ದಲ್ಲಿ ಸೃಷ್ಟಿಯಾಗಿರುವ ಭೀಕರ ಬರಗಾಲವನ್ನು ನಿಭಾಯಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ
ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಬರ ಪರಿಹಾರಕ್ಕೆ ಕ್ರಮ ಕೈಗೊಳ್ಳು ವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ. ಆದರೂ ಸರಕಾರ ನಿರ್ಲಕ್ಷ್ಯ ತೋರುತ್ತಿದೆ. ಇಂತಹ ಕೆಟ್ಟ ಸರಕಾರವನ್ನು ಈ ಹಿಂದೆ ನೋಡಿರ ಲಿಲ್ಲ. ರಾಜ್ಯದ ಜನತೆ ಕಂಗೆಟ್ಟಿದ್ದಾರೆ. ಉಡುಪಿ ಸೇರಿದಂತೆ ರಾಜ್ಯದಲ್ಲಿ ಜಿಲ್ಲಾ ಡಳಿತಗಳು ಸ್ಥಗಿತವಾಗಿವೆ ಎಂದರು.
ಆಯೋಗ ಅಡ್ಡಿಯಲ್ಲ
ಬರನಿರ್ವಹಣೆ, ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಚುನಾ ವಣ ಆಯೋಗ ಅನುಮತಿ ನೀಡಿದೆ. ವಿವಿಧ ನಿಗಮ, ಮಂಡಳಿ, ಸಮಿತಿ ಹಾಗೂ ಸ್ಥಳೀಯ ಸಂಸ್ಥೆಗಳು ಸಭೆಗಳನ್ನು ನಡೆಸುವುದಕ್ಕೂ ಒಪ್ಪಿಗೆ ನೀಡಿದೆ. ಆದರೆ ಕುಡಿಯುವ ನೀರು, ಮಳೆಗಾಲ ಮುನ್ನೆಚ್ಚರಿಕೆ ಕ್ರಮ ಮೊದಲಾದ ಉದ್ದೇಶಗಳಿಗೂ ಗ್ರಾ.ಪಂ.ಗಳಲ್ಲಿ ಸಭೆ ನಡೆಸಲು ಸರಕಾರ ಕ್ರಮ ಕೈಗೊಂಡಿಲ್ಲ ಎಂದು ಪೂಜಾರಿ ಆರೋಪಿಸಿದರು.
ಅಧಿಕಾರವಿಲ್ಲದ 8 ತಿಂಗಳುಗಳು
ಅಧ್ಯಕ್ಷ ಸ್ಥಾನ ಜೆಡಿಎಸ್/ಕಾಂಗ್ರೆಸ್‌ಗೆ ಸಿಗಬೇಕೆಂಬ ಉದ್ದೇಶದಿಂದ ಮೀಸಲಾತಿ ಪಟ್ಟಿಯನ್ನು ಬದಲಾಯಿಸಿ ನ್ಯಾಯಾಲಯಕ್ಕೆ ಅಫಿದವಿತ್ ಸಲ್ಲಿಸಿದ ಪರಿಣಾಮ ಉಡುಪಿ ನಗರಸಭೆ ಸೇರಿದಂತೆ ರಾಜ್ಯದ ನಗರ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆದು 8 ತಿಂಗಳಾದರೂ ಜನರಿಂದ ಆಯ್ಕೆಯಾದ ಪ್ರತಿನಿಧಿಗಳಿಗೆ ಅಧಿಕಾರ ಸಿಕ್ಕಿಲ್ಲ. ಇದರಿಂದಾಗಿ ಆಡಳಿತ ಸಮರ್ಪಕವಾಗಿ ನಡೆಯದೆ ಸಮಸ್ಯೆ ಮತ್ತಷ್ಟು ಜಟಿಲವಾಗಿದೆ ಎಂದು ಶ್ರೀನಿವಾಸ ಪೂಜಾರಿ ದೂರಿದರು.
ಪಂಚಕರ್ಮ, ಪಂಚತಂತ್ರದ ಜತೆಗೆ…
“ನೀವು ಆರೋಗ್ಯ ಸುಧಾರಣೆಗೆ ಪಂಚಕರ್ಮ ಚಿಕಿತ್ಸೆ ಮಾಡಿ. ಸರಕಾರ ಉಳಿಸಲು ಪಂಚತಂತ್ರಗಳನ್ನು ಮಾಡಿ. ಆದರೆ ಅದರೊಂದಿಗೆ ಬರ ನಿರ್ವಹಣೆಗೆ ಸಮರೋಪಾದಿ ಕೆಲಸ ಕೂಡ ಮಾಡಿ’ ಎಂದು ಮುಖ್ಯಮಂತ್ರಿಯವರಿಗೆ ಶ್ರೀನಿವಾಸ ಪೂಜಾರಿ ಅವರು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.