ಕೆ.ಆರ್‌.ಪುರ ಆಸ್ಪತ್ರೆಗೆ ಬೇಕು ತುರ್ತು ಚಿಕಿತ್ಸೆ

Team Udayavani, May 10, 2019, 11:46 AM IST

blore-9

ಕೆ.ಆರ್‌.ಪುರ: ನುರಿತ ವೈದ್ಯರ ಅಭಾವ, ಮೂಲ ಸೌಲಭ್ಯಗಳು ಇಲ್ಲದಿರುವುದು, ಮೇಲ್ದರ್ಜೆಗೇರುವ ಭರವಸೆ ಈಡೇರದಿರುವುದೂ ಸೇರಿದಂತೆ ಹಲವು ಸಮಸ್ಯೆಗಳನ್ನು ಹೊದ್ದು ಮಲಗಿರುವ ಕೆ.ಆರ್‌.ಪುರದ ಸಾರ್ವಜನಿಕ ಆಸ್ಪತ್ರೆಗೆ ತುರ್ತು ಚಿಕಿತ್ಸೆ ಅಗತ್ಯವಿದೆ.

14 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಬೆಂಗಳೂರಿನ ಪೂರ್ವ ತಾಲೂಕಿನ ಅತಿ ದೊಡ್ಡ ಆಸ್ಪತ್ರೆ ಇದಾಗಿದ್ದು, ಪ್ರತಿ ದಿನ 500ರಿಂದ 600 ರೋಗಿಗಳು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಆದರೆ, ಕಣ್ಣು, ಕಿವಿ, ಚರ್ಮ ರೋಗ, ಮೂಳೆ, ದಂತ ಚಿಕಿತ್ಸೆ ಸೇರಿ ಯಾವುದೇ ವಿಭಾಗದಲ್ಲೂ ತಜ್ಞ ವೈದ್ಯರಿಲ್ಲ. ಹೀಗಾಗಿ, ವಿಭಾಗೀಯ ವೈದ್ಯರ ಮೇಲೆ ಒತ್ತಡ ಹೆಚ್ಚಾಗಿದ್ದು, ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ, ಬೇರೆ ಆಸ್ಪತ್ರೆಗೆ ತೆರಳಲು ಶಿಫಾರಸು ಮಾಡುವ ಸ್ಥಿತಿಯಿದೆ.

ಮೊದಲೇ ಈ ಭಾಗದಲ್ಲಿ ಸಂಚಾರದಟ್ಟಣೆ ಹೆಚ್ಚು. ಹೀಗಾಗಿ ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳು, ಆಸ್ಪತ್ರೆಗೆ ಕರೆದೊಯ್ಯುವಾಗ ಟ್ರಾಫಿಕ್‌ನಲ್ಲಿ ಸಿಲುಕಿ ಯಾತನೆ ಅನುಭವಿಸುತ್ತಾರೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಹಲವರು ಮಾರ್ಗ ಮಧ್ಯೆಯೇ ಮೃತಪಟ್ಟ ನಿದರ್ಶನಗಳೂ ಇವೆ. ಕೆ.ಆರ್‌.ಪುರ ಆಸ್ಪತ್ರೆಯಲ್ಲೇ ತಜ್ಞ ವೈದ್ಯರು, ಸೌಲಭ್ಯ ಕಲ್ಪಿಸಿದರೆ ಈ ಸಮಸ್ಯೆ ಇರುವುದಿಲ್ಲ.

ರಜಾ ದಿನ ಚಿಕಿತ್ಸೆಯಿಲ್ಲ: ಸರ್ಕಾರಿ ರಜೆ ದಿನಗಳಂದು ಎಲ್ಲಾ ಸರ್ಕಾರಿ ವೈದ್ಯರು ಅರ್ಧ ದಿನ ಕಾರ್ಯನಿರ್ವಹಿಸಬೇಕು ಎಂಬ ಕಡ್ಡಾಯ ನಿಯಮವಿದೆ. ಆದರೆ, ಇಲ್ಲಿ ರಜೆ ದಿನ ವೈದ್ಯರು ಆಸ್ಪತ್ರೆಯತ್ತ ನೋಡುವುದೂ ಇಲ್ಲ. ಗರ್ಭಿಣಿಯರ ಹೆರಿಗೆ ಸಮಯದಲ್ಲಿ ಒಬ್ಬ ವೈದ್ಯೆ, ನರ್ಸ್‌ ಇರಲೇಬೇಕೆಂಬ ನಿಯಮ ಕೂಡ ಪಾಲನೆಯಾ ಗುತ್ತಿಲ್ಲ. ಇನ್ನೊಂದೆಡೆ ಆಸ್ಪತ್ರೆ ಆವರಣ ಖಾಸಗಿ ವಾಹನಗಳ ನಿಲ್ದಾಣವಾಗಿ ಮಾರ್ಪಟ್ಟಿದೆ.

ವಿದ್ಯುತ್‌ ತಂತಿಗಳು 15 ವರ್ಷ ಹಳೆಯದಾಗಿರುವ ಕಾರಣ, ಶಸ್ತ್ರಚಿಕಿತ್ಸೆ, ಡಯಾಲಿಸಿಸ್‌, ಸ್ಕ್ಯಾನಿಂಗ್‌ ಸಂದರ್ಭದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡು ರೋಗಿಗಳು ಪರದಾಡುತ್ತಾರೆ. ಇದರೊಂದಿಗೆ ಶೌಚಾಲಯಗಳ ಕೊಳಕಾಗಿದ್ದು, ರೋಗ ಹರಡುವ ಕೇಂದ್ರಗಳಾಗಿವೆ. ಒಂದು ವರ್ಷದಿಂದ ನಿರ್ವಹಣೆ ಇಲ್ಲದೆ ನಿಂತಿರುವ ಆ್ಯಂಬುಲೆನ್ಸ್‌ ತುಕ್ಕುಹಿಡಿಯುತ್ತಿದೆ.

ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸುವಂತೆ ಶಾಸಕರ ಗಮನಕ್ಕೆ ತಂದಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಅಗತ್ಯವಿದೆ ಎಂದು ಆಸ್ಪತ್ರೆ ಉಸ್ತುವಾರಿ ಸಮಿತಿ ಅಧ್ಯಕ್ಷ ವಿ.ಸಿ.ರೆಡ್ಡಿ ತಿಳಿಸಿದ್ದಾರೆ. ಕೆ.ಆರ್‌.ಪುರ ಆಸ್ಪತ್ರೆಯನ್ನು 250 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಮತ್ತು ಸಾಮಾನ್ಯ ರೋಗಿಗಳ ಚಿಕಿತ್ಸೆಗಾಗಿ 4 ನುರಿತ ತಜ್ಞ ವೈದ್ಯರನ್ನು ನೇಮಿಸುವಂತೆ ಹಿರಿಯ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ಚಂದ್ರಶೇಖರ್‌ ತಿಳಿಸಿದ್ದಾರೆ.

ಕೆ.ಆರ್‌.ಗಿರೀಶ್‌

ಟಾಪ್ ನ್ಯೂಸ್

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

Pro Kabaddi: ಒಂದಂಕದಿಂದ ಸೋತ ಬೆಂಗಳೂರು ಬುಲ್ಸ್‌

Pro Kabaddi: ಒಂದಂಕದಿಂದ ಸೋತ ಬೆಂಗಳೂರು ಬುಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.