8 ವರ್ಷಗಳಿಂದಲೂ ಬಗೆಹರಿಯದ ರಸ್ತೆ ಸಮಸ್ಯೆ


Team Udayavani, May 10, 2019, 4:15 PM IST

kol-5

ಕೋಲಾರ: ಕ್ಷೇತ್ರದ ರಸ್ತೆ ಸಮಸ್ಯೆಯನ್ನು ಬಗೆಹರಿಸದ ಪಿಡಬ್ಲ್ಯೂಡಿ ಅಧಿಕಾರಿಗಳ ವಿಳಂಬ ಧೋರಣೆಯ ಬಗ್ಗೆ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್‌ ತರಾಟೆಗೆ ತೆಗೆದುಕೊಂಡರು.

ನಗರದ ಪಿಡಬ್ಲ್ಯೂಡಿ ಕಚೇರಿಗೆ ಕೆಜಿಎಫ್ ಅಶೋಕ ನಗರದ ಮುಖಂಡರೊಂದಿಗೆ ಆಗಮಿಸಿದ ಶಾಸಕಿ 1 ಗಂಟೆಗೂ ಹೆಚ್ಚು ಕಾಲ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕಳೆದ 8 ವರ್ಷಗಳಿಂದಲೂ ಬಗೆಹರಿಯದ ರಸ್ತೆ ಸಮಸ್ಯೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆ ಸಲ್ಲಿಸದೆ ನಿರ್ಲಕ್ಷಿಸಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ವೇಳೆ ಇಲಾಖೆ ಅಧಿಕಾರಿಗಳು ಅಗತ್ಯ ಮಾಹಿತಿಯನ್ನು ದಾಖಲೆ ಸಮೇತ ಒದಗಿಸುವಲ್ಲಿ ವಿಫಲರಾದರು. ಇದಕ್ಕೆ ಕಿಡಿಕಾರಿದ ಶಾಸಕಿ, ಕಳೆದ ಡಿ.ಸಿ.ಸಭೆಯಲ್ಲಿಯೂ ಇದೇ ರೀತಿ ದಾಖಲೆ ನೀಡದೆ ತಡಬಡಿಸಿದ್ದೀರಿ, ಈಗಲೂ ಅದೇ ಮಾಡುತ್ತಿದ್ದೀರಿ, ಕೇವಲ 5-10 ಮಂದಿ ಹಿತಾಸಕ್ತಿಗಾಗಿ ಸ್ಥಳೀಯರಿಗೆ ತೊಂದರೆ ನೀಡುತ್ತಿದ್ದೀರಾ. ಈಗಾಗಲೇ ಇಬ್ಬರು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರೂ ಸಮಸ್ಯೆ ಬಗೆಹರಿದಿಲ್ಲ ಎಂದರೆ ನಿಮ್ಮ ಬೇಜವಾಬ್ದಾರಿತನ ಎಷ್ಟರ ಮಟ್ಟಿಗೆ ಇದೆ ಎನ್ನುವುದು ಸ್ಪಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿದಿನವೂ ಜನತೆ ತಮ್ಮ ಬಳಿ ರಸ್ತೆ ವಿಚಾರವಾಗಿ ನೋವಿನಿಂದ ಹೇಳಿಕೊಳ್ಳುತ್ತಿದ್ದಾರೆ. ತಾಂತ್ರಿಕ ಸಮಸ್ಯೆ ಅವರಿಗೆ ಅರ್ಥವಾಗುವುದಿಲ್ಲ. ನಿಮ್ಮಿಂದಾಗಿ ಅವರ ಬಳಿ ನಾವು ವಿಶ್ವಾಸ ಕಳೆದುಕೊಳ್ಳಬೇಕಾಗಿದೆ. ಬಾಕಿ ಇರುವ ಒತ್ತುವರಿ ತೆರವು ತಡೆ ಮಾಡುವುದಕ್ಕೆ ನ್ಯಾಯಾಲಯ ಹೇಳಿಲ್ಲ. ಸ್ಕೂಲ್ ಆಫ್‌ ಮೈನ್ಸ್‌ನಿಂದ ಅಶೋಕ ನಗರದ ಕೊನೆಯವರೆಗಿನ 2 ಕಿ.ಮೀ. ರಸ್ತೆಯನ್ನು ರಾಜ್ಯ ಹೆದ್ದಾರಿ ಎಂದು ದಾಖಲೆಗಳ ಮೂಲಕ ತಿಳಿಸಲಾಗಿದೆ. ತೆರವು ಮಾಡಬಾರದು ಎನ್ನುವ ವಿಚಾರವನ್ನು ನ್ಯಾಯಾಲಯ ಹೇಳಿಲ್ಲ ಎಂದು ಅಧಿಕಾರಿಗಳಿಗೆ ತಿಳಿವಳಿಕೆ ನೀಡಿದರು.

ಬೆರಳೆಣಿಕೆಯಷ್ಟು ಮಂದಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡಿರುವುದರಿಂದಲೇ ಕೋರ್ಟ್‌ಗೆ ಪದೇಪದೆ ಹೋಗುತ್ತಿದ್ದಾರೆ. ಅಗತ್ಯವಿರುವ ದಾಖಲೆಗಳನ್ನು ಕೂಡಲೇ ಸಲ್ಲಿಸಬೇಕು. ಆಗಿಂದಾಗ್ಗೆ ಸರ್ಕಾರಿ ವಕೀಲರನ್ನು ಸಂಪರ್ಕ ಮಾಡಿಕೊಂಡಿದ್ದರೆ ಇಷ್ಟು ದೊಡ್ಡ ಪ್ರಮಾಣದ ಸಮಸ್ಯೆ ಉಂಟಾಗುತ್ತಿರಲಿಲ್ಲ. ಇನ್ನಾದರೂ ತುರ್ತಾಗಿ ಕೆಲಸ ಮಾಡಿ ಎಂದು ಅಭಿಯಂತರ ಬದರೀನಾಥ್‌ಗೆ ಸೂಚಿಸಿದರು.

8 ವರ್ಷಗಳಿಂದಲೂ ಕೆಜಿಎಫ್‌ ಎಇಇ ಹನುಮಪ್ಪ ಅವರೇ ಕಾರ್ಯನಿರ್ವಹಿಸುತ್ತಿದ್ದರೂ ಸಮಸ್ಯೆ ಬೆಳೆಯಲು ಬಿಟ್ಟುಕೊಂಡಿದ್ದಾರೆ. ಇವರ ಬೇಜವಾಬ್ದಾರಿತನವೇ ಕಾರಣ ಎಂದು ಕೆಲ ಮುಖಂಡರು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಹನುಮಪ್ಪ, ಪೈಂಡಿಂಗ್ಸ್‌ ಸರಿಯಾಗಿ ನೀಡಿದ್ದೇ ಆದಲ್ಲಿ ಅರ್ಧಗಂಟೆಯಲ್ಲಿ ಬೇಕಾದರೆ ತೆರವು ಮಾಡಿಸುತ್ತೇವೆ. ಈ ಹಿಂದಿನ ಸರಕಾರಿ ವಕೀಲರು ನಿರ್ಲಕ್ಷ್ಯ ಮಾಡಿದ್ದಾರೆ ಹೊರತು ನಾವಲ್ಲ ಎಂದು ಹೇಳಿದರು. ಶಾಸಕಿ ರೂಪಾ ಮಾತನಾಡಿ, ಹಿಂದೆ ಆಗಿರುವುದನ್ನು ಬಿಟ್ಟು ಈಗ ಆಗಬೇಕಿರುವ ಕೆಲಸವನ್ನು ತ್ವರಿತವಾಗಿ ಮಾಡಿ ಮುಗಿಸಿ ಎಂದು ಸೂಚಿಸಿದರು.

ಟಾಪ್ ನ್ಯೂಸ್

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.