ಮೈತ್ರಿ ಅಭ್ಯರ್ಥಿಗಳ ಪರ ಎಚ್‌ಡಿಕೆ 2 ದಿನ ಪ್ರಚಾರ
Team Udayavani, May 11, 2019, 3:00 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ಎರಡು ದಿನ ಪ್ರಚಾರ ನಡೆಸಲಿದ್ದಾರೆ. ಸೋಮವಾರ ಹಾಗೂ ಮಂಗಳವಾರ ಎರಡೂ ಕ್ಷೇತ್ರಗಳಲ್ಲಿ ಆಯೋಜಿಸಿರುವ ಪ್ರಚಾರ ಸಭೆಗಳಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳಲಿದ್ದಾರೆ.
ಶುಕ್ರವಾರ ಸಂಜೆ ವಿಶ್ರಾಂತಿಗಾಗಿ ರೆಸಾರ್ಟ್‌ಗೆ ತೆರಳಿರುವ ಮುಖ್ಯಮಂತ್ರಿ, ಎರಡು ದಿನ ವಿಶ್ರಾಂತಿ ಪಡೆದು, ನಂತರ ಸೋಮವಾರ ಹುಬ್ಬಳ್ಳಿಗೆ ತೆರಳಿ, ಕುಂದಗೋಳ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರ ಪ್ರಚಾರ ನಡೆಸಲಿದ್ದಾರೆ. ಮಂಗಳವಾರ ಕಲಬುರಗಿಗೆ ತೆರಳಿ ಚಿಂಚೋಳಿ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸುಭಾಷ್ ರಾಥೋಡ್ ಪರ ಪ್ರಚಾರ ನಡೆಸಲಿದ್ದಾರೆ.
ಪ್ರಚಾರದ ಸಂದರ್ಭದಲ್ಲಿ ಕುಮಾರಸ್ವಾಮಿಯವರು ಗಾಣಗಾಪುರದ ದತ್ತಾತ್ರೇಯ ದೇವಾಲಯಕ್ಕೂ ಭೇಟಿ ನೀಡುವ ಕಾರ್ಯಕ್ರಮವಿದೆ. ಮುಖ್ಯಮಂತ್ರಿಯವರು ಶುಕ್ರವಾರ ಮಡಿಕೇರಿಯ ರೆಸಾರ್ಟ್‌ಗೆ ತೆರಳುವುದಕ್ಕೂ ಮುನ್ನ ಜ್ಯೋತಿಷಿ ದ್ವಾರಕಾನಾಥ್ ಗುರೂಜಿ ಅವರನ್ನು ಭೇಟಿ ಮಾಡಿದ್ದರು.
ಇತ್ತೀಚೆಗಷ್ಟೇ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಆಗಮಿಸುವಂತೆ ಅವರಿಗೆ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.