ಮಾವು ಮೇಳಕ್ಕೆ ಚಾಲನೆ
Team Udayavani, May 11, 2019, 11:42 AM IST
ರಾಮನಗರ: ಉತ್ತಮ ಗುಣಮಟ್ಟ ಹಾಗೂ ರಾಸಾಯನಿಕ ಮುಕ್ತ ಮಾವಿನ ಹಣ್ಣುಗಳನ್ನು ಬೆಳೆಗಾರರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸುವ ಮತ್ತು ದಲ್ಲಾಳಿಗಳ ಹಾವಳಿ ಯನ್ನು ತಪ್ಪಿಸಿ ಬೆಳೆಗಾರರಿಗೆ ನ್ಯಾಯ ಬೆಲೆ ದೊರಕಿಸಿ ಕೊಡುವ ಉದ್ದೇಶದಿಂದ ಮಾವಿನ ಮೇಳವನ್ನು ಆಯೋಜಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ನಿರ್ದೇಶಕ ಡಾ.ಎಂ.ವಿ.ವೆಂಕಟೇಶ್ ಹೇಳಿದರು.
ನಗರದ ಜಾನಪದ ಲೋಕದ ಮುಂಭಾಗ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ ಏರ್ಪಡಿಸಿರುವ ಮಾವು ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.
‘ಕರಸಿರಿ’ ಬ್ರಾಂಡ್ ಮೂಲಕ ಮಾರಾಟ: ಜಿಲ್ಲೆಯ ಪ್ರಮುಖವಾದ ಬೆಳೆ ಮಾವು. ಸುಮಾರು 23,350 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಪ್ರಮುಖವಾಗಿ ಬಾದಾಮಿ, ರಸಪುರಿ, ಸೇಂದೂರು, ತೋತಾ ಪುರಿ, ಮಲ್ಲಿಕಾ ಮುಂತಾದ ಥಳಿಗಳಿದ್ದು, ವಾರ್ಷಿಕ ಸುಮಾರು 2 ಲಕ್ಷ ಮೆಟ್ರಿಕ್ ಟನ್ ಮಾವನ್ನು ಉತ್ಪಾದಿಸಲಾಗುತ್ತದೆ. ರಾಜ್ಯದಲ್ಲಿ ಬೆಳೆಯುವ ಮಾವಿಗೆ ಕರಸಿರಿ ಎಂಬ ಬ್ರಾಂಡ್ ನಿಗದಿ ಮಾಡಲಾಗಿದೆ. ಇದೇ ಬ್ರಾಂಡ್‌ನಿಂದ ರಾಜ್ಯದ ಮಾವಿನ ಹಣ್ಣುಗಳು ದೇಶ, ವಿದೇಶಗಳಲ್ಲಿ ಮಾರಾಟವಾಗಲಿದೆ ಎಂದರು.
ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ. ರಾಜೇಂದ್ರ ಮಾತನಾಡಿ, ಮಾವು ಬೆಳೆಗಾರರಿಗೆ ಗ್ರಾಹಕರ ನೇರ ಮಾರುಕಟ್ಟೆ ಒದಗಿಸುವು ಉದ್ದೇಶ ದಿಂದಲೇ ಮೇಳವನ್ನು ಆಯೋಜಿಸಲಾಗಿದೆ. ತೋಟಗಾರಿಕೆ ಇಲಾಖೆಯ ಈ ಪ್ರಯತ್ನ ಶ್ಲಾಘನೀಯ. ಬೆಳೆಗಾರರು ಸಹ ಗ್ರಾಹಕರಿಗೆ ಉತ್ಕೃಷ್ಟ ಮಾವಿನ ಹಣ್ಣುಗಳನ್ನು ತಲುಪಿಸ ಬೇಕು ಎಂದು ಸಲಹೆ ನೀಡಿದರು.
ಜನನಿಬಿಡ ಸ್ಥಳದಲ್ಲಿ ಮೇಳ ಆಯೋಜಿಸಲು ಸಲಹೆ: ಇದೇ ವೇಳೆ ರೈತ ಮುಖಂಡ ಲಕ್ಷ್ಮಣಸ್ವಾಮಿ, ಅಧಿಕಾರಿಗಳೊಂದಿಗೆ ಮಾತನಾಡಿ, ಒಂದೇ ಕಡೆ 20 ಮಳಿಗೆಗಳನ್ನು ಹಾಕುವುದಕ್ಕಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಮಳಿಗೆಗಳನ್ನು ಹಾಕುವುದಕ್ಕೆ ಯೋಜನೆ ರೂಪಿಸಿ ಎಂದು ಸಲಹೆ ನೀಡಿದರು.ಜಿಪಂ ಸಿಇಒ ಮುಲ್ಲೈ ಮುಹಿಲನ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ್, ಜಿಲ್ಲಾ ಮಟ್ಟದ ಅಧಿಕಾರಿಗಳು, ತೋಟಗಾರಿಕೆ ಸಂಘ, ಮಾವು ಬೆಳೆಗಾರರ ಸಂಘದ ಪದಾಧಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್
Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.