ಜಲ ಸಂಕಟ; ಲಕ್ಕಲಕಟ್ಟಿ ಗ್ರಾಮಸ್ಥರ ಪ್ರತಿಭಟನೆ

Team Udayavani, May 11, 2019, 12:35 PM IST

gadaga-tdy-02..

ಗಜೇಂದ್ರಗಡ: ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಗ್ರಾಮೀಣ ಭಾಗಕ್ಕೆ ಸಮರ್ಪಕವಾಗಿ ನೀರು ಪೂರೈಸಬೇಕೆಂದು ಒತ್ತಾಯಿಸಿ ಲಕ್ಕಲಕಟ್ಟಿ ಗ್ರಾಮಸ್ಥರು ಗ್ರಾಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಗಜೇಂದ್ರಗಡ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನೀರನ್ನು ಗ್ರಾಮೀಣ ಭಾಗಕ್ಕೆ ಒದಗಿಸದೆ ಪಟ್ಟಣ ಪ್ರದೇಶಕ್ಕೆ ಬಿಡುತ್ತಿರುವುದರಿಂದ ನೀರಿನ ಅಭಾವ ಉದ್ಭವಿಸಿದೆ ಎಂದು ಆರೋಪಿಸಿ ಸಮೀಪದ ಲಕ್ಕಲಕಟ್ಟಿ ಗ್ರಾಮಸ್ಥರು ಗ್ರಾಪಂ ಕಚೇರಿ ಮುಂದೆ ಖಾಲಿ ಕೊಡಗಳನ್ನು ಪ್ರದರ್ಶಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವ್ಯಾಪ್ತಿಗೊಳಪಡುವ ಲಕ್ಕಲಕಟ್ಟಿ ಗ್ರಾಮಕ್ಕೆ ಕಳೆದ ಮೂರ್‍ನಾಲ್ಕು ದಿನಗಳಿಂದ ನೀರನ್ನು ಬಿಟ್ಟಿಲ್ಲ. ಪರಿಣಾಮ ಗ್ರಾಮದಲ್ಲಿ ಕುಡಿಯುವ ನೀರಿನ ತೊಂದರೆ ಉದ್ಭವಿಸಿದೆ. ಮೊದಲೇ ಜಲ ಮೂಲಗಳಿಲ್ಲದೇ ಪರಿತಪಿಸುತ್ತಿರುವ ಗ್ರಾಮಕ್ಕೆ ಬಹುಗ್ರಾಮ ಯೋಜನೆಯೊಂದೇ ಆಶಾಕಿರಣವಾಗಿದೆ. ಆದರೆ ಸರಿಯಾಗಿ ನೀರು ಬಿಡದೆ ಗ್ರಾಪಂ ಆಡಳಿತ ನೆಪಗಳನ್ನೊಡುತ್ತ್ತ, ಸಾರ್ವಜನಿಕರಿಗೆ ಸರಿಯಾಗಿ ನೀರು ಒದಗಿಸುವಲ್ಲಿ ವಿಫಲವಾಗಿದೆ ಎಂದು ದೂರಿದರು.

ಎರಡು ವರ್ಷಗಳಿಂದ ಉದ್ಭವಿಸಿರುವ ಭೀಕರ ಬರದಿಂದಾಗಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಎದುರಾಗಬಾರದು ಎನ್ನುವ ಉದ್ದೇಶದಿಂದ ಹಿಂದಿನ ಸರ್ಕಾರ ಗ್ರಾಮೀಣ ಭಾಗಗಳಲ್ಲಿ ನಿತ್ಯ ನೀರು ಪೂರೈಸಬೇಕು ಎನ್ನುವ ಮಹದಾಸೆಯಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೆ ತಂದಿದೆ. ಆದರೆ ಅಧಿಕಾರಿಗಳು ಸರ್ಕಾರದ ನಿಯಮಾವಳಿಗಳನ್ನು ಮರೆತು ಪಟ್ಟಣ ಪ್ರದೇಶಕ್ಕೆ ನೀರಿನ ಸಂಪರ್ಕ ಕಲ್ಪಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲಕ್ಕಲಕಟ್ಟಿ ಗ್ರಾಮಕ್ಕೆ ನವಿಲುತೀರ್ಥ ಡ್ಯಾಂನಿಂದ ನಿತ್ಯ ನೀರು ಪೂರೈಸಲಾಗುತ್ತಿತ್ತು. ಇದರಿಂದ ನೀರಿನ ಸಮಸ್ಯೆ ದೂರಾಗಿತ್ತು. ಆದರೆ ಕಳೆದ ಮೂರು ದಿನಗಳಿಂದ ನೀರು ಪೂರೈಕೆ ಸ್ಥಗಿತಗೊಂಡಿದ್ದು, ನಿತ್ಯದ ಕಾರ್ಯಗಳಿಗೂ ನೀರು ಇಲ್ಲದಂತಾಗಿದೆ. ಗ್ರಾಮೀಣ ಭಾಗಕ್ಕೆ ದೊರೆಯಬೇಕಾದ ಸೌಕರ್ಯಗಳನ್ನು ಪಟ್ಟಣ ಪ್ರದೇಶಗಳಿಗೆ ನೀಡುತ್ತಿದ್ದು, ಹಳ್ಳಿಗರನ್ನು ತಾತ್ಸಾರ ಮಾಡಲಾಗುತ್ತಿದೆ. ಕೂಡಲೇ ಪಟ್ಟಣ ಪ್ರದೇಶಕ್ಕೆ ನೀಡಿದ ಸಂಪರ್ಕ ಕಡಿತಗೊಳಿಸಿ, ಗ್ರಾಮೀಣ ಪ್ರದೇಶಗಳಿಗೆ ನೀರು ಒದಗಿಸಲು ಮುಂದಾಗದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಪಿಡಿಒ ಫಕ್ರುದ್ದಿನ್‌ ನದಾಫ್‌ ಅವರಿಗೆ ಮನವಿ ಸಲ್ಲಿಸಿದರು. ದೇವೇಂದ್ರಪ್ಪ ಕಮ್ಮಾರ, ಲಕ್ಷ್ಮವ್ವ ರಾಠೊಡ, ಗೌಡಯ್ಯ ಹಿರೇಮಠ, ಜಾಕಿರಹುಸೇನ ನದಾಫ್‌, ರಾಮಪ್ಪ ಬೆನಕನವಾರಿ, ಜಗದೀಶ ಹೂಗಾರ, ಲಿಂಗವ್ವ ಹೂಗಾರ, ರುದ್ರವ್ವ ಬೆನಕನವಾರಿ, ನಿಂಗವ್ವ ಬೆನಕನವಾರಿ, ಲಚ್ಚವ್ವ ರಾಠೊಡ, ಕಸ್ತೂರೆವ್ವ ರೊಟ್ಟಿ, ರುಕಮವ್ವ ಕಲ್ಗುಡಿ, ರೇಣವ್ವ ರಾಠೊಡ, ಶಾಂತವ್ವ ರಾಠೊಡ, ಕಸ್ತೂರೆವ್ವ ರಾಠೊಡ ಇನ್ನಿತರರಿದ್ದರು.

ಟಾಪ್ ನ್ಯೂಸ್

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.