ಇಬ್ಬರು ಸರಗಳ್ಳರ ಬಂಧನ


Team Udayavani, May 12, 2019, 5:50 AM IST

19

ಮಹಾನಗರ: ನಗರದ ನಾಗುರಿ ಆಂಜೆಲೋರ್‌ ಚರ್ಚ್‌ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಕಳೆದ ಎ. 22ರಂದು ಮಧ್ಯಾಹ್ನ ದಾರಿ ಕೇಳುವ ನೆಪದಲ್ಲಿ ಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಅವರಿಂದ ಒಟ್ಟು 1,10,000 ರೂ. ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.

ನಗರದ ಅಳಪೆ ಗ್ರಾಮ ನಿಡ್ಡೇಲ್‌ ಗೋಕರ್ಣ ನಿವಾಸಿಗಳಾದ ಹರ್ಷಿತ್‌ ಶೆಟ್ಟಿ ಯಾನೆ ಹರ್ಷಿತ್‌ (25) ಮತ್ತು ಹವಿತ್‌ ಪೂಜಾರಿ (24) ಬಂಧಿತ ಆರೋಪಿಗಳು. ಅವರನ್ನು ಕೃತ್ಯಕ್ಕೆ ಉಪಯೋಗಿಸಿದ ಮೋಟಾರ್‌ ಬೈಕ್‌ನೊಂದಿಗೆ ಮೇ 10ರಂದು ಪಡೀಲ್‌ ಜಂಕ್ಷನ್‌ನಲ್ಲಿ ವಶಕ್ಕೆ ಪಡೆದು ಬಂಧಿಸಲಾಗಿದೆ.

ಆರೋಪಿ ಹರ್ಷಿತ್‌ ಶೆಟ್ಟಿ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಕೊಲೆ ಪ್ರಕರಣ, ಕಾವೂರು ಪೊಲೀಸ್‌ ಠಾಣೆಯಲ್ಲಿ ಎನ್‌.ಡಿ.ಪಿ.ಎಸ್‌. ಕಾಯ್ದೆ ಹಾಗೂ ದರೋಡೆಗೆ ಯತ್ನ ಪ್ರಕರಣ, ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಎನ್‌.ಡಿ.ಪಿ.ಎಸ್‌. ಕಾಯ್ದೆ ಪ್ರಕರಣ, ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಹಲ್ಲೆ ಪ್ರಕರಣಗಳು ದಾಖಲಾಗಿವೆ.

ಇನ್ನೋರ್ವ ಆರೋಪಿ ಹವಿತ್‌ ಪೂಜಾರಿ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಕೊಲೆ ಯತ್ನ, ಕಾವೂರು ಠಾಣೆಯಲ್ಲಿ ಕೊಲೆ ಪ್ರಕರಣಗಳು ದಾಖಲಾಗಿವೆ. ಆರೋಪಿಗಳು ದರೋಡೆ ಮಾಡಿದ 50,000 ರೂ. ಮೌಲ್ಯದ ಚಿನ್ನದ ಕರಿಮಣಿ ಸರ ಹಾಗೂ ಕೃತ್ಯಕ್ಕೆ ಉಪಯೋಗಿಸಿದ 60,000 ರೂ. ಮೌಲ್ಯದ ಮೋಟಾರ್‌ ಬೈಕನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಎಸಿಪಿ ರಾಮರಾವ್‌ ಮಾರ್ಗ ದರ್ಶನದಲ್ಲಿ ಕಂಕನಾಡಿ ನಗರ ಪೊಲೀಸ್‌ ಠಾಣೆಯ ಪಿಐ ಜಗದೀಶ್‌ ಆರ್‌., ಪಿಇ ಎಸ್‌ಐ ಪ್ರದೀಪ್‌ ಟಿ.ಆರ್‌., ಪ್ರೊ| ಪಿ.ಎಸ್‌. ಐ. ಸುದೀಪ್‌, ಸಿಬಂದಿ ಸಂತೋಷ್‌, ಮದನ್‌, ವಿನೋದ್‌, ರಾಜೇಶ್‌, ಸತೀಶ್‌, ನೂತನ್‌, ಸಂದೀಪ್‌, ಭರಣಿ ದೀಕ್ಷಿತ್‌, ಕಾರ್ತಿಕ್‌, ಜೀವನ್‌ ಮತ್ತು ಮೇಘರಾಜ್‌ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.