ಜೇನು ಕೃಷಿಯಿಂದ ಬದುಕಿನ ಖುಷಿ ಕಂಡ ಕುಮಾರ್‌


Team Udayavani, May 12, 2019, 6:00 AM IST

0205dayanand-1

ಜೇನು ಕೃಷಿಯನ್ನೇ ನೆಚ್ಚಿಕೊಂಡು ಬದುಕಿನ ಖುಷಿ ಕಂಡವರು ಅನೇಕರಿದ್ದಾರೆ. ಅವರಲ್ಲಿ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಗೋಳಿಯಡ್ಕದ ಎಲ್‌.ಕುಮಾರ್‌ ಕೂಡ ಒಬ್ಬರು.

ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಕುಮಾರ್‌ ಅವರಿಗೆ ಜೇನು ಕೃಷಿಯಲ್ಲಿ 45 ವರ್ಷಗಳ ಅನುಭವವಿದೆ. ಈ ಬಗ್ಗೆ ಇತರರಿಗೆ ಮಾಹಿತಿ ನೀಡುವುದರೊಂದಿಗೆ 800 ಜೇನು ಪೆಟ್ಟಿಗೆಗಳಲ್ಲಿ ಜೇನು ಕೃಷಿ ಮಾಡುತ್ತಿದ್ದಾರೆ.

ತಮಿಳುನಾಡಿನ ಕನ್ಯಾಕುಮಾರಿಯ ಮಾರ್ಥಂಡ ಎಂಬಲ್ಲಿ ಜೇನು ಕೃಷಿಯ ಬಗ್ಗೆ ಕಲಿತು, ಅಲ್ಲಿಯೇ ಜೇನು ಕೃಷಿ ಪ್ರಾರಂಭಿಸಿ, ಬಳಿಕ ಕೇರಳಕ್ಕೆ ಬಂದರು. ಅನಂತರ ಕರ್ನಾಟಕಕ್ಕೆ ಆಗಮಿಸಿ ಧರ್ಮಸ್ಥಳ ಸಹಿತ ಇತರೆಡೆ ಜೇನು ಕೃಷಿ ಮಾಡಿ, ಮೂರು ವರ್ಷಗಳಿಂದ ರೆಂಜಿಲಾಡಿಯ ಗೋಳಿಯಡ್ಕದಲ್ಲಿ ಜೇನು ಕೃಷಿಯನ್ನು ಮುಂದುವರಿಸುತ್ತಿದ್ದಾರೆ. ಇವರಿಗೆ ಪತ್ನಿ ರೇಖಾ ಹಾಗೂ ಅತ್ತೆ ಭವಾನಿ ಸಹಕರಿಸುತ್ತಿದ್ದಾರೆ.

24 ಎಕ್ರೆಯಲ್ಲಿ 800 ಪೆಟ್ಟಿಗೆ
ಕುಮಾರ್‌ ಅವರು ಹತ್ತಿರದ ಬೇರೆಯವರ ಜಮೀನಿನಲ್ಲಿ ಸುಮಾರು 24 ಎಕ್ರೆ ಜಾಗದ ರಬ್ಬರ್‌ ತೋಟದಲ್ಲಿ ಮರಗಳ ಮಧ್ಯೆ ಸುಮಾರು 800 ಪೆಟ್ಟಿಗೆಗಳಲ್ಲಿ ಜೇನು ಸಾಕಾಣಿಕೆ ನಡೆಸುತ್ತಿದ್ದಾರೆ. ಒಂದು ಪೆಟ್ಟಿಗೆಯಲ್ಲಿ ಸುಮಾರು 15ರಿಂದ 20 ಕೆ.ಜಿ. ಜೇನು ಪಡೆಯಬಹುದು ಎನ್ನುತ್ತಾರೆ ಕುಮಾರ್‌.

ಜೇನು ಕೃಷಿ ನಿರ್ವಹಣೆ
ಜೇನು ಸಾಕಾಣಿಕೆ (ಜೇನು ಪೆಟ್ಟಿಗೆ ಇಡುವ) ಪ್ರಾರಂಭಿಸುವ ಒಂದು ಕಿ.ಮೀ. ಸುತ್ತಳತೆಯಲ್ಲಿ ಹೂ ಬಿಡುವ, ಸಸ್ಯ ಸಂಪತ್ತಿನ, ಮಾಲಿನ್ಯ ರಹಿತ ಗಾಳಿ, ನೀರು, ಮಳೆ, ಬಿಸಿಲಿನಿಂದ ರಕ್ಷಣೆ, ನೆರಳಿನ ಪ್ರದೇಶ ಆಯ್ಕೆ ಮಾಡಬೇಕು. ಜೇನು ಕುಟುಂಬಗಳನ್ನು ವಾರಕ್ಕೊಮ್ಮೆ ಪರೀಕ್ಷಿಸಬೇಕು, 10- 15 ದಿನಕ್ಕೊಮ್ಮೆ ಪೆಟ್ಟಿಗೆ ಸ್ವತ್ಛಗೊಳಿಸಬೇಕು. ನಿಸರ್ಗದಲ್ಲಿ ಪರಾಗ ಮತ್ತು ಮಕರಂದದ ಪ್ರಮಾಣ ಕಡಿಮೆಯಾದರೆ ಸಕ್ಕರೆ ಪಾಕ ಒದಗಿಸಬೇಕು. ಮಳೆಗಾಲಕ್ಕೆ 10- 15 ದಿನಗಳ ಮೊದಲು ಜೇನು ತುಪ್ಪ ಸಂಗ್ರಹಿಸುವುದು ನಿಲ್ಲಿಸಬೇಕು. ಜೇನುಗಳು ಮಳೆಗಾಲ ಮುಗಿದು ಸಸ್ಯಗಳು ಹೂ ಬಿಡುವ ಸಮಯದಲ್ಲಿ ವಂಶಾಭಿವೃದ್ಧಿಗೆ ಗಮನ ಕೊಡುತ್ತವೆ ಎನ್ನುತ್ತಾರೆ ಅವರು.

ಲಾಭದಾಯಕ ಕೃಷಿ
ಜೇನು ಕೃಷಿ ಲಾಭದಾಯಕವಾಗಿದ್ದು, ಜನವರಿಯಿಂದ ಮೇ ತಿಂಗಳ ನಡುವಿನಲ್ಲಿ ಜೇನು ತುಪ್ಪ ತೆಗೆಯುತ್ತಿದ್ದೇನೆ. ಈ ಸಂದರ್ಭದಲ್ಲಿ ದೇರಾಜೆಯಲ್ಲಿನ ಅನುಭವಿ ಕಾರ್ಮಿಕರು ಕೆಲಸಕ್ಕೆ ಬರುತ್ತಾರೆ. ಉಳಿದ ದಿನಗಳಲ್ಲಿ ನಾನೇ ಮನೆಯವರೊಂದಿಗೆ ಜೇನು ಕೃಷಿಯನ್ನು ನೋಡಿಕೊಳ್ಳುತ್ತಿದ್ದೇನೆ ಎನ್ನುತ್ತಾರೆ ಕುಮಾರ್‌.

ಜೇನಿನ ಪೆಟ್ಟಿಗೆಯಿಂದ ಅದರ ಪಟ್ಟನ್ನು ಬೇರ್ಪಡಿಸಿ ಯಂತ್ರದ ಮೂಲಕ ತುಪ್ಪವನ್ನು ತೆಗೆದು ಶುದ್ಧ ತುಪ್ಪವನ್ನು ಡಬ್ಬದಲ್ಲಿ ಜಾಗ್ರತೆಯಾಗಿ ಶೇಖರಿಸಲಾಗುತ್ತದೆ. ಬಳಿಕ ತುಪ್ಪವನ್ನು ಮಂಗಳೂರು ಅಥವಾ ಜೇನು ಸಾಕಾಣಿಕೆಯ ಸೊಸೈಟಿಗೆ ಮಾರಾಟ ಮಾಡುತ್ತೇನೆ. ಜೇನಿನ ಪಟ್ಟಿನಿಂದ ತುಪ್ಪ ಬೇರ್ಪಡಿಸಿ ಉಳಿದ ಅಂಟಿನಿಂದ ಮೇಣ ತಯಾರಿಸಿ ಇದರಿಂದಲೂ ಆದಾಯ ಗಳಿಸಬಹುದು ಎಂದು ಅವರು ವಿವರಿಸುತ್ತಾರೆ.

ಇವರ ಬಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಸೇರಿದಂತೆ ಅನೇಕ ಮಂದಿ ಬಂದು ಜೇನು ಸಾಕಾಣಿಕೆಯ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಪಡೆದುಕೊಳ್ಳುತ್ತಿದ್ದಾರೆ.

ಎಚ್ಚರಿಕೆ ಅಗತ್ಯ
ಮಳೆಗಾಲದಲ್ಲಿ ನೀರು ಒಳಹೋಗದಂತೆ ಜೇನು ಪೆಟ್ಟಿಗೆಗೆ ಪ್ಲಾಸ್ಟಿಕ್‌ನಿಂದ ಮೇಲ್ಭಾಗ ಮುಚ್ಚಬೇಕಾಗಿದ್ದು, ಅಲ್ಲದೇ ಜೇನು ಪೆಟ್ಟಿಗೆಗೆ ಇರುವೆಗಳು ಬಾರದಂತೆ ಪೆಟ್ಟಿಗೆಯ ಸುತ್ತಲೂ ಇರುವೆ ನಾಶಕ ಸಿಂಪಡಿಸಬೇಕು. ಜೇನು ಪೆಟ್ಟಿಗೆಯ ಬಳಿ ವಾರದಲ್ಲೊಮ್ಮೆ ಭೇಟಿ ನೀಡಿ ಪರಿಶೀಲಿಸುವುದು ಉತ್ತಮ. ಅಲ್ಲದೆ, ಇವುಗಳ ಆಹಾರಕ್ಕಾಗಿ ಸಕ್ಕರೆ ನೀರನ್ನು ಪೆಟ್ಟಿಗೆಯಲ್ಲಿ ತಂದಿಡಬೇಕು.

 -ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ

ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.