ಲೋಕ ಸಮರ-19 LIVE Updates: ಘರ್ಷಣೆ, ಗೊಂದಲದ ನಡುವೆ ಚೇತೋಹಾರಿ ಮತದಾನ
Team Udayavani, May 12, 2019, 9:18 AM IST
ನವದೆಹಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನ ಪ್ರಾರಂಭಗೊಂಡಿದೆ. ಈ ಹಂತದಲ್ಲಿ ಒಟ್ಟು 07 ರಾಜ್ಯಗಳ 59 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.
ಮಧ್ಯಾಹ್ನ 02 ಗಂಟೆಯವರೆಗೆ ಒಟ್ಟಾರೆಯಾಗಿ 39.74% ಮತದಾನವಾಗಿದೆ.
ಬಿಹಾರದಲ್ಲಿ 35.22%, ಹರ್ಯಾಣದಲ್ಲಿ 39.16%, ಮಧ್ಯಪ್ರದೇಶದಲ್ಲಿ 42.27%, ಉತ್ತರಪ್ರದೇಶದಲ್ಲಿ 34.30%, ಪಶ್ಚಿಮ ಬಂಗಾಲ 55.77%, ಜಾರ್ಖಂಡ್ 47.16%, ದೆಹಲಿಯಲ್ಲಿ 33.65% ಮತದಾನವಾಗಿದೆ.
– ಸಮಾಜ ಸೇವಕ ಸುನಿಲ್ ವರ್ಮಾ ಎಂಬವರ ಮುಂದಾಳತ್ವದಲ್ಲಿ ನವದೆಹಲಿಯ ದ್ವಾರಕಾ ಸೆಕ್ಟರ್ 7ರ ಜಾಗೃತ ಮತದಾರರು ರಾಂ ಪಾಲ್ ಚೌಕದಲ್ಲಿ ಜೊತೆಗೂಡಿ ಎಲ್ಲರಿಗೂ ಮತದಾನ ಮಾಡುವಂತೆ ಪ್ರೇರೇಪಿಸುವ ಅಭಿಯಾನವನ್ನು ಕೈಗೊಂಡಿದ್ದರು.
Delhi: Priyanka Gandhi Vadra and Robert Vadra leave after casting their vote at a polling booth in Sardar Patel Vidyalaya at Lodhi Estate #LokSabhaElections2019 pic.twitter.com/FDL6hHXtsq
— ANI (@ANI) May 12, 2019
– ನವದೆಹಲಿಯ ಲೋಧಿ ಎಸ್ಟೇಟ್ ಬಳಿ ಇರುವ ಸರ್ದಾರ್ ಪಟೇಲ್ ವಿದ್ಯಾಲಯದ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಗಾಂಧಿ ಅವರು ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಆಗಮಿಸಿ ಮತದಾನ ಮಾಡಿದರು.
– ಘಟಾಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ಅವರ ಮೇಲೆ ಸ್ಥಳೀಯರು ಹಲ್ಲೆಗೆ ಮುಂದಾದಾಗ ಅವರ ಖಾಸಗಿ ಅಂಗರಕ್ಷಕರು ನಾಲ್ಕು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವರದಿಯಾಗಿದೆ. ಈ ಘಟನೆಯಲ್ಲಿ ತಮ್ಮ ಕಾರ್ಯಕರ್ತರೊಬ್ಬರಿಗೆ ಗಾಯಗಳಾಗಿದೆ ಎಂದು ಟಿಎಂಸಿ ಆರೋಪಿಸಿದೆ. ಗಾಯಾಳು ಕಾರ್ಯಕರ್ತನನ್ನು ಮೇದಿನೀಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
– ಪಶ್ಚಿಮ ಬಂಗಾಲದ ಕಾಂತಿ ಲೋಕ ಸಭಾ ಕ್ಷೇತ್ರದಲ್ಲಿನ ಮತದಾನ ಕೇಂದ್ರವೊಂದರಲ್ಲಿ ಬಿಜೆಪಿ ಏಜೆಂಟ್ ಗೆ ಥಳಿಸಲಾಗಿದೆ ಮತ್ತು ಆತನನ್ನು ಮತದಾನ ಕೇಂದ್ರದಿಂದ ಬಲವಂತವಾಗಿ ಹೊರ ಹಾಕಲಾಗಿದೆ ಎಂದು ವರದಿಯಾಗಿದೆ. ಬಿಜೆಪಿ ಬೆಂಬಲಿಗರ ಮತದಾನ ಗುರುತಿನ ಚೀಟಿಯನ್ನು ಕಸಿದುಕೊಳ್ಳಲಾಗಿದೆ ಎಂಬ ಆರೋಪವೂ ಕೇಳಿಬರುತ್ತಿದೆ.
– ವಿದೇಶಾಂಗ ಸಚಿವೆ ಹಾಗೂ ಭಾರತೀಯ ಜನತಾ ಪಕ್ಷದ ನಾಯಕಿ ಶ್ರೀಮತಿ ಸುಷ್ಮಾ ಸ್ವರಾಜ್ ಅವರು ನವದೆಹಲಿಯ ಔರಂಗಜೇಬ್ ರಸ್ತೆಯಲ್ಲಿರುವ ಎನ್.ಪಿ. ಸೀನಿಯರ್ ಸೆಕೆಂಡರಿ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದರು.
Delhi: External Affairs Minister Sushma Swaraj after casting her vote at a polling booth in NP Senior Secondary School in Aurangzeb Lane. #LokSabhaElections2019 #Phase6 pic.twitter.com/OwqUzkY7Lt
— ANI (@ANI) May 12, 2019
– ಉತ್ತರಪ್ರದೇಶದ ಮಛ್ಲಿಶಹರ್ ನ ಕುಬೂಲ್ ಪುರ್ ಮತದಾನ ಕೇಂದ್ರದಲ್ಲಿ ಮತದಾನ ಪ್ರಾರಂಭಗೊಂಡಿಲ್ಲ ಎಂದು ವರದಿಯಾಗಿದೆ. ಈ ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರು ಬೆಳಿಗ್ಗೆ 6 ಗಂಟೆಯಿಂದಲೇ ತಮ್ಮ ಹಕ್ಕನ್ನು ಚಲಾಯಿಸಲು ಕಾಯುತ್ತಿದ್ದರು. ಆದರೆ ಇಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಅವರಿಗೆ ಮತದಾನ ಮಾಡಲು ಸಾಧ್ಯವಾಗಲಿಲ್ಲ. ಬಳಿಕ 9 ಗಂಟೆಯವರೆಗೆ ಕಾದು ಬಳಿಕ ಅವರೆಲ್ಲಾ ಮತದಾನ ಮಾಡದೆ ವಾಪಸ್ಸಾಗಿದ್ದಾರೆ ಎಂದು ತಿಳಿದುಬಂದಿದೆ.
– ಹರ್ಯಾಣದ ಗುರುಗ್ರಾಮದಲ್ಲಿರುವ ಪಿನೆಕ್ರೆಸ್ಟ್ ಮತದಾನ ಕೇಂದ್ರದಲ್ಲಿ ತನ್ನ ಹಕ್ಕನ್ನು ಚಲಾಯಿಸಿದ ಭಾರತ ಕ್ರಿಕೆಟ್ ತಂಡದ ಕಪ್ತಾನ ವಿರಾಟ್ ಕೊಹ್ಲಿ ಅವರು ಮಾದ್ಯಮ ಕೆಮರಾಗಳ ಮುಂದೆ ಕಾಣಿಸಿಕೊಂಡಿದ್ದು ಹೀಗೆ.
Haryana: Team India Captain Virat Kohli after casting his vote at a polling booth in Pinecrest School in Gurugram pic.twitter.com/z3vzJvxWSp
— ANI (@ANI) May 12, 2019
– ಭೋಪಾಲ ಕ್ಷೇತ್ರದಿಂದ ಭಾರತೀಯ ಜನತಾಪಕ್ಷದ ಅಭ್ಯರ್ಥಿಯಾಗಿರುವ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ತಮ್ಮ ಹಕ್ಕನ್ನು ಚಲಾಯಿಸಿದರು.
– ಉತ್ತರ ಪ್ರದೇಶದ ಜೌನ್ ಪುರ ಲೋಕಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 303 ಹಾಗೂ ಸುಲ್ತಾನ್ ಪುರ ಲೋಕ ಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆಗಳಾದ 274 ಹಾಗೂ 278ರಲ್ಲಿ ಇವಿಎಂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲವೆಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.