ಕೆ.ಆರ್‌.ಪೇಟೆ ಪಟ್ಟಣಕ್ಕೆ ನೂರೆಂಟು ಸಮಸ್ಯೆ

ಒಳಚರಂಡಿ ಕಾಮಗಾರಿ ಅಪೂರ್ಣ, ಕುಲಗೆಟ್ಟಿರುವ ರಸ್ತೆಗಳು • ಹೊಸಹೊಳಲು ಕೆರೆ ಸೇರುತ್ತಿರುವ ಕಲುಷಿತ ನೀರು

Team Udayavani, May 12, 2019, 12:57 PM IST

mandya-tdy-9..

ಮಂಡ್ಯ: ಕೆ.ಆರ್‌.ಪೇಟೆ ಪುರಸಭೆಗೆ ಕಳೆದ ಐದು ವರ್ಷಗಳಲ್ಲಿ ಯಾವುದೇ ಅನುದಾನ ದೊರಕಲಿಲ್ಲ. ಪರಿಣಾಮ ಪಟ್ಟಣ ಅಭಿವೃದ್ಧಿಯ ಭಾಗ್ಯವನ್ನೂ ಕಾಣಲಿಲ್ಲ, ಅಂದವಾಗಲೂ ಇಲ್ಲ. ಒಂದೆಡೆ ಹಾಳಾದ ರಸ್ತೆಗಳು, ಅರ್ಧಕ್ಕೆ ನಿಂತಿರುವ ಒಳಚರಂಡಿ ಕಾಮಗಾರಿ, ಕುಡಿಯುವ ನೀರಿನ ಸಮಸ್ಯೆಯೂ ಸೇರಿದಂತೆ ನೂರೆಂಟು ಸಮಸ್ಯೆಗಳನ್ನು ಒಡಲಿನಲ್ಲಿರಿಸಿ ಕೊಂಡು ಪಟ್ಟಣ ಅಭಿವೃದ್ಧಿ ವಂಚಿತವಾಗಿದೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೆ.ಆರ್‌.ಪೇಟೆ ಪಟ್ಟಣದ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರು. ಆ ಹಣವೂ ಅಭಿವೃದ್ಧಿ ಕಾರ್ಯಗಳಿಗೆ ಸಮರ್ಪಕವಾಗಿ ಬಳಕೆಯಾಗದೆ ಪೋಲಾಯಿತು. ಆನಂತರದಲ್ಲಿ ಸರ್ಕಾರದಿಂದ ಯಾವುದೇ ಅನುದಾನವೂ ಬರಲಿಲ್ಲ. ಅಭಿವೃದ್ಧಿ ಎಂಬುದು ಹಳ್ಳ ಹಿಡಿಯುವಂತಾಯಿತು.

ಕಲುಷಿತ ವಾತಾವರಣ: ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿ ಅಪೂರ್ಣಗೊಂಡಿದ್ದು ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದೆ. ಪಟ್ಟಣದೊಳಗೆ ಬಹುತೇಕ ಮ್ಯಾನ್‌ಹೋಲ್ಗಳು ತುಂಬಿ ಹರಿಯುತ್ತಿದೆ. ದಿನೇದಿನೆ ಕಲುಷಿತ ವಾತಾವರಣ ಸೃಷ್ಟಿಯಾಗುತ್ತಿದೆ. ಕೊಳಚೆ ನೀರಿನ ದುರ್ವಾಸನೆ ಪಟ್ಟಣ ನಿವಾಸಿಗಳು ನರಕಯಾತನೆ ಅನುಭವಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಸೊಳ್ಳೆಗಳ ಸಂತತಿ ವೃದ್ಧಿಯಾಗುತ್ತಿದೆ.

ಕೆ.ಆರ್‌.ಪೇಟೆಯವರೇ ಆಗಿದ್ದ ಎಂ.ಡಿ. ಕೃಷ್ಣಮೂರ್ತಿ ಒಳಚರಂಡಿ ಮಂಡಳಿ ಅಧ್ಯಕ್ಷರಾಗಿದ್ದರು. ಆ ಸಮಯದಲ್ಲಿ ಪಟ್ಟನದ ಒಳಚರಂಡಿ ವ್ಯವಸ್ಥೆಯನ್ನು ಉತ್ತಮಪಡಿಸಲು ಹಣ ಬಿಡುಗಡೆ ಭರವಸೆ ನೀಡಿದ್ದರು. ಆದರೆ, ಅದು ಭರವಸೆಯಾಗೇ ಉಳಿಯಿತೇ ವಿನಃ ನಯಾಪೈಸೆ ಹಣವೂ ಬಿಡುಗಡೆಯಾಗಿಲ್ಲ. ಕಾಮಗಾರಿಗೆ ಹಣವಿಲ್ಲದೆ ಅರ್ಧಕ್ಕೆ ಸ್ಥಗಿತಗೊಂಡಿದೆ.

ಪಟ್ಟಣದ ಒಳಚರಂಡಿ ನೀರನ್ನು ಸಂಸ್ಕರಣೆ ಮಾಡದೆ ನೇರವಾಗಿ ಹೊಸಹೊಳಲು ಕೆರೆಗೆ ಹರಿಸಲಾಗುತ್ತಿದೆ. ಪಟ್ಟಣದ ಹೊರವಲಯದಲ್ಲಿರುವ ಕತ್ತರಘಟ್ಟ ಬಳಿ ಒಳಚರಂಡಿ ನೀರಿನ ಸಂಸ್ಕರಣಾ ಘಟಕ ಸ್ಥಾಪನೆಗೆ ಜಾಗ ಗುರುತಿಸಿದ್ದರೂ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಒಳಚರಂಡಿಯ ತ್ಯಾಜ್ಯ ನೀರು ಕೆರೆ ಸೇರುತ್ತಿರುವುದರಿಂದ ಕೆರೆಯೂ ಹಾಳಾಗುತ್ತಿದೆ ಎಂಬುದು ಸ್ಥಳೀಯ ನಾಗರಿಕರ ಆರೋಪವಾಗಿದೆ.

ರಸ್ತೆಗಳೂ ಉತ್ತಮವಾಗಿಲ್ಲ: ಪಟ್ಟಣದೊಳಗಿನ ರಸ್ತೆಗಳೂ ಉತ್ತಮವಾಗಿಲ್ಲ. ಪ್ರಮುಖ ರಸ್ತೆಗಳಲ್ಲಿ ಡಾಂಬರು ಕಿತ್ತು ಬಂದು ಹಳ್ಳ-ಗುಂಡಿಗಳು ನಿರ್ಮಾಣಗೊಂಡಿವೆ. ಪಟ್ಟಣದ ಶೇ.30ರಷ್ಟು ರಸ್ತೆಗಳು ಇನ್ನೂ ಡಾಂಬರನ್ನೇ ಕಂಡಿಲ್ಲ. ಅಲ್ಲದೆ, ಬಡಾವಣೆಯ ಬಹುತೇಕ ರಸ್ತೆಗಳು ಕಿರಿದಾಗಿದ್ದು, ವಾಹನಗಳ ಸಂಚಾರಕ್ಕೂ ಅನಾನುಕೂಲವಾಗಿದೆ. ವಿಶಾಲವಾದ ರಸ್ತೆಗಳೊಂದಿಗೆ ಬಡಾವಣೆಗಳ ಸೌಂದರ್ಯವನ್ನು ಹೆಚ್ಚಿಸುವುದಕ್ಕೂ ಪುರಸಭೆ ಮನಸ್ಸು ಕೊಟ್ಟಿಲ್ಲದಿರುವುದು ಕಂಡು ಬರುತ್ತಿದೆ.

ಕುಡಿವ ನೀರಿನ ಸಮಸ್ಯೆ: ಪಟ್ಟಣದ ಜನಸಂಖ್ಯೆಗೆ ಅನುಗುಣವಾಗಿ ಪಟ್ಟಣದೊಳಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಜಾರಿಗೊಳಿಸಿಲ್ಲ. ಈ ವೇಳೆಗೆ ಮೂರು ಹಂತದ ಕುಡಿಯುವ ನೀರಿನ ಯೋಜನೆ ಜಾರಿಯಾಗಬೇಕಿತ್ತು. ಆದರೆ, ಇನ್ನೂ ಒಂದು ಹಂತವಷ್ಟೇ ಪೂರ್ಣಗೊಂಡಿದೆ. ಪಟ್ಟಣದ ಜನರು ಕುಡಿಯುವ ನೀರಿಗೆ ಹೇಮಾವತಿ ನದಿ ನೀರನ್ನೇ ಅವಲಂಬಿಸಿದ್ದಾರೆ. ಬೇಸಿಗೆಯಲ್ಲಿ ವಾರಕ್ಕೆ ಎರಡು ಬಾರಿ ನೀರು ಪೂರೈಕೆ ಮಾಡಲಾಗುತ್ತಿದೆ. ಪಟ್ಟಣದ ಹೇಮಾವತಿ ಬಡಾವಣೆ, ಅಗ್ರಹಾರ, ಅಂಬೇಡ್ಕರ್‌ ನಗರಗಳಿಗೆ ಕುಡಿಯುವ ನೀರಿನ ತೊಂಬೆಗಳ ಮೂಲಕ ಈಗಲೂ ನೀರು ಸರಬರಾಜು ಮಾಡಲಾಗುತ್ತಿದೆ ಎನ್ನುವುದು ಪಟ್ಟಣದ ಜನರು ಹೇಳುವ ಮಾತಾಗಿದೆ.

ಪಟ್ಟಣದೊಳಗೆ ಸ್ವಚ್ಛತೆ ಮಾಯವಾಗಿದೆ. ಕಸ ಎಲ್ಲೆಂದರಲ್ಲಿ ಬಿದ್ದಿದೆ. ಪೌರ ಕಾರ್ಮಿಕರು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಪುರಸಭೆಯಲ್ಲಿ ಮೂರು ರೀತಿಯ ಪೌರ ಕಾರ್ಮಿಕರಿದ್ದಾರೆ. ಕಾಯಂ, ಗುತ್ತಿಗೆ ಹಾಗೂ ಪುರಸಭೆಯಿಂದ ನೇಮಕ ಮಾಡಿಕೊಂಡಿರುವ ಗುತ್ತಿಗೆ ನೌಕರರು. ಕಾಯಂ ಪೌರ ಕಾರ್ಮಿಕರು ಬೆರಳೆಣಿಕೆಯಷ್ಟಿದ್ದು ಅವರೆಲ್ಲರಿಗೂ ವಯಸ್ಸಾಗಿದೆ. 21 ಮಂದಿ ಗುತ್ತಿಗೆ ಪೌರ ಕಾರ್ಮಿಕರಿಗೆ ಪ್ರತಿ ತಿಂಗಳೂ ಸಂಬಳ ನೀಡುತ್ತಿಲ್ಲ. ಆರು ಅಥವಾ ಎಂಟು ತಿಂಗಳಿಗೊಮ್ಮೆ ವೇತನ ಪಾವತಿಸಲಾಗುತ್ತಿದೆ. ಹಾಗಾಗಿ ಅವರು ಸ್ವಚ್ಛತೆ ಕಡೆ ಅಷ್ಟಾಗಿ ಗಮನಹರಿಸುತ್ತಿಲ್ಲವೆಂಬ ಆರೋಪಗಳು ಕೇಳಿ ಬರುತ್ತಿವೆ.

ಪುರಸಭಾ ವ್ಯಾಪ್ತಿಯಲ್ಲಿರುವ ಮೂರು ಉದ್ಯಾನ ವನಗಳು ನಿರ್ವಹಣೆ ಕೊರತೆಯಿಂದ ಹಾಳಾಗಿವೆ. ಬೀದಿ ದೀಪಗಳು ಸಮರ್ಪಕವಾಗಿಲ್ಲ. ಪಟ್ಟಣ ಬೆಳವ ಣಿಗೆ ಕಾಣುತ್ತಿದ್ದರೂ ಅದಕ್ಕೆ ತಕ್ಕಂತೆ ರಸ್ತೆ, ಚರಂಡಿ, ಒಳಚರಂಡಿ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲಸೌಲಭ್ಯಗಳು ದೊರಕುತ್ತಿಲ್ಲ. ಅಭಿವೃದ್ಧಿ ಪಟ್ಟಣದೊಳಗೆ ಮರೀಚಿಕೆಯಾಗಿರುವ ಸಂದರ್ಭಚಿ ದಲ್ಲೇ ಪುರಸಭೆಗೆ ಚುನಾವಣೆ ಎದುರಾಗಿದೆ.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.