ತಿಪಟೂರು ನಗರಸಭೆ ಚುನಾವಣೆ ಟಿಕೆಟ್‌ಗೆ ಪೈಪೋಟಿ

Compete for Tiptur Municipal Election Tickets

Team Udayavani, May 12, 2019, 2:39 PM IST

tumkur-tdy-8..

Compete for Tiptur Municipal Election Tickets

ತಿಪಟೂರು: ಈಗಷ್ಟೇ ಲೋಕಸಭಾ ಚುನಾವಣಾ ಕದನ ಮುಗಿದು ಫ‌ಲಿತಾಂಶಕ್ಕೆ ಕಾಯುತ್ತಿರುವ ಸಂದರ್ಭದಲ್ಲಿ ರಾಜ್ಯ ಚುನಾವಣಾ ಆಯೋಗ ನಗರಸಭಾ ಚುನಾವಣೆ ಘೋಷಿಸಿದ್ದು ರಾಜಕೀಯ ಮುಖಂಡರಿಗೆ ಒಂದು ರೀತಿಯ ತಲೆನೋವಾಗಿ ಪರಿಣಮಿಸಿದೆ. ಯಾರಿಗೆ ಟಿಕೆಟ್ ಕೊಡಬೇಕು, ಯಾರಿಗೆ ಕೊಡಬಾರದು ಎಂಬ ಲೆಕ್ಕಾಚಾರದಲ್ಲಿ ಮುಖಂಡರು ಮುಳುಗಿದ್ದಾರೆ.

ಹೆಚ್ಚಿದ ಸ್ಪರ್ಧಾಕಾಂಕ್ಷಿಗಳು: ತಿಪಟೂರು ನಗರ ಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿದ್ದು, ಮೇ 29ರಂದು ಚುನಾವಣೆ ನಡೆಯಲಿದೆ. ನಗರಸಭಾ ವ್ಯಾಪ್ತಿಯಲ್ಲಿ ಒಟ್ಟು 31 ವಾರ್ಡ್‌ ಗಳಿದ್ದು, 45256 ಮತದಾರರಿದ್ದಾರೆ. ಅದರಲ್ಲಿ 21896 ಪುರುಷರು, 23357 ಮಹಿಳಾ ಮತಗಳಿವೆ. ಈಗಾಗಲೇ ಮೇ 9ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದರೂ, ಯಾವುದೇ ಪಕ್ಷದ ಅಭ್ಯರ್ಥಿ ಗಳಿಂದ ಅಥವಾ ಪಕ್ಷೇತರರಿಂದಾಗಲಿ ಇದುವರೆಗೂ ಒಂದೂ ನಾಮಪತ್ರವೂ ಸಲ್ಲಿಕೆಯಾಗಿಲ್ಲ. ಪಕ್ಷಗಳ ಮುಖಂಡರಿಗಂತೂ ಯಾರಿಗೆ ಟಿಕೆಟ್ ನೀಡಬೇಕೆಂಬುದೇ ತಲೆನೋವಾಗಿದ್ದು ಸ್ಪರ್ಧಾ ಕಾಂಕ್ಷಿಗಳ ಸಂಖ್ಯೆ ಮಾತ್ರ ಏರುತ್ತಿದೆ.

ಅಧಿಕೃತ ಬಿಡುಗಡೆ ಇಲ್ಲ: ಟಿಕೆಟ್ಗಾಗಿ ಮುಖಂಡರ ಮೇಲೆ ಒತ್ತಡಗಳು ಹೆಚ್ಚುತ್ತಿದ್ದು, ಟಿಕೆಟ್ ಸಿಗದವರು ಬಂಡಾಯ ಏಳುವ ಲಕ್ಷಣಗಳು ಈಗಾಗಲೇ ಗೋಚರಿಸುತ್ತಿದೆ. ಜೆಡಿಎಸ್‌, ಕಾಂಗ್ರೆಸ್‌ ಮತ್ತು ಬಿಜೆಪಿ ಮುಖಂಡರು ಕೆಲ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದರೂ ಅಧಿಕೃತವಾಗಿ ಬಿಡುಗಡೆಗೊಳಿಸಿಲ್ಲ. ಆದರೆ, ಅಭ್ಯರ್ಥಿಗಳು ನಾನೇ ಸ್ಪರ್ಧಿಸುತ್ತಿದ್ದೇನೆಂದು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೋ ಹಾಗೂ ಪಕ್ಷದ ಹೆಸರನ್ನು ಹಾಕಿಕೊಂಡು ರಾರಾಜಿಸುತ್ತಿದ್ದರೆ ಮುಖಂಡರು ಮಾತ್ರ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿ ತೊಡಗಿದ್ದಾರೆನ್ನಲಾಗಿದೆ.

ಚುನಾವಣೆಯಲ್ಲಿ ಮಾಜಿ ಸದಸ್ಯರೇ ಹೆಚ್ಚು ಸ್ಪರ್ಧೆ: ಈಗಾಗಲೇ ನಗರಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಒಂದೆರಡು ಬಾರಿ ಗೆದ್ದಿದ್ದ ಮಾಜಿ ಸದಸ್ಯರೇ ಚುನಾವಣೆಗೆ ಸ್ಪರ್ಧಿಸುತ್ತಿದ್ದು ಚುನಾವಣೆ ಎದುರಿ ಸುವ ಪಟ್ಟುಗಳನ್ನು ಕರಗತ ಮಾಡಿಕೊಂಡಿದ್ದಾರೆ. ನಗರವನ್ನು ಮಾದರಿ ನಗರವನ್ನಾಗಿ ಮಾಡುತ್ತೇ ವೆಂದು ಜನತೆಗೆ ಆಶ್ವಾಸನೆ ನೀಡಿ ಗೆದ್ದಿದ್ದ ಸದಸ್ಯರು ಈ ಬಾರಿಯೂ ನಾವೇ ಸ್ಪರ್ಧಿಸುತ್ತೇವೆ. ನಮಗೆ ಟಿಕೆಟ್ ಕೊಡಿ ಎಂದು ಒತ್ತಡ ಹಾಕುತ್ತಿದ್ದಾರೆ. ಇನ್ನೂ ಕೆಲವೆಡೆ ಸಾಮಾನ್ಯ ಹಾಗೂ ಮಹಿಳಾ ಮೀಸಲಾತಿ ಇರುವುದರಿಂದ ಅವರ ಪತ್ನಿಯರನ್ನು ಚುನಾವಣಾ ಕಣಕ್ಕೆ ಇಳಿಸುವ ಸಾಧ್ಯತೆಗಳು ಕಂಡುಬಂದಿವೆ.

ತಂತ್ರ-ಕುತಂತ್ರ: ಒಂದೇ ವಾರ್ಡ್‌ಗೆ 4-5 ಅಭ್ಯರ್ಥಿಗಳಿರುವ‌ ಕಾರಣ ಟಿಕೆಟ್ ಯಾರಿಗೆ ಕೊಡ ಬೇಕೆಂಬ ಗೊಂದಲ ಮುಖಂಡರಲ್ಲಿ ಮನೆ ಮಾಡಿದೆ. ಈಗಾಗಲೇ ಒಂದೆರಡು ಬಾರಿ ಗೆದ್ದು ಅಧಿಕಾರದ ರುಚಿ ಕಂಡಿರುವ ಸದಸ್ಯರು ಟಿಕೆಟ್ಗಾಗಿ ತಮ್ಮೆಲ್ಲಾ ತಂತ್ರ-ಕುತಂತ್ರಗಳನ್ನು ಉಪಯೋಗಿ ಸುತ್ತಿರುವುದು ಕಂಡು ಬರುತ್ತಿದೆ. ಪಕ್ಷದ ಯಾರನ್ನು ಕಳೆದುಕೊಳ್ಳಲು ಇಷ್ಟವಿಲ್ಲದ ಮುಖಂಡರಿಗೆ ಟಿಕೆಟ್ನಿಂದಾಗಿ ಎಲ್ಲಿ ಗೊಂದಲ ಉಂಟಾಗಿ ಬಿಡು ತ್ತದೆಯೋ ಎಂಬ ಭಯ ಕಾಡುತ್ತಿದೆ.

ಒಟ್ಟಾರೆ ವಿಧಾನಸಭಾ ಚುನಾವಣೆಗೂ ಕಡಿಮೆ ಇಲ್ಲವೆಂಬಂತೆ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿದ್ದು ತೀವ್ರ ಕುತೂಹಲ ಕೆರಳಿಸಿದೆ. ಜೆಡಿಎಸ್‌, ಬಿಜೆಪಿ ಹಾಗೂ ಕಾಂಗ್ರೆಸ್‌ ಗೆಲುವಿಗಾಗಿ ರಣತಂತ್ರ ಎಣೆಯುತ್ತಿದ್ದು, ಮತದಾರ ಪ್ರಭು ಮಾತ್ರ ಯಾರಿಗೆ ಮತಹಾಕಿ ಆಶೀರ್ವದಿಸುತ್ತಾನೋ ಎಂಬುದು ಫ‌ಲಿತಾಂಶದ ಬಳಿಕ ತಿಳಿದು ಬರಲಿದೆ.

ಟಾಪ್ ನ್ಯೂಸ್

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

11-koratagere

ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.