“ಅದ್ಧೂರಿ-2’ಗೆ ತೆರೆಮರೆಯಲ್ಲಿ ಸಿದ್ಧತೆ!
ಸೀಕ್ವೆಲ್ ಚಿತ್ರದ ಬಗ್ಗೆ ನಟ ನಿರಂಜನ್ ಹೇಳ್ಳೋದೇನು?
Team Udayavani, May 13, 2019, 3:00 AM IST
2012ರಲ್ಲಿ ತೆರೆಗೆ ಬಂದಿದ್ದ “ಅದ್ಧೂರಿ’ ಬಗ್ಗೆ ನಿಮಗೆಲ್ಲ ಗೊತ್ತೇ ಇದೆ. ಧ್ರುವ ಸರ್ಜಾ ಎನ್ನುವ ಸರ್ಜಾ ಕುಟುಂಬದ ಹುಡುಗನನ್ನ ಆ್ಯಕ್ಷನ್ ಪ್ರಿನ್ಸ್ ಆಗಿ ಚಿತ್ರರಂಗಕ್ಕೆ ಪರಿಚಯಿಸಿದ ಚಿತ್ರ ಅದು. ಈಗ ಅದೇ “ಅದ್ಧೂರಿ’ ಚಿತ್ರದ ಸೀಕ್ವೆಲ್ “ಅದ್ಧೂರಿ-2′ ತೆರೆಗೆ ಬರಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಕೆಲ ದಿನಗಳಿಂದ ಜೋರಾಗಿ ಹರಿದಾಡುತ್ತಿದೆ.
ಅಂದಹಾಗೆ, ಈ ಹಿಂದೆ “ಅದ್ಧೂರಿ’ ಚಿತ್ರವನ್ನು ನಿರ್ಮಿಸಿದ್ದ “ಸಿಎಂಆರ್ ಪ್ರೊಡಕ್ಷನ್ಸ್” ಬ್ಯಾನರ್‌ನಲ್ಲೇ ಶಂಕರ್ ರೆಡ್ಡಿ, ಮೋಹನ್ ಈ ಚಿತ್ರವನ್ನು ನಿರ್ಮಿಸಲಾಗುತ್ತಿದ್ದು, ಈ ಬಾರಿಯ “ಅದ್ಧೂರಿ’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಚಿತ್ರವನ್ನು ರಮೇಶ್ ವೆಂಕಟೇಶ್ ಎಂಬ ನವ ಪ್ರತಿಭೆ ನಿರ್ದೇಶಿಸಲಿದ್ದಾರೆ ಅನ್ನೋದು ಸದ್ಯ ಹರಿದಾಡುತ್ತಿರುವ ಸುದ್ದಿ. ಹಾಗಾದರೆ, ನಿಜಕ್ಕೂ “ಅದ್ಧೂರಿ-2′ ಚಿತ್ರ ತೆರೆಗೆ ಬರಲಿದೆಯಾ? ಚಿತ್ರದಲ್ಲಿ ಯಾರ್ಯಾರು ಇರಲಿದ್ದಾರೆ? ಚಿತ್ರದ ಕಥೆ ಏನು? ಹೀಗೆ “ಅದ್ಧೂರಿ-2′ ಬಗ್ಗೆ ಹರಿದಾಡುತ್ತಿರುವ ಹತ್ತಾರು ಪ್ರಶ್ನೆಗಳಿಗೆ ನಟ ನಿರಂಜನ್ ಸುಧೀಂದ್ರ ಅವರೇ ಉತ್ತರಿಸಿದ್ದಾರೆ.
ಈ ಬಗ್ಗೆ ಮಾತನಾಡುವ ನಿರಂಜನ್, “ಅದ್ಧೂರಿ-2′ ಟೈಟಲ್‌ನಲ್ಲಿ ಅದೇ ಸೀಕ್ವೆಲ್‌ನಲ್ಲಿ ಸಿನಿಮಾ ಮಾಡಲು ತಯಾರಿ ನಡೆಯುತ್ತಿರುವುದೇನೋ ನಿಜ. ಈಗಾಗಲೇ ಅದರ ನಿರ್ಮಾಪಕರು ಮತ್ತು ನಿರ್ದೇಶಕರ ಜೊತೆ ಒಂದೆರಡು ಸುತ್ತಿನ ಮಾತುಕತೆಯೂ ನಡೆದಿದೆ. ಕಥೆಯ ಎಳೆ ತುಂಬಾ ಚೆನ್ನಾಗಿ ಮಾಡಿಕೊಂಡಿದ್ದಾರೆ. ಕಥೆಯನ್ನು ಕೇಳಿದಾಗ ನನಗೂ ಇಷ್ಟವಾಗಿದೆ.
ಆದರೆ ಸ್ಕ್ರಿಪ್ಟ್ ಮೇಲೆ ಇನ್ನೂ ಒಂದಷ್ಟು ಕೆಲಸ ನಡೆಯುತ್ತಿರುವುದರಿಂದ, ಚಿತ್ರದ ಕಲಾವಿದರು, ತಂತ್ರಜ್ಞರು, ಶೂಟಿಂಗ್ ಮತ್ತಿತರ ಯಾವುದೇ ಸಂಗತಿಗಳು ಅಂತಿಮವಾಗಿಲ್ಲ. ಸ್ಕ್ರಿಪ್ಟ್ ಅಂತಿಮವಾದ ಬಳಿಕವಷ್ಟೇ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಮಾಡಬಹುದು. ಇತರೆ ವಿಷಯಗಳನ್ನು ಹಂಚಿಕೊಳ್ಳಬಹುದು’ ಎನ್ನುತ್ತಾರೆ.
“ಸದ್ಯ “ಅದ್ಧೂರಿ-2′ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಇದೇ ತಿಂಗಳ ಅಂತ್ಯದೊಳಗೆ ಈ ಚಿತ್ರದ ಬಗ್ಗೆ ಸ್ಪಷ್ಟತೆ ಸಿಗಲಿದೆ. ಆಮೇಲೆ ಆ ಚಿತ್ರದ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಬಹುದು’ ಎನ್ನುವುದು ನಿರಂಜನ್ ಮಾತು.
ಇನ್ನು ಪ್ರಿಯಾಂಕ ಉಪೇಂದ್ರ ಅಭಿನಯದ “ಸೆಕೆಂಡ್ ಹಾಫ್’ ಚಿತ್ರದ ಮೂಲಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾದ ನಿರಂಜನ್ ಈಗ “ನಮ್ ಹುಡುಗ್ರು ಕಥೆ’ ಚಿತ್ರದಲ್ಲಿ ಬ್ಯುಸಿಯಾಗಿದ್ದು, ಇದೇ ಸೆಪ್ಟೆಂಬರ್ ವೇಳೆಗೆ ಈ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ. ಒಟ್ಟಾರೆ “ಅದ್ಧೂರಿ-2′ ಬಗ್ಗೆ ಹರಿದಾಡುತ್ತಿರುವ ಎಲ್ಲಾ ಅಂತೆ-ಕಂತೆಗಳಿಗೆ ಸ್ಪಷ್ಟತೆ ಸಿಗಬೇಕಾದರೆ ಇನ್ನೂ ಕೆಲವು ದಿನಗಳು ಕಾಯಬೇಕಾಗುತ್ತದೆ ಅನ್ನೋದು ಚಿತ್ರತಂಡದ ಮೂಲಗಳ ಮಾಹಿತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.