ಸಮಾರಂಭಗಳ ಯಶಸ್ಸು ನಿರೂಪಕರ ಕೈಲಿ

Team Udayavani, May 13, 2019, 3:02 AM IST

samarabha

ಬೆಂಗಳೂರು: ಯಾವುದೇ ಸಭೆ, ಸಮಾರಂಭಗಳಲ್ಲಿ ನಿರೂಪಕರ ನಿರೂಪಣೆಯಲ್ಲಿ ಸತ್ವ ಇದ್ದರೆ ಮಾತ್ರ, ಅಂತಹ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ ಎಂದು ವಿದ್ವಾನ್‌ ಚಂದ್ರಶೇಖರ ನಾವಡ ಅಭಿಪ್ರಾಯ ವ್ಯಕ್ತಪಡಿಸಿದರು.

ಹೊಸಕೆರೆಹಳ್ಳಿಯ ಕಲಾಭೂಮಿಕಾ ಪ್ರತಿಷ್ಠಾನ, ಬಸವನಗುಡಿಯ ಅಬಲಾಶ್ರಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ “ಮಾತು ಬಲ್ಲವರಿಗೆ ಭಾವದೌತಣ’, ಕಾರ್ಯಕ್ರಮದಲ್ಲಿ ನಿರೂಪಣೆ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಿರೂಪಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

ವಿಭಿನ್ನವಾದ ಮಾತಿನ ಶೈಲಿಯ ಮೂಲಕ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವ ಶಕ್ತಿ ನಿರೂಪಕರಿಗೆ ಇರುತ್ತದೆ. ನಿರೂಪಣೆಯಲ್ಲಿ ಸತ್ವವಿಲ್ಲದೆ ಹೋದರೆ, ಅಂತಹ ಕಾರ್ಯಕ್ರಮದಲ್ಲಿ ಕಳೆಯಿರುವುದಿಲ್ಲ. ಕಾರ್ಯಕ್ರಮವನ್ನು ಗೆಲ್ಲಿಸುವುದು ಮತ್ತು ಸೋಲಿಸುವುದು ಎರಡೂ ನಿರೂಪಕರ ಕೈಯಲ್ಲಿರುತ್ತದೆ ಎಂದರು.

ಇತ್ತೀಚಿನ ದಿನಗಳಲ್ಲಿ ನಿರೂಪಣಾ ಕ್ಷೇತ್ರದಲ್ಲಿ ಹಲವು ಮಂದಿ ಹೆಸರು ಮಾಡಿದ್ದಾರೆ. ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇಂತಹ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸ ನಡೆಯಬೇಕಾಗಿದ್ದು, ಈ ನಿಟ್ಟಿನಲ್ಲಿ ಕಲಾಭೂಮಿಕಾ ಪ್ರತಿಷ್ಠಾನ ಹಮ್ಮಿಕೊಂಡಿರುವ ಸನ್ಮಾನ ಕಾರ್ಯಕ್ರಮ ಪ್ರಶಂಸನೀಯ ಎಂದು ತಿಳಿಸಿದರು.

ಸಾಧನೆ ಮಾಡಿ: ಹಿರಿಯ ಹಿಂದೂಸ್ತಾನಿ ಗಾಯಕ ಡಾ.ಮೃತ್ಯುಂಜಯ ಶೆಟ್ಟರ್‌ ಮಾತನಾಡಿ, ಯಾವುದೇ ಕ್ಷೇತ್ರವಿರಲಿ, ಆ ಕ್ಷೇತ್ರದಲ್ಲಿ ಹೆಸರು ಮಾಡಬೇಕಾದರೆ ಪರಿಶ್ರಮ ಅಗತ್ಯ. ಪರಿಶ್ರಮ ಇಲ್ಲದೆ ಫ‌ಲ ನಿರೀಕ್ಷೆ ಮಾಡುವುದರಲ್ಲಿ ಉಪಯೋಗವಿಲ್ಲ. ಸಾಧನೆ ಮಾಡಿ ಸನ್ಮಾನಕ್ಕೆ ಅರ್ಹರಾಗಬೇಕು ಎಂದು ಹೇಳಿದರು.

ಮಾತು ಜ್ಯೋತಿಯಂತಿರಬೇಕು, ಪ್ರೀತಿಯ ನುಡಿ ಅದರಲ್ಲಿ ಅಡಗಿರಬೇಕು. ಅರ್ಥವಿಲ್ಲದ ಮಾತಿನಲ್ಲಿ ಯಾವುದೇ ಪ್ರಯೋಜವಿಲ್ಲ. ಈ ದೃಷ್ಟಿಯಿಂದಲೇ ಹಿರಿಯರು ಮಾತು ಬಲ್ಲವರ ಬಿಲ್ಲಿನ ಬಾಣವಾಗಬೇಕು ಎಂದು ಹೇಳುತ್ತಾರೆ ಎಂದರು.

ಇದೇ ವೇಳೆ ನಿರೂಪಣಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ನೃತ್ಯನಿರ್ದೇಶಕ ಸುಗ್ಗವನಹಳ್ಳಿ ಷಡಾಕ್ಷರಿ, ಹರೀಶ್‌ ನಾಗರಾಜು, ಕಲಾದೇಗುಲ ಶ್ರೀನಿವಾಸ್‌ ಅವರನ್ನು ಸನ್ಮಾನಿಸಲಾಯಿತು.

ಹಿರಿಯ ತಬಲಾ ವಾದಕ ಸತೀಶ್‌ ಹಂಪಿಹೊಳಿ, ಕರ್ನಾಟಕ ಗಮಕ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ.ಎಂ.ಆರ್‌.ಸತ್ಯನಾರಾಯಣ, ಕಲಾಭೂಮಿಕಾ ಪ್ರತಿಷ್ಠಾನದ ಅಧ್ಯಕ್ಷ ದಿವಾಕರ ಕಶ್ಯಪ್‌ ಇದ್ದರು. ಅಬಲಾಶ್ರಮದ ವಿದ್ಯಾರ್ಥಿಗಳು ಕುವೆಂಪು, ಜಿಎಸ್‌ಎಸ್‌ ಸೇರಿದಂತೆ ಕೆಲವು ಹಿರಿಯ ಕವಿಗಳ ಗೀತೆಗಳನ್ನು ಹಾಡಿದರು.

ಟಾಪ್ ನ್ಯೂಸ್

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

Rangavaibhava

Golden Jubliee: ಕರುನಾಡ ರಂಗವೈಭವ ಮತ್ತೆ ಮರಳಿ ತರಬೇಕಿದೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್‌ ಫಾಲ್ಸ್‌ ಸೀಲಿಂಗ್‌

Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್‌ ಫಾಲ್ಸ್‌ ಸೀಲಿಂಗ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.