ಯಕ್ಷದೇವ ಅನಂತರಾಮ ಬಂಗಾಡಿ ನಿಧನ


Team Udayavani, May 13, 2019, 6:10 AM IST

bangady

ಬೆಳ್ತಂಗಡಿ: ಜೋತಿಷ ಜ್ಞಾನರತ್ನ, ಯಕ್ಷದೇವ ಸಂಶೋಧಕ ಅನಂತರಾಮ ಬಂಗಾಡಿ (68) ಅವರು ಅಲ್ಪಕಾಲದ ಅಸೌಖ್ಯ ದಿಂದ ಮೇ 12ರಂದು ಪೂರ್ವಾಹ್ನ 11.45ಕ್ಕೆ ಸ್ವಗೃಹದಲ್ಲಿ ನಿಧನ ಹೊಂದಿದರು.

ದಕ್ಷಿಣ ಕನ್ನಡದ ಬೆಳ್ತಂಗಡಿಯ ಮಾಯಿಲ ಭಂಡಾರಿ ವಂಶದ ಕುತ್ರೊಟ್ಟು ಮಂಜು ಭಂಡಾರಿ ಮತ್ತು ಕಿನ್ಯಕ್ಕ ದಂಪತಿಯ ದ್ವಿತೀಯ ಪುತ್ರರಾದ ಅನಂತರಾಮ ಅವರು ತುಳು ಭಾಷೆಯಲ್ಲಿ ಜೋತಿಷ ಗ್ರಂಥವನ್ನು ಮೊತ್ತಮೊದಲ ಬಾರಿಗೆ ಬರೆದ ಸಂಶೋಧಕ. 150ಕ್ಕೂ ಅಧಿಕ ಯಕ್ಷಗಾನ ಪ್ರಸಂಗ ರಚಿಸಿದ ತುಳುನಾಡಿನ ಅಪರೂಪದ ಸಾಧಕ.

ವಿದ್ಯಾಭ್ಯಾಸ
1951ರ ನ.14ರಂದು ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ಬಂಗಾಡಿಯಲ್ಲಿ ಪೂರೈಸಿ, ಹೈಸ್ಕೂಲು ವಿದ್ಯಾಭ್ಯಾಸ ವನ್ನು ಹಾಸನದ ಹೆತ್ತೂರಿನಲ್ಲಿ ಆರಂಭಿಸಿ ಎಸೆಸೆಲ್ಸಿ ಪೂರ್ಣ ಗೊಳಿಸಿದರು. ಕವಿ ನೀಲಕಂಠ ಭಟ್‌ ಶಿರಾಡಿಪಾಲರ ಮಾರ್ಗ ದರ್ಶನದಲ್ಲಿ ಕನ್ನಡರತ್ನ ಪರೀಕ್ಷೆಯನ್ನು ಖಾಸಗಿಯಾಗಿ ಬರೆದು ಶಿಮಂತೂರು ನಾರಾಯಣ ಶೆಟ್ಟರ ಮಾರ್ಗದರ್ಶನದಲ್ಲಿ ಯಕ್ಷಗಾನ ಛಂದಸ್ಸನ್ನು ಅಧ್ಯಯನ ಮಾಡಿದ್ದರು. ಜೋತಿಷಿ, ಸಾಹಿತಿ, ಹರಿಕಥಾ ಪ್ರವಚನಕಾರ, ನಾಟಕ ದಿಗªರ್ಶಕ, ತೊಗಲು ಬೊಂಬೆಯಾಟ ಸೇರಿದಂತೆ ವರ್ಣಾಲಂಕಾರ, ವಸ್ತ್ರಾಲಂಕಾರ, ಪಾಡªನ ಪರಿಣತಿ ಪಡೆದ ಬಹು ಅಪೂರ್ವ ಸಾಧಕರಾಗಿ ಜಿಲ್ಲೆಯ ಮನೆಮಾತಾಗಿದ್ದರು.

ಕ್ರೈಸ್ತ ಸಂತರ ಕಥೆಗಳನ್ನು ಯಕ್ಷಗಾನಕ್ಕೆ ಅಳವಡಿಸುವದ ರೊಂದಿಗೆ ಹೊಸ ಭಾಷ್ಯ ಬರೆದಿದ್ದರು. ಸಮಾನಮನಸ್ಕ ಸ್ನೇಹಿತರೊಡಗೂಡಿ “ಸೌಹಾರ್ದ ಕಲಾವಿದರು ಯಕ್ಷರಂಗ ಬಂಗಾಡಿ’ ಎಂಬ ತಂಡ ಕಟ್ಟಿ ಸುಮಾರು 15 ವರ್ಷ ಯಕ್ಷ ಕಲೆಯನ್ನು ಪಸರಿಸಲು ಅಪಾರ ಕೊಡುಗೆ ಸಲ್ಲಿಸಿದ್ದರು.

ನಮ್ಮ ಸೌಹಾರ್ದ ಕಲಾವಿದರ ಯಕ್ಷರಂಗ ಬಂಗಾಡಿ ತಂಡದ ಮೂಲಕ ಶಾಲಾ ಕಾಲೇಜುಗಳಲ್ಲಿ ಪರಿಸರ ಸಂರಕ್ಷಣೆ ಸಂದೇಶ ಸಾರಲು 50ಕ್ಕೂ ಹೆಚ್ಚು ಪ್ರದರ್ಶನಗಳನ್ನು ನೀಡಿದ್ದರು. ಫಿನ್‌ಲಾÂಂಡ್‌ – ಭಾರತದ ಜಾನಪದ ಅಧ್ಯಯನಕ್ಕಾಗಿ ಮತ್ತು ತುಳು ಶಬ್ದಕೋಶ ರಚನೆಗಾಗಿ ತುಳು ನಿಘಂಟು ಕಾರ್ಯಾಗಾರದಲ್ಲಿಯೂ ಸೇವೆ ಸಲ್ಲಿಸಿದ್ದರು.

ಪ್ರಶಸ್ತಿ ಪುರಸ್ಕಾರ
ಭಾರತೀಯ ಜೋತಿಷ ಸಂಸ್ಥೆಯಿಂದ “ಜೋತಿಷ ಜ್ಞಾನರತ್ನ, ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕುಬೆವೂರು ಪ್ರತಿಷ್ಠಾನ ಯಕ್ಷಗಾನ ಪ್ರಸಂಗ ಸಾಹಿತ್ಯ ಪ್ರಶಸ್ತಿ, ಕೊರಗಪ್ಪ ಪ್ರಶಸ್ತಿ ಪ್ರತಿಷ್ಠಾನ ಪುರಸ್ಕಾರ, ಗಣಪಯ್ಯ ಶೆಟ್ಟಿ ಸ್ಮಾರಕ ಪ್ರಶಸ್ತಿ, ಪುಳಿಂಚ ರಾಮಯ್ಯ ಶೆಟ್ಟಿ ಪ್ರತಿಷ್ಠಾನ ಪ್ರಶಸ್ತಿ, ಅಖೀಲ ಭಾರತ ತುಳು ಸಾಹಿತ್ಯ ಸಮ್ಮೇಳನ ಪ್ರಶಸ್ತಿ, ವಿಶ್ವ ತುಳು ಸಮ್ಮೇಳನ ಪ್ರಶಸ್ತಿ, ತುಳುನಾಡ ಸಿರಿ ಪ್ರಶಸ್ತಿ, ಸ್ಕಂದ ಪುರಸ್ಕಾರ ಮತ್ತು ಇತ್ತೀಚೆಗೆ ದೊರೆತ ಯಕ್ಷದೇವ ಪ್ರಶಸ್ತಿ ಜತೆಗೆ ನೂರಾರು ಸಂಘ – ಸಂಸ್ಥೆಗಳು ಅವರನ್ನು ಸಮ್ಮಾನಿಸಿ ಪುರಸ್ಕರಿಸಿವೆ.

ಮೃತರು ಪತ್ನಿ ಸುಮತಿ, ಮಗ ಸಂದೇಶ್‌ ಬಂಗಾಡಿ, ಮಗಳು ಸಂಧ್ಯಾ, ಅಳಿಯ ಹಿರೇಬೆಟ್ಟು ಕೇಶವ ಭಂಡಾರಿ ಮೊದಲಾದವರನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.