ಕೇಂದ್ರ ಸರಕಾರದ ಆವಾಸ್‌ ಯೋಜನೆ ಮನೆ ಹಸ್ತಾಂತರ

•ಉರ್ವ: 26ನೇ ವಾರ್ಡ್‌ನಲ್ಲಿ ಒಟ್ಟು ಆರು ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ

Team Udayavani, May 13, 2019, 9:58 AM IST

mangalore-tdy-2..

ಉರ್ವದ ಗೀತಾ ಎಂಬುವವರಿಗೆ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಆವಾಸ್‌ ಯೋಜನೆಯ ಮನೆ ಹಸ್ತಾಂತರ ಮಾಡಿದರು.

ಮಹಾನಗರ, ಮೇ 12: ಕೇಂದ್ರ ಸರಕಾರದ ಆವಾಸ್‌ ಯೋಜನೆಯಿಂದ ದೊರಕುವ ಒಂದೂವರೆ ಲಕ್ಷ ಅನುದಾನ, ರಾಜ್ಯ ಸರಕಾರ, ಮನಪಾದ ಸಹಕಾರದೊಂದಿಗೆ ಮತ್ತು ಬಿಜೆಪಿ ಸ್ಥಳೀಯ ಕಾರ್ಯಕರ್ತರು ಮತ್ತು ದಾನಿಗಳ ನೆರವಿನಿಂದ ಉರ್ವದ 26ನೇ ವಾರ್ಡ್‌ನಲ್ಲಿ ಗೀತಾ ಎಂಬುವವರಿಗೆ ಒಟ್ಟು ಆರು ಲಕ್ಷ ರೂ. ಮೊತ್ತದಲ್ಲಿ ನಿರ್ಮಿಸಲಾದ ‘ಅಟಲ್ ನಿಲಯ’ ಮನೆಯನ್ನು ರವಿವಾರ ಹಸ್ತಾಂತರಿಸಲಾಯಿತು.

ಮನೆ ಹಸ್ತಾಂತರ ಮಾಡಿ ಮಾತನಾಡಿದ ಸಂಸದ ನಳಿನ್‌ ಕುಮಾರ್‌ ಕಟೀಲು, ಕೇಂದ್ರ ಸರಕಾರದ ಆವಾಸ್‌ ಯೋಜನೆಯಿಂದ ಹಲವಾರು ಬಡಜನರಿಗೆ ಮನೆ ಕಟ್ಟಲು ಅವಕಾಶ ಸಿಕ್ಕಿದೆ. ಇದರಂತೆ ಬಡ ಜನರ ನೆರವಿಗಾಗಿ ಮಾಡಿದ ಹಲವಾರು ಯೋಜನೆಗಳು ಮಾಹಿತಿಯ ಕೊರತೆಯಿಂದ ಅರ್ಹರಿಗೆ ಸಿಗುತ್ತಿಲ್ಲ. ಈ ಬಗ್ಗೆ ಜನರಿಗೆ ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಹೇಳಿದರು.

ಹಲವರಿಗೆ ಉಪಯೋಗ:

ಶಾಸಕ ವೇದವ್ಯಾಸ ಕಾಮತ್‌ ಅವರು ಮಾತನಾಡಿ, ಕೇಂದ್ರದ ವಿವಿಧ ಜನಪರ ಯೋಜನೆಗಳಿಂದ ಜಿಲ್ಲೆಯ ಸಾವಿರಾರು ಮಂದಿ ಉಪಯೋಗ ಪಡೆದು ಕೊಂಡಿದ್ದು, ಅದರೊಂದಿಗೆ ಗೀತಾ ಅವರ ಮನೆ ಸಂಪೂರ್ಣ ಕಟ್ಟಿಸಿಕೊಡು ವಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಶ್ರಮ ಮತ್ತು ದಾನಿಗಳ ಸಹಾಯವನ್ನು ಶ್ಲಾಘಿಸಿದರು.

ದಾನಿಗಳಾದ ಬಾಬಾ ಆಲಂಗಾರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ್‌ ಮಿಜಾರ್‌, ಮಹಾಶಕ್ತಿ ಕೇಂದ್ರದ ಜನಾರ್ದನ ಕುಡ್ವ, ಮನಪಾ ಮಾಜಿ ಸದಸ್ಯರಾದ ರೂಪಾ ಡಿ. ಬಂಗೇರ, ಜಯಂತಿ ಆಚಾರ್‌, ವಾರ್ಡ್‌ ಅಧ್ಯಕ್ಷ ಅರುಣ್‌ ಉರ್ವ, ವಾರ್ಡ್‌ ಉಸ್ತುವಾರಿ ಗಣೇಶ್‌ ಕುಲಾಲ್, ಶಕ್ತಿ ಕೇಂದ್ರದ ಪ್ರಮುಖ್‌ ಕಿಶೋರ್‌ ಕುಮಾರ್‌, ಸುಧೀರ್‌ ಬಜಿಲಕೇರಿ, ಬಿಜೆಪಿ ಮುಖಂಡರಾದ ವಿನಯ ಎಲ್. ಶೆಟ್ಟಿ, ವಸಂತ ಜೆ. ಪೂಜಾರಿ, ಮೋಹನ್‌ ಆಚಾರ್‌, ಅಮಿತಕಲಾ, ವಿಜಯ ಉರ್ವ, ಸುಭೋದ್‌ ಕುಮಾರ್‌, ಸುಬ್ರಹ್ಮಣ್ಯ, ರಾಜಕುಮಾರ್‌ ಚಿಲಿಂಬಿ, ಚೆನ್ನಕೇಶವ, ದಾನಿಗಳಾದ ರಾಕೇಶ್‌ ಚಿಲಿಂಬಿ, ಅಜಿತ್‌ ಶೆಟ್ಟಿ, ರಂಜನ್‌ ಕುಮಾರ್‌, ಉಪೇಂದ್ರ ಉರ್ವಸ್ಟೋರ್‌, ಚಂದ್ರಹಾಸ್‌ ಬೋಳಾರ್‌, ಸುದರ್ಶನ್‌ ರಾವ್‌ ಉರ್ವ ಮತ್ತು ಇತರ ದಾನಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.