ಸ್ಥಳೀಯ ಕ್ರೀಡಾಪಟುಗಳಿಗೆ ಸಂಸ್ಥೆಯಿಂದ ಪ್ರೋತ್ಸಾಹ’
Team Udayavani, May 13, 2019, 11:21 AM IST
ಉಚಿತ ಫುಟ್ಬಾಲ್ ಬೇಸಗೆ ಶಿಬಿರದ ಸಮಾರೋಪದಲ್ಲಿ ಹಲವಾರು ತಂಡಗಳು ಭಾಗವಹಿಸಿದವು.
ಉಳ್ಳಾಲ, ಮೇ 12: ಭಾರತ್ ಪ್ರೌಢಶಾಲಾ ಕ್ರೀಡಾಂಗಣ ಹಲವಾರು ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಪಟುಗಳನ್ನು ರೂಪಿಸಿದ ಹೆಗ್ಗಳಿಕೆಯಿದ್ದು, ಮುಂದಿನ ದಿನಗಳಲ್ಲಿ ಈ ಕ್ರೀಡಾಂಗಣದಲ್ಲಿ ಸಾಧನೆ ಮಾಡುವ ಸ್ಥಳೀಯ ಕ್ರೀಡಾಪಟುಗಳಿಗೆ ಸಂಸ್ಥೆ ಪ್ರೋತ್ಸಾಹ ನೀಡಲಿದೆ ಎಂದು ಉಳ್ಳಾಲ ಮೊಗವೀರ ಸಂಘದ ಅಧ್ಯಕ್ಷ ಭರತ್ ಕುಮಾರ್ ಉಳ್ಳಾಲ್ ಅಭಿಪ್ರಾಯಪಟ್ಟರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಮಂಗಳೂರು ಹಾಗೂ ಯೂತ್ ಸ್ಫೋರ್ಟ್ಸ್ ಅಕಾಡೆಮಿ ಮತ್ತು ಉಳ್ಳಾಲ ಫುಟ್ಬಾಲ್ ಅಕಾಡೆಮಿ ಮಾಸ್ತಿಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಉಳ್ಳಾಲ ಭಾರತ್ ಪ್ರೌಢಶಾಲಾ ಮೈದಾನದಲ್ಲಿ ನಡೆದ 17ನೇ ವರ್ಷದ ಉಚಿತ ಫುಟ್ಬಾಲ್ ಬೇಸಗೆ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉದ್ಯಮಿ ಯು.ಎಚ್. ಹಸೈನಾರ್, ಆ್ಯಶ್ ಫುಟ್ಬಾಲ್ ಕ್ಲಬ್‌ನ ಅಧ್ಯಕ್ಷ ಅಝೀಂ, ಸೋಕರ್ ಫುಟ್ಬಾಲ್ ಕ್ಲಬ್‌ನ ಸದಸ್ಯ ಹಾಗೂ ರಾಷ್ಟ್ರಮಟ್ಟದ ಫುಟ್ಬಾಲ್ ಆಟಗಾರ ಅಯಾಝ್, ಉದ್ಯಮಿ ಎಚ್.ಕೆ. ಖಾದರ್, ಉಳ್ಳಾಲ ಕ್ರಿಕೆಟ್ ಬೋರ್ಡ್ ಅಧ್ಯಕ್ಷ ಖಲೀಲ್ ಇಬ್ರಾಹಿಂ, ಭಾರತ್ ಶಿಕ್ಷಣ ಸಂಸ್ಥೆಯ ಸಂಚಾಲಕ ಯಶವಂತ ಅಮೀನ್ ಉಪಸ್ಥಿತರಿದ್ದರು.
ಉಳ್ಳಾಲ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕಿ ವಿನಯ ಕುಮಾರಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರೀತಂ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ತರಬೇತುದಾರ ಹಾಗೂ ಉಳ್ಳಾಲ ಫುಟ್ಬಾಲ್ ಅಕಾಡೆಮಿ ಅಧ್ಯಕ್ಷ ಸಾಜಿದ್ ಉಳ್ಳಾಲ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.