23ರಂದು ಮತ ಎಣಿಕೆ: ನಿಷೇಧಾಜ್ಞೆ

Team Udayavani, May 13, 2019, 12:30 PM IST

hasan-tdy-3

ಜಿಲ್ಲಾಧಿಕಾರಿ

ಹಾಸನ: ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯವು ಮೇ 23 ರಂದು ಹಾಸನ ನಗರದ ಸರ್ಕಾರಿ ಎಂಜಿನಿಯ ರಿಂಗ್‌ ಕಾಲೇಜ್‌ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ 23ರ ಬೆಳಗ್ಗೆ 6 ಗಂಟೆ ಯಿಂದ 24 ರ ಮಧ್ಯರಾತ್ರಿ 12 ಗಂಟೆಯವರೆಗೆ 2 ದಿನ ಗಳು ಮುಂಜಾಗ್ರತೆಗಾಗಿ ಡೀಸಿ ಹಾಗೂ ಜಿಲ್ಲಾ ದಂಡಾ ಧಿಕಾರಿಗಳಾದ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಯಾವುದೇ ರೀತಿಯ ಮೆರವಣಿಗೆ, ವಿಜಯೋತ್ಸವ ಮತ್ತು ಕರಾಳ ದಿನಾ ಚರಣೆ ನಡೆಸುವುದು ನಿಷೇಧಿಸಿದೆ. ಯಾವುದೇ ಸ್ಫೋಟಕಗಳನ್ನು ಕೊಂಡೊ ಯ್ಯುವುದು, ವಿಜಯೋತ್ಸವದ ನೆಪದಲ್ಲಿ ಹೂ ಬಾಣಗಳು ಪಟಾಕಿ ಸಿಡಿಸುವುದು, ಸಾರ್ವಜನಿಕರಿಗೆ ಭೌತಿಕ ವಾಗಿ ಹಿಂಸೆ ಯನ್ನು ಉಂಟು ಮಾಡಲು ಬಳಸಬಹು ದಾದಂತಹ ಅಪಾಯಕಾರಿ ಆಯುಧ ಗಳನ್ನು ಒಯ್ಯುವುದು ನಿಷೇಧಿಸಿದೆ.

ಬಂದ್‌, ಪ್ರತಿಭಟನೆ ಮುಷ್ಕರ, ಪ್ರತಿಕೃತಿ ದಹನ, ಪ್ರದರ್ಶನ ಹಾಗೂ ಪೂರಕ ಚಟುವಟಿಕೆ ಗಳನ್ನು ನಿಷೇಧಿಸಿದೆ. ಯಾವುದೇ ಖಾಸಗಿ, ಸಾರ್ವಜನಿಕ ಆಸ್ತಿಗಳನ್ನು ಹಾನಿಗೊಳಿಸುವ ಮತ್ತು ರೂಪಗೊಳಿಸುವ ಎಲ್ಲಾ ರೀತಿಯ ಚಟುವಟಿಕೆ ಗಳನ್ನು ನಿಷೇಧಿಸಿದೆ.

ಯಾವುದೇ ವ್ಯಕ್ತಿಯ ಜಾತಿ, ಧರ್ಮ, ಕೋಮು, ಪಂಥಗಳಿಗೆ ಅಥವಾ ಸಾರ್ವಜನಿಕ ನೈತಿಕತೆಗೆ ಬಾಧಕ ಉಂಟು ಮಾಡ ಬಹುದಾದಂತಹ ಚಟು ವಟಿಕೆಗಳನ್ನು ನಿಷೇಧಿಸಿದೆ. ಸರ್ಕಾರಿ ಸಂಸ್ಥೆಗಳು, ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ನಿಂದಿಸುವಂತಹ, ಅವಹೇಳನ ಕಾರಿಯಾದ ಯಾವುದೇ ಘೋಷಣೆಗಳು, ಭಾಷಣ ಪ್ರಕಟಣೆಗಳು ಅವಾಚ್ಯ ಶಬ್ದಗಳ ಬಳಕೆ, ಆವೇಶಕಾರಿ, ಪ್ರಚೋ ದನಕಾರಿ ಭಾಷಣ, ಗಾಯನ ಇತ್ಯಾದಿ ಚಟುವಟಿಕೆ ಗಳನ್ನು ನಿಷೇಧಿಸಲಾಗಿದೆ.

ಚುನಾವಣಾ ಆಯೋಗದ ನಿರ್ದೇಶನದಂತೆ ಮತ ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿ ಚುನಾವಣೆ ಕರ್ತವ್ಯ ನಿರತ ಅಧಿಕಾರಿ, ಸಿಬ್ಬಂದಿ, ಚುನಾವಣಾ ಅಭ್ಯರ್ಥಿ, ಏಜೆಂಟ್, ಮಾಧ್ಯಮದ ವರನ್ನು ಒಳಗೊಂಡಂತೆ ಪೂರ್ವಾನುಮತಿ ಪಡೆದವರನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶ ನಿಷೇಧಿಸಿದೆ.

ಈ ನಿಷೇಧಾಜ್ಞೆಯು ಶವ ಯಾತ್ರೆ ಹಾಗೂ ಪೂರ್ವಾನುಮತಿ ಪಡೆದ ಧಾರ್ಮಿಕ ಮೆರವಣಿಗೆಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.