ಹೇಮರಡ್ಡಿ ಮಲ್ಲಮ್ಮ ತತ್ವಾದರ್ಶ ಪಾಲಿಸಿ

ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

Team Udayavani, May 13, 2019, 4:57 PM IST

13-MAY-29

ಹೂವಿನಹಡಗಲಿ: ಕೆಂಚಮನಹಳ್ಳಿಯಲ್ಲಿ ನಡೆದ ಹೇಮರಡ್ಡಿ ಜಯಂತಿ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಹೂವಿನಹಡಗಲಿ: ಹೇಮರಡ್ಡಿ ಮಲ್ಲಮ್ಮನವರ ಆದರ್ಶ ಮೌಲ್ಯಗಳನ್ನು ಪ್ರತಿಯೊಂದು ಕುಟುಂಬದ ಮಾತೆಯರು ಬದುಕಿನಲ್ಲಿ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ ಎಂದು ಗವಿಮಠದ ಡಾ.ಹಿರಿಶಾಂತವೀರ ಸ್ವಾಮೀಜಿ ಹೇಳಿದರು.

ತಾಲೂಕಿನ ಕೆಂಚಮನಹಳ್ಳಿ ಗ್ರಾಮದಲ್ಲಿ ಹೇಮರಡ್ಡಿ ಮಲ್ಲಮ್ಮ ಸೇವಾ ಟ್ರಸ್ಟ್‌ ಹಾಗೂ ನೌಕರರ ಟ್ರಸ್ಟ್‌ ಹಮ್ಮಿಕೊಂಡಿದ್ದ ಹೇಮರಡ್ಡಿ ಮಲ್ಲಮ್ಮನವರ 592ನೇ ಜಯಂತ್ಯುತ್ಸವ ಆಚರಣೆ ವೇಳೆ ಮಾತನಾಡಿದರು.

ಉಪನ್ಯಾಸಕ ಶಂಕರ ಬೆಟಗೇರಿ ಮಾತನಾಡಿ, ಬದುಕಿನುದ್ದಕ್ಕೂ ನೋವು ಅನುಭವಿಸಿ ಮಲ್ಲಮ್ಮ ದಾನ ಧರ್ಮ, ಕ್ಷಮಾ ಗುಣಗಳ ಮೂಲಕ ಮಹಿಳೆಯರಿಗೆ ಆದರ್ಶವಾಗಿದ್ದಾರೆ. ಶರಣರು ಕಟ್ಟಿ ಬೆಳೆಸಿದ ವೀರಶೈವ ಪರಂಪರೆ ಮುಂದುವರಿಸಿಕೊಂಡು ಬಂದ ಮಹಾನ್‌ ಸಾದ್ವಿ ಎಂದರು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಮೂಲಕ ಮಲ್ಲಮ್ಮನವರ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕಾಗಿದೆ ಎಂದ‌ರು.

ತಾಲೂಕು ರಡ್ಡಿ ಸಮಾಜದ ಖಜಾಂಚಿ ಗೋವಿನಾಳು ಹಾಲಪ್ಪ ಅಧ್ಯಕ್ಷತೆ ವಹಿಸಿದ್ದರು. ಎಚ್.ಎಂ.ಮಲ್ಲಯ್ಯ, ಗ್ರಾಪಂ ಸದಸ್ಯರಾದ ಡಿ.ಮಲ್ಲಪ್ಪ, ಬಣಕಾರ ಕೆ.ಮಲ್ಲಿಕಾರ್ಜುನ, ಮುಖಂಡರಾದ ಪಿ.ವೀರಪ್ಪ, ಕೆ.ಚಂದ್ರಪ್ಪ, ಎಂ.ಶಿವಣ್ಣ, ಕೆ.ಬಸವಲಿಂಗಪ್ಪ, ಬಿ.ಬಸಪ್ಪ, ಕೆ.ಶಿವಪುತ್ರಪ್ಪ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ.ಪಂಚಾಕ್ಷರಿ ಹಿರೇಮಠ ಶಾಸ್ತ್ರೀಜಿ ಹೇಮರಡ್ಡಿ ಮಲ್ಲಮ್ಮನವರ ಕೀರ್ತನೆ ನಡೆಸಿಕೊಟ್ಟರು. ದೂರದರ್ಶನ ಹಾಸ್ಯ ಕಲಾವಿದ ಕೋಗಳಿ ಕೊಟ್ರೇಶ್‌ ನಡೆಸಿಕೊಟ್ಟ ಹಾಸ್ಯ ಜನಮನ ರಂಜಿಸಿತು.

ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಭೋವಿ ಸುರೇಶ್‌, ಪ್ರಿಯಾಂಕ ಮಡಿವಾಳರ, ಎಸ್‌.ಎಂ.ಸ್ವಾಮಿ, ಎಂ.ಸುಷ್ಮಾ, ಕೆ.ಲಕ್ಷ್ಮಿ, ಜೆ.ಶಶಿಕಲಾ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಜೆ.ಶಶಿಕಲಾ, ಕೆ.ಲಕ್ಷ್ಮಿ ಪ್ರಾರ್ಥಿಸಿದರು. ವೈ.ಗುರುಬಸವರಾಜ ಸ್ವಾಗತಿಸಿದರು. ಹಿರಿಯೂರಿನ ಶಿಕ್ಷಕ ಟಿ.ಶೇಖರಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಎಚ್.ಎಂ.ಗುರುಬಸವರಾಜಯ್ಯ ನಿರೂಪಿಸಿದರು.

ಕಾರ್ಯಕಮಕ್ಕೂ ಮುನ್ನ ಗ್ರಾಮದ ಬೀದಿಗಳಲ್ಲಿ ಹೇಮರಡ್ಡಿ ಮಲ್ಲಮ್ಮನವರ ಭಾವಚಿತ್ರದ ಮೆರವಣಿಗೆ ನಂದಿಕೋಲು, ಸಮಾಳ, ಡ್ರಮ್‌ಸೆಟ್, ಮಹಿಳೆಯರ ಕಳಸದೊಂದಿಗೆ ಅದ್ಧೂರಿಯಾಗಿ ಜರುಗಿತು.

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.