ರಾಜ್ಯಕ್ಕೆ ಬರದ ನೆರವು ಹೊಸ ಸರ್ಕಾರದಿಂದ
ಇನ್ನೂ ನಿರ್ಧರಿಸದ ಉನ್ನತ ಅಧಿಕಾರಿಗಳ ಸಮಿತಿ
Team Udayavani, May 14, 2019, 6:00 AM IST
ನವದೆಹಲಿ: ಬರದಿಂದ ನಲುಗುತ್ತಿರುವ ಕರ್ನಾಟಕಕ್ಕೆ ಕೇಂದ್ರದಲ್ಲಿ ಹೊಸ ಸರ್ಕಾರ ಆಡಳಿತಕ್ಕೆ ಬರುವವರೆಗೂ ಯಾವುದೇ ರೀತಿಯ ಪರಿಹಾರದ ಪ್ಯಾಕೇಜ್ ಸಿಗುವುದು ಅನುಮಾನ ಎಂದು ಹೇಳಲಾಗಿದ್ದು, ಇದು ರಾಜ್ಯದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ರಾಜ್ಯ ಸರ್ಕಾರ 2,064 ಕೋಟಿ ಬರ ಪರಿಹಾರ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಜ್ಞಾಪನಾ ಪತ್ರವನ್ನು ನೀಡಿದೆ. ಹಿಂಗಾರು ಋತುವಿನ ವೇಳೆ ರಾಜ್ಯದಲ್ಲಿ ಬರದಿಂದ ಆಗಿರುವ ನಷ್ಟದ ಬಗ್ಗೆ ಅಧ್ಯಯನ ನಡೆಸಿರುವ ಕೇಂದ್ರ ಬರ ಅಧ್ಯಯನ ತಂಡ ಕೃಷಿ ಇಲಾಖೆಗೆ ವರದಿಯನ್ನೂ ನೀಡಿದ್ದು, ಈ ವರದಿಯನ್ನು ಎಚ್ಎಲ್ಸಿಗೆ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಗೃಹ ಇಲಾಖೆಯ ಅಡಿಯಲ್ಲಿ ಬರುವ ಉನ್ನತ ಅಧಿಕಾರಿಗಳ ಸಮಿತಿ (ಎಚ್ಎಲ್ಸಿ) ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳಬೇಕಿದೆ. ಆದರೆ, ಇದುವರೆಗೆ ಈ ಸಮಿತಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಲಾಗಿದೆ. ಇನ್ನೇನಿದ್ದರೂ ಹೊಸ ಸರ್ಕಾರ ಬಂದ ಮೇಲೆಯೇ ತೀರ್ಮಾನಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ವಿಚಿತ್ರವೆಂದರೆ, ಈ ಸಮಿತಿ ನಿರ್ಧಾರ ತೆಗೆದುಕೊಳ್ಳುವುದಕ್ಕೆ ನೀತಿ ಸಂಹಿತೆ ಅಡ್ಡಿ ಉಂಟು ಮಾಡುವುದಿಲ್ಲ. ಬರ ಸಂಬಂಧ ಪರಿಹಾರ ಕಾರ್ಯಾಚರಣೆ ತೆಗೆದುಕೊಳ್ಳಲು ಅವಕಾಶವಿದೆ. ಆದರೂ, ಹೊಸ ಸರ್ಕಾರ ಬಂದ ಮೇಲೆಯೇ ನಿರ್ಧಾರ ತೆಗೆದುಕೊಳ್ಳಲು ಸಮಿತಿ ಮುಂದಾಗಿದೆ ಎಂದು ಮೂಲಗಳು ಹೇಳಿವೆ.
ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಸಚಿವ ಸಂಪುಟ ಸಭೆಯನ್ನೇ ನಡೆಸಿರಲಿಲ್ಲ. ಕಳೆದ ಗುರುವಾರವಷ್ಟೇ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದು, ಕೇಂದ್ರ ಸರ್ಕಾರ ಬರ ಪರಿಹಾರ ನೀಡುವಲ್ಲಿ ಮಾಡುತ್ತಿರುವ ವಿಳಂಬದ ಬಗ್ಗೆ ಆಕ್ರೋಶ ವ್ಯಕ್ತಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.