ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಕಾರ್ಯಕರ್ತೆಯರ ಖಂಡನೆ

ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಪರಿಹಾರಕ್ಕೆ ಜಿಲ್ಲಾ ಪಂಚಾಯತಿ ಮುಂದೆ ಧರಣಿ

Team Udayavani, May 14, 2019, 11:18 AM IST

kolar-tdy-3..

ಜಿಲ್ಲಾಡಳಿತದ ಧೋರಣೆ ಖಂಡಿಸಿ ಸಿಐಟಿಯು ನೇತೃತ್ವದ ರಾಜ್ಯ ಅಂಗನವಾಡಿ ನೌಕರರ ಸಂಘ ಕೋಲಾರ ಜಿಪಂ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿತು.

ಕೋಲಾರ: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳ ಪರಿಹಾರಕ್ಕೆ ನಿರ್ಲಕ್ಷ್ಯ ವಹಿಸಿರುವ ಜಿಲ್ಲಾಡಳಿತದ ಧೋರಣೆ ಖಂಡಿಸಿ ಸಿಐಟಿಯು ನೇತೃತ್ವದ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಪಂ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿತು.

ಜಿಪಂ ಕಚೇರಿ ಮುಂದೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ಮುನಿರಾಜಮ್ಮ, ಸಂಘಟನೆ ರಾಜ್ಯಾಧ್ಯಕ್ಷೆ ಎಸ್‌.ವರಲಕ್ಷ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಜತೆ ಚರ್ಚಿಸಿದ ಸಂದರ್ಭದಲ್ಲಿ ತುರ್ತಾಗಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿ ಮೂರು ತಿಂಗಳಾದರೂ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ದೂರಿದರು.

ಶ್ರೀನಿವಾಸಪುರದಲ್ಲಿ ಒಂದು ವರ್ಷದಿಂದ ಬಾಕಿ ಇರುವ ಅಂಗನವಾಡಿ ಕೇಂದ್ರಗಳ ಬಾಡಿಗೆ ಹಣ ಬಿಡುಗಡೆ ಮಾಡಬೇಕು, ಅಂಗನವಾಡಿ ಕೇಂದ್ರಗಳ ಹುದ್ದೆ ಖಾಲಿಯಾದಾಗ ಕಾರ್ಯಕರ್ತರ ಗಮನಕ್ಕೆ ತಾರದೆ ನಡೆಸುತ್ತಿರುವ ಆಯ್ಕೆ ಪ್ರಕ್ರಿಯೆ ಕೈಬಿಡಬೇಕು, ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಬಡ್ತಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು, ಕಚೇರಿಗಳಲ್ಲಿ ಸಿಬ್ಬಂದಿ ಕೊರತೆಯಿಂದ ಸಕಾಲಕ್ಕೆ ವೇತನ ಇತರೆ ಬಿಲ್ಗಳನ್ನು ಮಾಡಲು ಸತಾಯಿಸುವುದನ್ನು ಬಿಡಬೇಕು ಎಂದು ಒತ್ತಾಯಿಸಿದರು.

ಕೋಲಾರ ತಾಲೂಕಿನಲ್ಲಿ 7 ತಿಂಗಳಿನಿಂದ ಬಾಕಿ ಇರುವ ಮೊಟ್ಟೆ, ತರಕಾರಿ ಖರೀದಿ ಹಣ ಬಿಡುಗಡೆ ಮಾಡಬೇಕು, ನಿವೃತ್ತಿಯಾದವರಿಗೆ ಎನ್‌ಪಿಎಸ್‌ ಕಾರ್ಡ್‌ಗಳಿಲ್ಲದ ಕಾರಣ ಪರಿಹಾರಕ್ಕೆ ಅಲೆದಾಡುವುದನ್ನು ತಪ್ಪಿಸಬೇಕು, 2016ರಿಂದ ಬಾಕಿ ಇರುವ ಭಾಗ್ಯಲಕ್ಷ್ಮ್ಮಿ ಬಾಂಡ್‌ಗಳನ್ನು ಬಿಡುಗಡೆ ಮಾಡಬೇಕು ಮಾತೃಶ್ರೀ, ಮಾತೃವಂದನಾ ಅರ್ಜಿಗಳಿಗೆ ಶೀಘ್ರ ಹಣ ಬಿಡುಗಡೆ ಮಾಡಬೇಕು ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷೆ ಜಿ.ಈಶ್ವರಮ್ಮ, ಪ್ರಧಾನ ಕಾರ್ಯದರ್ಶಿ ಬಿ.ಎನ್‌.ನಾಗರತ್ನ, ಪದಾಧಿಕಾರಿಗಳಾದ ಕಲ್ಪನಾ, ಮಂಜುಳ, ಆಂಜಿನಮ್ಮ, ನೇತ್ರಾವತಿ, ಎಂ.ಲಕ್ಷ್ಮ್ಮಮ್ಮ, ಸುಜಾತ, ರತ್ನಮ್ಮ ಅಮುದ, ಇಂದ್ರಮ್ಮ, ಸುಶೀಲಾ, ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ವಿಜಯಕೃಷ್ಣ ಮತ್ತಿತರರಿದ್ದರು.

ಟಾಪ್ ನ್ಯೂಸ್

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.