ಡೊನೆಷನ್ ಹಾವಳಿಗೆ ಕಡಿವಾಣ ಹಾಕಿ
ಬಡ ಕುಟುಂಬ ಮಕ್ಕಳಿಗೆ ವಿದ್ಯಾಭ್ಯಾಸ ಕಲ್ಪಿಸಲು ಬಿಇಒಗೆ ಮನವಿ
Team Udayavani, May 14, 2019, 11:45 AM IST
ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿಗೆ ಕಡಿವಾಣ ಹಾಕಬೇಕೆಂದು ಬಿಇಒ ಅಶೋಕ್‌ಗೆ ಸೂಲಿಕುಂಟೆ ಆನಂದ್ ಮನವಿ ಸಲ್ಲಿಸಿದರು
ಕೆಜಿಎಫ್: ಕ್ಷೇತ್ರದಲ್ಲಿ ಬಿಜಿಎಂಎಲ್ ಸಂಸ್ಥೆ ಮುಚ್ಚಿದ ನಂತರ ಕಾರ್ಮಿಕರ ಕುಟುಂಬಗಳು ಮತ್ತು ದಲಿತರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು ಖಾಸಗಿ ಡೊನೇಷನ್ ಹಾವಳಿಯಿಂದ ತತ್ತರಿಸಿದ್ದು, ಉತ್ತಮ ವಿದ್ಯಾಭ್ಯಾಸ ಕಲ್ಪಿಸಬೇಕು ಎಂದು ಕರ್ನಾಟಕ ದಲಿತ ಸಮಾಜ ಸೇನೆ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್‌ಗೆ ಮನವಿ ಸಲ್ಲಿಸಿತು. ಈ ವೇಳೆ ಮಾತನಾಡಿದ ಸೇನೆ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್, ಕ್ಷೇತ್ರದಲ್ಲಿ ಶಿಕ್ಷಣ ಪಡೆದು ರಾಜ್ಯ ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ಉನ್ನತ ಸ್ಥಾನಗಳಿಸಿದ್ದಾರೆ. ಆದರೆ, ಇತ್ತೀಚೆಗೆ ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿ 20 ರಿಂದ 30 ಸಾವಿರ ರೂ.ವರೆಗೆ ಡೊನೇಷನ್ ಪಡೆಯುವ ಮೂಲಕ ಪ್ರತಿಭಾವಂತ ಮಕ್ಕಳನ್ನು ಬೀದಿಪಾಲು ಮಾಡಲು ಹೊರಟಿದೆ ಎಂದು ದೂರಿದರು.
ಸರ್ಕಾರ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸಲು ಹಲವು ಯೋಜನೆಗಳನ್ನು ರೂಪಿಸುತ್ತಿದೆಯಾದರೂ ಅದನ್ನು ಸರಿಯಾಗಿ ಜಾರಿಗೊಳಿಸುವಲ್ಲಿ ಶಿಕ್ಷಣ ಇಲಾಖೆ ವಿಫಲವಾಗಿದೆ. ಅಲ್ಲದೆ, ಶಿಕ್ಷಣ ಇಲಾಖೆ ಆಯಾ ಖಾಸಗಿ ಶಾಲಾ ಕಾಲೇಜುಗಳ ಮುಂದೆ ಶುಲ್ಕಗಳ ಮಾಹಿತಿ ಫಲಕ ಅಳವಡಿಸಬೇಕು ಮತ್ತು ಶಾಲಾ ಆಡಳಿತ ಮಂಡಳಿ ಮಕ್ಕಳಿಗೆ ಕಡ್ಡಾಯವಾಗಿ ನೋಟ್ಪುಸ್ತಕ ಇನ್ನಿತರ ಪರಿಕರಗಳನ್ನು ಶಾಲೆಯಲ್ಲೇ ಪಡೆದುಕೊಳ್ಳುವ ನಿಬಂಧನೆಗಳನ್ನು ಹಾಕಬಾರದು ಎಂದು ಸೂಚಿಸಿದ್ದರೂ ಅದನ್ನು ಪಾಲನೆ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಬಿಇಒ, ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಸಭೆ ನಡೆಸಿ ಸರ್ಕಾರದ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.