ತುಂಡುಗುತ್ತಿಗೆಯಲ್ಲಿ 10 ಸಾವಿರ ಕೋಟಿ ಅಕ್ರಮ: ಶ್ರೀರಾಮುಲು
Team Udayavani, May 14, 2019, 2:04 PM IST
ಹುಬ್ಬಳ್ಳಿ: ತುಂಡುಗುತ್ತಿಗೆ ಕಾಮಗಾರಿಯಲ್ಲಿ ಮೈತ್ರಿ ಸರ್ಕಾರ ಹತ್ತು ಸಾವಿರ ಕೋಟಿ ಅವ್ಯವಹಾರ ನಡೆಸಿದೆ ಎಂದು ಎಸ್ಸಿ-ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಹದೇವಪ್ಪ ಅವರು ಎಸಿಬಿಗೆ ದೂರು ನೀಡಿದ್ದು, ನೈತಿಕ ಹೊಣೆ ಹೊತ್ತು ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಬೇಕೆಂದು ಶಾಸಕ ಶ್ರೀರಾಮುಲು ಆಗ್ರಹಿಸಿದ್ದಾರೆ.
ಕುಂದಗೋಳ ತಾಲೂಕಿನ ಚಾಕಲಬ್ಬಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡರ ಪರ ಮತಯಾಚನೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಯಮಾವಳಿಗಳನ್ನು ಗಾಳಿಗೆ ತೂರಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರು ತುಂಡುಗುತ್ತಿಗೆ ಕಾಮಗಾರಿಗಳನ್ನು ನೀಡಿದ್ದಾರೆ. ಇದರಿಂದ ಸರ್ಕಾರಕ್ಕೆ ಸುಮಾರು 10 ಸಾವಿರ ಕೋಟಿ ರೂ. ನಷ್ಟವಾಗಿದೆ. ಈ ಕುರಿತು ಸಿಎಂ ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದರು.
ಮೈತ್ರಿ ಸರ್ಕಾರದಲ್ಲಿ ಗೊಂದಲಗಳು ಎದ್ದಿದ್ದು, ಆಡಳಿತ ಯಂತ್ರ ಕುಸಿದು ಹೋಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಗಳ ನೋಡಿದರೆ ಮೈತ್ರಿ ಸರ್ಕಾರ ಹೆಚ್ಚು ದಿನ ಇರಲಾರದು. ಮೈತ್ರಿಯ ಶಾಸಕರಿಗೂ ಈ ಸರ್ಕಾರ ಬೇಡವಾಗಿದೆ. ಸರ್ಕಾರ ರಚನೆ ಇಲ್ಲವೆ ಮಧ್ಯಂತರ ಚುನಾವಣೆಗೆ ನಾವು ಸಿದ್ಧರಿದ್ದೇವೆ ಎಂದರು.
ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಅವರ ಹಿಂಬಾಲಕರು ಹೇಳುತ್ತಿದ್ದಾರೆ ಎನ್ನುವ ಎಚ್. ವಿಶ್ವನಾಥರ ಹೇಳಿಕೆ ನೂರಕ್ಕೆ ನೂರರಷ್ಟು ಸತ್ಯವಾಗಿದೆ. ಆದರೆ, ವಾಸ್ತವದಲ್ಲಿ ಸಿದ್ದರಾಮಯ್ಯ ಅವರ ಜತೆ ಯಾವೊಬ್ಬ ಶಾಸಕರೂ ಇಲ್ಲ ಎನ್ನುವುದು ಸಹ ಅಷ್ಟೇ ಸತ್ಯ ಎಂದರು.
ಕುಂದಗೋಳ ಕ್ಷೇತ್ರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ಭಾಗದಲ್ಲಿರುವ ಬರ ಸ್ಥಿತಿ ನೋಡಬೇಕು. ಐದು ಜಿಲ್ಲೆಗಳಿಗೆ ನೀಡಿದ ಅನುದಾನವನ್ನು ಉತ್ತರ ಕರ್ನಾಟಕದ ಬರಗಾಲ ಪ್ರದೇಶಕ್ಕೆ ನೀಡಬೇಕು. ಕುಂದಗೋಳ ಕ್ಷೇತ್ರಕ್ಕೆ ಶಾಶ್ವತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…
ಆಕರ್ಷಕ ಪ್ರವಾಸಿ ತಾಣ, ಸುಂದರ ಊರು…ಸೂಡಿ ಪ್ರಾಚೀನ ಪರಂಪರೆಗೆ ಸಾಕ್ಷಿ…
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!