ಮಿನಿ ಸಮರಕ್ಕೂ ಮೈತ್ರಿ ಮುಂದುವರಿಕೆ?

•ಸ್ಥಳೀಯ ಸಂಸ್ಥೆ ಚುನಾವಣೆ ಒಟ್ಟಾಗಿ ಎದುರಿಸಲು ಜಿಲ್ಲಾ ಕಾಂಗ್ರೆಸ್‌-ಜೆಡಿಎಸ್‌ನಲ್ಲಿ ನಡೆದಿದೆ ಪ್ರಯತ್ನ

Team Udayavani, May 14, 2019, 3:51 PM IST

Udayavani Kannada Newspaper

ಚಿತ್ರದುರ್ಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಮುಂದುವರೆಯುವ ಬಗ್ಗೆ ಅನುಮಾನ ಸೃಷ್ಟಿಯಾಗಿದೆ. ಆದರೆ ಜಿಲ್ಲೆಯಲ್ಲಿ ದೋಸ್ತಿ ಪಕ್ಷಗಳು ಒಗ್ಗೂಡಿ ಚುನಾವಣೆ ಎದುರಿಸಲು ಪ್ರಯತ್ನ ನಡೆಸಿವೆ.

ಹಿರಿಯೂರು ನಗರಸಭೆಯ 31, ಮೊಳಕಾಲ್ಮೂರು ಮತ್ತು ಹೊಳಲ್ಕೆರೆ ಪಟ್ಟಣ ಪಂಚಾಯತ್‌ಗಳ ತಲಾ 16 ವಾರ್ಡ್‌ಗಳಿಗೆ ಚುನಾವಣೆ ನಿಗದಿಯಾಗಿದೆ. ಈ ಮೂರು ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ಮುಖಂಡರು ಜಿಲ್ಲಾ ಮಟ್ಟದಲ್ಲಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಯಾವುದೇ ಗೊಂದಲ, ಅಪಸ್ವರ ಇಲ್ಲದೆ ಎರಡು ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟು ಪ್ರದರ್ಶಿಸಿದ್ದರು. ಈ ಮೈತ್ರಿಯನ್ನು ಇದನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ವಿಸ್ತರಿಸಬೇಕು ಎಂಬುದು ಉಭಯ ಪಕ್ಷಗಳ ಧುರೀಣರು ಮತ್ತು ಕಾರ್ಯಕರ್ತರ ಅಪೇಕ್ಷೆ.

ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಭೀಕರ ಬರ ಪರಿಸ್ಥಿತಿ ಇದೆ. ಹಾಗಾಗಿ ಒಟ್ಟಾಗಿ ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಎದುರಿಸಿದಲ್ಲಿ ಎರಡು ಪಕ್ಷಗಳಿಗೂ ಅನುಕೂಲವಾಗಲಿದೆ ಎನ್ನುವ ಭಾವನೆ ಪಕ್ಷಗಳ ನಾಯಕರು ಮತ್ತು

ಸ್ಪರ್ಧಾಕಾಂಕ್ಷಿಗಳಲ್ಲೂ ಇದೆ;

ಹಾಗೆ ನೋಡಿದರೆ ಜೆಡಿಎಸ್‌ ಪಕ್ಷಕ್ಕೆ ಹಿರಿಯೂರು ಹೊರತುಪಡಿಸಿ ಮೊಳಕಾಲ್ಮೂರು ಮತ್ತು ಹೊಳಲ್ಕೆರೆಯಲ್ಲಿ ನೆಲೆ ಇಲ್ಲ. ಆದರೂ ಮೊಳಕಾಲ್ಮೂರು ಕ್ಷೇತ್ರದಲ್ಲಿ ಜೆಡಿಎಸ್‌ ಕಾರ್ಯಕರ್ತರ ಶ್ರಮದಿಂದಾಗಿ ಕಳೆದ 2013ರಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್‌ ಒಂದು ಸ್ಥಾನ ಗಳಿಸಿತ್ತು. ಹೊಳಲ್ಕೆರೆ ಕ್ಷೇತ್ರದಲ್ಲಿ ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ಹಾಗಾಗಿ ಈ ಎರಡು ಪಟ್ಟಣ ಪಂಚಾಯತ್‌ಗಳಲ್ಲಿ ಜೆಡಿಎಸ್‌ ಹೆಚ್ಚಿನ ಸೀಟು ಬೇಕೆಂದು ತಕರಾರು ಮಾಡುವುದಿಲ್ಲ, ಒಂದು ವೇಳೆ ತಕರಾರು ಮಾಡಿ ಹೆಚ್ಚಿನ ಸೀಟು ಪಡೆದರೂ ಆ ಪಕ್ಷದ ವತಿಯಿಂದ ಸ್ಪರ್ಧಿಸಲು ಹೇಳಿಕೊಳ್ಳುವಂತಹ ಅಭ್ಯರ್ಥಿಗಳೂ ಇಲ್ಲ. ಕೊನೆಗೆ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರೇ ಜೆಡಿಎಸ್‌ ಚಿನ್ಹೆ ಅಡಿ ಸ್ಪರ್ಧಿಸಿದರೂ ಅಚ್ಚರಿ ಇಲ್ಲ. ಈ ಎರಡು ಪಪಂಗಳಿಗೆ ಜೆಡಿಎಸ್‌ ಪಕ್ಷಕ್ಕೆ ತಲಾ 2 ಅಥವಾ 3 ಸೀಟು ನೀಡಿದರೂ ಜೆಡಿಎಸ್‌ ಖುಷಿಯಿಂದ ಒಪ್ಪಿಕೊಳ್ಳುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.

ಆದರೆ ಇದೇ ಮಾತನ್ನ ಹಿರಿಯೂರು ನಗರಸಭೆ ಸೀಟು ಹಂಚಿಕೆಗೆ ಹೇಳುವಂತಿಲ್ಲ. ಏಕೆಂದರೆ ಹಿರಿಯೂರು ನಗರಸಭೆಯ 31 ವಾರ್ಡ್‌ಗಳಿಗೂ ಅಭ್ಯರ್ಥಿಗಳನ್ನು ನಿಲ್ಲಿಸುವ ಸಾಮರ್ಥ್ಯ ಜೆಡಿಎಸ್‌ಗಿದ್ದು, ಕಾರ್ಯಕರ್ತರ ಪಡೆಯನ್ನೂ ಹೊಂದಿದೆ. ಹಾಗಾಗಿ ಇಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮಧ್ಯೆ ಸೀಟು ಹಂಚಿಕೆಗೆ ಪೈಪೋಟಿ ಏರ್ಪಡುವ ಲಕ್ಷಣಗಳಿವೆ. ಎರಡೂ ಪಕ್ಷಗಳಿಗೆ ಹಿರಿಯೂರು ಕ್ಷೇತ್ರದಲ್ಲಿ ಗಟ್ಟಿ ನೆಲೆ ಇರುವುದರಿಂದ ಸೀಟು ಹಂಚಿಕೆ ಕಗ್ಗಂಟಾಗಲಿದೆ.

ಈ ಹಿಂದಿನ ಸ್ಥಳೀಯ ಚುನಾವಣೆಗಳನ್ನು ಅವಲೋಕಿಸಿದರೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳೇ ಎದುರಾಳಿಗಳಾಗಿ ಹೋರಾಟ ಮಾಡಿ ಅಧಿಕಾರ ಹಿಡಿದಿವೆ. ಬಿಜೆಪಿಗೆ ಇಂದಿಗೂ ನಗರಸಭೆಯಲ್ಲಿ ಒಂದು ಸ್ಥಾನ ಗಳಿಸಲೂ ಸಾಧ್ಯವಾಗಿಲ್ಲ. ಆದರೆ ಈ ಸಲ ಬಿಜೆಪಿ ಶಾಸಕರು ಇರುವುದರಿಂದ ಸ್ಥಳೀಯ ಸಂಸ್ಥೆಯಲ್ಲಿ ಅಧಿಕಾರ ಹಿಡಿಯಲು ಶತಪ್ರಯತ್ನ ಮಾಡುವುದು ಖಚಿತ. ಬಿಜೆಪಿಯನ್ನು ಕಟ್ಟಿ ಹಾಕಬೇಕಾದರೆ ಹಿರಿಯೂರಿನಲ್ಲಿ ಜೆಡಿಎಸ್‌ನೊಂದಿಗೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಎರಡು ಪಕ್ಷಗಳ ಮುಖಂಡರು ಮೈತ್ರಿ ಮಾಡಿಕೊಳ್ಳಲು ತೆರೆಮರೆಯಲ್ಲಿ ಮಾತುಕತೆ ಆರಂಭಿಸಿದ್ದಾರೆ ಎನ್ನಲಾಗಿದೆ. ಮಂಗಳವಾರ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಜಿಲ್ಲಾಧ್ಯಕ್ಷರು, ಮುಖಂಡರು, ಮಾಜಿ ಶಾಸಕರು ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಸೀಟು ಹಂಚಿಕೆಯೂ ಫೈನಲ್ ಆಗಲಿದೆ ಎಂದು ತಿಳಿದು ಬಂದಿದೆ.

•ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.