ಮತಗಟ್ಟೆ ಸುತ್ತ ನಿರ್ಬಂಧ ಘೋಷಣೆ
•200 ಮೀಟರ್ ವ್ಯಾಪ್ತಿ ಪ್ರದೇಶ ನಿರ್ಬಂಧಿತವೆಂದು ಜಿಲ್ಲಾಧಿಕಾರಿ ಆದೇಶ
Team Udayavani, May 14, 2019, 4:24 PM IST
ಕಲಬುರಗಿ: ಚಿಂಚೋಳಿ (ಪ.ಜಾ.) ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮೇ 19ರಂದು ಮತದಾನ ನಡೆಯಲಿದೆ. ಈ ಉಪಚುನಾವಣೆ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಮೇ 19ರ ಬೆಳಗಿನ 6ರಿಂದ ಸಂಜೆ 6ರ ವರೆಗೆ ಅಥವಾ ಮತಗಟ್ಟೆಯಲ್ಲಿ ಮತದಾನವು ಮುಕ್ತಾಯಗೊಂಡು ಮತಗಟ್ಟೆ ಸಿಬ್ಬಂದಿಗಳು ಮತಗಟ್ಟೆಯಿಂದ ತೆರಳುವವರೆಗೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳ ಸುತ್ತಮುತ್ತಲು 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಆದೇಶ ಹೊರಡಿಸಿದ್ದಾರೆ.
ಮೆರವಣಿಗೆ ಅಥವಾ 5 ಜನರಿಂಗಿತ ಹೆಚ್ಚು ಜನ ಸೇರುವುದು, ಯಾವುದೇ ರೀತಿಯ ಮಾರಕಾಸ್ತ್ರ, ಶಸ್ತ್ರಾಸ್ತ್ರ, ಸ್ಫೊಧೀಟಕ ವಸ್ತುಗಳನ್ನು ಒಯ್ಯುವುದನ್ನು, ಪ್ರತಿಕೃತಿ ಪ್ರದರ್ಶನ, ದಹನ ಮಾಡುವುದನ್ನು ಮತ್ತು ಬಹಿರಂಗ ಘೋಷಣೆ ಇತ್ಯಾದಿಗಳನ್ನು ನಿಷೇಧಿ ಸಲಾಗಿದೆ. ಸಾರ್ವಜನಿಕ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು, ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು ಹಾಗೂ ಸಾರ್ವಜನಿಕರ ಗಾಂಭಿರ್ಯ ಮತ್ತು ನೈತಿಕತೆಗೆ ಭಂಗ ತರುವಂತಹ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಈ ಆದೇಶವು ಚುನಾವಣಾ ಕರ್ತವ್ಯನಿರತ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ, ಪೊಲೀಸ್ ಅಧಿಕಾರಿಗಳಿಗೆ, ನೇಮಕಗೊಂಡಿರುವ ಚುನಾವಣಾ ಏಜೆಂಟ್ಸ್‌ಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ.
ಈ ಆದೇಶವು ಅಂತ್ಯಕ್ರಿಯೆ ಮೆರವಣಿಗೆ ಮತ್ತು ಇನ್ನಿತರ ಪ್ರಾಧಿಕಾರದಿಂದ ಅನುಮತಿ ಪಡೆದ ಪ್ರಕರಣಗಳಿಗೆ ಅನ್ವಯಿಸುವುದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ಕಾನೂನಿನನ್ವಯ ಕ್ರಮ ಕೈಗೊಳ್ಳಬೇಕೆಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.