ಸಮಾಜಕ್ಕೆ ಅನ್ನದಾಸೋಹ ಅಗತ್ಯ
Team Udayavani, May 15, 2019, 3:00 AM IST
ನೆಲಮಂಗಲ: ಸಮಾಜಕ್ಕೆ ಮೊದಲು ಅನ್ನದಾಸೋಹ ಮಾಡಬೇಕು. ನಂತರ ಸಮಾಜ ಸುಧಾರಣೆಗೆ ಮುಂದಾಗಬೇಕು. ತ್ರಿವಿಧ ದಾಸೋಹದ ಸಾಧನೆಯನ್ನು ನಮ್ಮ ಪರಮ ಪೂಜ್ಯ ಸ್ವಾಮೀಜಿ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ತುಮಕೂರು ಶ್ರೀ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.
ತಾಲೂಕಿನ ತ್ಯಾಮಗೊಂಡ್ಲು ಹೋಬಳಿ ಇಸುವನಹಳ್ಳಿ ಗ್ರಾಮದಲ್ಲಿ ಶ್ರೀ ಬಸವಾಂಜನೇಯ ಸೇವಾ ಸಮಿತಿ ಹಮ್ಮಿಕೊಂಡಿದ್ದ ಶ್ರೀ ಈಶ್ವರ ದೇವಾಲಯದ ನವೀಕರಣ, ಗೋಪುರ ಉದ್ಘಾಟನೆ ಹಾಗೂ ಕಳಶ ಪ್ರತಿಷ್ಠಾಪನೆ ಮತ್ತು ಶ್ರೀ ಶಿವಕುಮಾರ ಮಹಾಸ್ವಾಮೀಜಿ ಪುಣ್ಯಸ್ಮರಣೆ ಮತ್ತು ಗ್ರಾಮಾಂತರ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿವಶರಣ ತತ್ವ ಪಾಲಿಸಿ: ಪ್ರಸ್ತುತ ಸಮಾಜದಲ್ಲಿ ನೈತಿಕತೆಯ ಬದುಕಿನಿಂದ ಹೊರಬಂದು, ಸಂಬಂಧಗಳನ್ನು ಕಡಿದು ಹಾಕಿ ಏಕಾಂಗಿಯಾಗಿ ಬದುಕಲು ಮಾನವರು ಹೊರಟಿದ್ದಾರೆ. ಆದರೆ, ಇದು ಮನುಕುಲದ ವಿನಾಶದ ಸಂಕೇತವಾಗಿದೆ. ನಮ್ಮ ತಾಯಿಯೇ ನಮಗೆ ಮಾರ್ಗದರ್ಶಕಿಯಾಗಿದ್ದಾಳೆ. ಆಕೆಯ ತ್ಯಾಗದ ಮನೋಭಾವವನ್ನು ನಾವುಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ವಚನ ಯುಗದ ಶಿವಶರಣ ಅನುಭವದ ಬದುಕು ಮತ್ತು ವಚನಗಳು ಇಂದು ಪ್ರಸ್ತುತವಾಗಿದೆ ಎಂದು ತಿಳಿಸಿದರು.
ಸ್ವಾರ್ಥ ಸಾಧನೆಗೆ ಆದ್ಯತೆ ಸಲ್ಲದು: ಆಧುನಿಕತೆಯ ಬದುಕಿನಲ್ಲಿ ಮನುಷ್ಯ ಆಡಂಬರದ ಜೀವನದ ಮೂಲಕ ಸ್ವಾರ್ಥ ಸಾಧನೆಗೆ ಮುಂದಾಗಿದ್ದಾನೆ. ಬಹುತೇಕ ಇಂದು ಸೋಮಾರಿಗಳು ಹೆಚ್ಚಾಗುತ್ತಿದ್ದಾರೆ. ಇಂದು ಸಮಾಜದಲ್ಲಿ ಲಿಂಗಾಯತ ಧರ್ಮವನ್ನು ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಬಂದು ಧರ್ಮವನ್ನು ಒಡೆದರು ಎಂದು ಜನ ಮಾತನಾಡಿಕೊಳ್ಳುತ್ತಾರೆ.
ಆದರೆ, ಸತ್ಯಾಂಶವೆಂದರೆ, ಜೈನ ಧರ್ಮದ ಅನುಯಾಯಿಗಳು ಕಡಿಮೆ ಸಂಖ್ಯೆಯಲ್ಲಿದ್ದರೂ ಧರ್ಮನಿಷ್ಠರಾಗಿದ್ದಾರೆ. ನಮ್ಮ ಜನ ವೇದಿಕೆಯನ್ನು ಕೇವಲ ಹಣ ಗಳಿಕೆಗೆ ಬಳಸಿಕೊಳ್ಳುತ್ತಿದ್ದಾರೆ. ಅದರ ಬದಲಿಗೆ ಸಮಾಜಮುಖೀ ಸೇವೆಯಲ್ಲಿ ತೊಡಗಬೇಕು. ಅದರಿಂದ, ಜೀವನ ಸಾರ್ಥಕವಾಗುತ್ತದೆ ಎಂದು ಕಿವಿ ಮಾತು ಹೇಳಿದರು.
ಉಪನ್ಯಾಸ: ಕಾರ್ಯಕ್ರಮದಲ್ಲಿ ವಚನಜ್ಯೋತಿ ಬಳಗದ ಅಧ್ಯಕ್ಷ ಪಿನಾಕಪಾಣಿ, ಡಾ.ಎಂ.ಪೊನ್ನಾಂಬಲೇಶ್ವರಿ ಅವರು ವಚನ ಸಾಹಿತ್ಯ ಹಾಗೂ ಡಾ.ಶಿವಕುಮಾರ ಸ್ವಾಮೀಜಿ ಬದುಕು, ಬರಹದ ಬಗ್ಗೆ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಶ್ರೀ ಮಹಾಂತೇಶ್ವರ ಗದ್ದುಗೆ ಮಠದ ಶ್ರೀ ಮಹಾಂತ ಸ್ವಾಮಿಗಳು, ಶ್ರೀ ಹೊನ್ನಮ್ಮ ಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು,
-ಶ್ರೀ ಕಾಲುವೆ ಮಠದ ಶ್ರೀ ರುದ್ರಮುನಿ ಸ್ವಾಮಿಜಿ, ಕಂಚುಗಲ್ ಬಂಡೆ ಮಠದ ಶ್ರೀ ಬಸವಲಿಂಗ ಸ್ವಾಮೀಜಿ, ಜಂಗಮ ಮಠದ ಗಂಗಾಧರ ಸ್ವಾಮೀಜಿ, ಶ್ರೀ ಕಂಬಾಳು ಮಹಾ ಸಂಸ್ಥಾನ ಮಠದ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ, ಸ್ಥಳೀಯ ಮುಖಂಡರಾದ ಗುರುಸಿದ್ದಪ್ಪ, ಕಾಂತರಾಜು, ಪ್ರಭು, ಯೋಮಕೇಶ್, ಹೊನ್ನಸ್ವಾಮಯ್ಯ ಸೇರಿದಂತೆ ಶ್ರೀ ಬಸವಾಂಜನೇಯ ಸೇವಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.