ಮಾಜಿ ಶಾಸಕರೊಂದಿಗೆ ಸಂತ್ರಸ್ತರಿಂದ ತಹಶೀಲ್ದಾರ್‌ ಭೇಟಿ

 94ಸಿ ಯೋಜನೆ ಹಕ್ಕುಪತ್ರದಲ್ಲಿ ಸರ್ವೇ ನಂ. ತಪ್ಪಾಗಿ ಮುದ್ರಿತ

Team Udayavani, May 15, 2019, 6:00 AM IST

12

ಮೂಡುಕೋಡಿ ಗ್ರಾಮಸ್ಥರೊಂದಿಗೆ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಬೆಳ್ತಂಗಡಿ ತಹಶೀಲ್ದಾರರನ್ನು ಭೇಟಿಯಾದರು.

ವೇಣೂರು: ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ 94ಸಿ ಯೋಜನೆಯ ಹಕ್ಕುಪತ್ರದಲ್ಲಿ ಸರ್ವೇ ನಂಬರ್‌ ತಪ್ಪಾಗಿ ಮುದ್ರಿತವಾಗಿದ್ದ ಘಟನೆಗೆ ಸಂಬಂಧಿಸಿ ಸೋಮವಾರ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಫಲಾನುಭವಿ ಗ್ರಾಮಸ್ಥರ ನಿಯೋಗದೊಂದಿಗೆ ಬೆಳ್ತಂಗಡಿ ತಹಶೀಲ್ದಾರರನ್ನು ಭೇಟಿ ಮಾಡಿದರು.

ಗಮನ ಸೆಳೆದಿದ್ದ ಪತ್ರಿಕೆ
ವೇಣೂರು ಹೋಬಳಿಯ ಮೂಡು ಕೋಡಿ ಗ್ರಾಮದ ಸುಮಾರು 20 ಮಂದಿ 94ಸಿ ಫಲಾನುಭವಿ ಗ್ರಾಮ ಸ್ಥರಿಗೆ 2017ರ ಅಕ್ಟೋಬರ್‌ನಲ್ಲಿ ನೀಡಿದ್ದ ಹಕ್ಕುಪತ್ರದಲ್ಲಿ 99/2ಎಪಿ8 ಎಂಬುವುದರ ಬದಲಾಗಿ 99/2ಪಿಎ1 ಎಂದು ನಮೂದಿಸಲಾಗಿದ್ದು, ಇದರಿಂದ ಆರ್‌ಟಿಸಿ ದೊರೆಯದೆ ಸರಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದರು. ಈ ಬಗ್ಗೆ ಉದಯವಾಣಿ ಸುದಿನ ಮೇ 10ರಂದು ವರದಿ ಪ್ರಕಟಿಸಿ ಅಧಿಕಾರಿಗಳ ಗಮನ ಸೆಳೆದಿತ್ತು.

ಸೋಮವಾರ ಮೂಡುಕೋಡಿ ಗ್ರಾಮದ ಅನೂಪ್‌ ಜೆ. ಪಾಯಸ್‌ ಅವರ ನೇತೃತ್ವದಲ್ಲಿ ಫಲಾನುಭವಿ ಗ್ರಾಮಸ್ಥರ ನಿಯೋಗವು ಕೆ. ವಸಂತ ಬಂಗೇರ ಅವರನ್ನು ಭೇಟಿ ಮಾಡಿತು. ಈ ಬಗ್ಗೆ ಫಲಾನುಭವಿಗಳಿಂದ ಮಾಹಿತಿ ಪಡೆದ ಮಾಜಿ ಶಾಸಕರು ತನ್ನ ಕಚೇರಿಯಿಂದ ಫಲಾನುಭವಿಗಳೊಂದಿಗೆ ತಾ| ಕಚೇರಿಗೆ ಕಾಲ್ನಡಿಗೆಯಲ್ಲೇ ತೆರಳಿ ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಅವರನ್ನು ಭೇಟಿ ಯಾಗಿ ಸಮಸ್ಯೆಯನ್ನು ವಿವರಿಸಿದರು.

ಲಂಚ ಆರೋಪ
ಈ ವೇಳೆ ಫಲಾನುಭವಿ ಗ್ರಾಮಸ್ಥರು 94ಸಿ ಹಕ್ಕುಪತ್ರಕ್ಕಾಗಿ ಕೇಸ್‌ ವರ್ಕರ್‌ ಹರೀಶ್‌ ಕೆ. ಅವರು 12 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿರುವುದಾಗಿ ತಹಶೀಲ್ದಾರರಲ್ಲಿ ಆರೋಪಿಸಿದರು. ತತ್‌ಕ್ಷಣ ಹರೀಶ್‌ ಕೆ. ಅವರನ್ನು ತನ್ನ ಕೊಠಡಿಗೆ ಕರೆಯಿಸಿಕೊಂಡು ಪ್ರಶ್ನಿಸಿದ್ದು, ಆದರೆ ಆರೋಪವನ್ನು ಹರೀಶ್‌ ನಿರಾಕರಿಸಿದರು. ತಾಲೂಕು ಕಚೇರಿಯ ಪ್ರತಿ ವಿಭಾಗದ ಕೊಠಡಿಗೆ ಸಿಸಿ ಕೆಮರಾ ಅಳವಡಿಸಲಾಗಿದೆ. ಲಂಚದ ಬೇಡಿಕೆಯ ಕಾಲ್‌ ಅಥವಾ ವೀಡಿಯೋ ದಾಖಲೆ ಗಳನ್ನು ಸಂಗ್ರಹಿಸಿ ನೀಡಿದರೆ ಸಿಬ್ಬಂದಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆಂದರು.

ಜೂ.13ರೊಳಗೆ ಆರ್‌ಟಿಸಿ
ಸರ್ವೇ ನಂಬರ್‌ ಬದಲಾಗಿ ಸರಕಾರಿ ಸೌಲಭ್ಯದಿಂದ ವಂಚಿತರಾಗಿದ್ದ ಮೂಡುಕೋಡಿ ಗ್ರಾಮದ 27 ಮಂದಿ ಫಲಾನುಭವಿಗಳಿಗೆ ಜೂ. 13ರ ಒಳಗೆ ಸರ್ವೇ ನಂಬರ್‌ ಸರಿಪಡಿಸಿ ಆರ್‌ಟಿಸಿ ದೊರಕಿಸಿಕೊಡುವು ದಾಗಿ ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಭರವಸೆ ನೀಡಿದರು.

ಸಮಸ್ಯೆ ಪರಿಹಾರಕ್ಕೆ ಭೇಟಿ
ಹಳೆ ಕಟ್ಟಡದಿಂದ ಮಿನಿ ವಿಧಾನಸೌಧಕ್ಕೆ ಕಚೇರಿ ಸ್ಥಳಾಂತರಗೊಂಡಾಗ ಇಲಿ, ಹೆಗ್ಗಣಗಳು (ಭ್ರಷ್ಟಾಚಾರಿ ಸಿಬಂದಿ) ಅಲ್ಲೇ ಉಳಿಯುತ್ತವೆ ಅಂದುಕೊಂಡಿ ದ್ದೆವು. ಆದರೆ ಇದೀಗ ಹೊಸ ಕಟ್ಟಡ ದಲ್ಲಿ ತಿಮಿಂಗಿಲಗಳೇ ಇವೆ. ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ತಾ| ಕಚೇರಿಗೆ ಭೇಟಿ ನೀಡುತ್ತಲೇ ಇರುತ್ತೇನೆ.
– ಕೆ. ವಸಂತ ಬಂಗೇರ ಮಾಜಿ ಶಾಸಕರು

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.