ಕೊಲೆ ಯತ್ನ: ನಾಲ್ವರು ಆರೋಪಿಗಳ ಬಂಧನ
Team Udayavani, May 15, 2019, 3:02 AM IST
ಬೆಂಗಳೂರು: ಕ್ರಿಕೆಟ್ ಆಡುವಾಗ ನಡೆದ ಗಲಾಟೆ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದ ನಾಲ್ವರು ಆರೋಪಿಗಳನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.
ಸುಬ್ರಹ್ಮಣ್ಯನಗರದ ಮಂಜುನಾಥ (27), ಗಾಯತ್ರಿನಗರದ ವಿನೋದ್ (28), ಮನೋಜ್ ಕುಮಾರ್(19) ಮತ್ತು ರಾಕೇಶ್ (19) ಬಂಧಿತರು. ಆರೋಪಿಗಳು ಏ.24ರಂದು ಮಂಜುನಾಥನಗರದ ಜೆ.ಸಿ.ಬೇಕರಿ ಸಮೀಪದ ಭರತ್ ಕುಮಾರ್ ಎಂಬಾತನ ಮೇಲೆ ಮಾರಕಾಸðಗಳಿಂದ ಹಲ್ಲೆ ನಡೆಸಿದ್ದರು ಎಂದು ಪೊಲೀಸರು ಹೇಳಿದರು.
ಸಂಜಯ್‌ನಗರದ ಮೈದಾನದಲ್ಲಿ ಕ್ರಿಕೆಟ್ ಆಡುವಾಗ ಭರತ್‌ಕುಮಾರ್ ಹಾಗೂ ಸ್ನೇಹಿತರ ಜತೆ ಆರೋಪಿಗಳು ವಾಗ್ವಾದ ನಡೆಸಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದರು. ಇದೇ ದ್ವೇಷದ ಹಿನ್ನೆಲೆಯಲ್ಲಿ ಏ.24ರಂದು ತಡರಾತ್ರಿ 12.30ರ ಸುಮಾರಿಗೆ ಮಂಜುನಾಥನಗರದ ಜೆ.ಸಿ.ಬೇಕರಿ ಬಳಿ ಬೈಕ್‌ನಲ್ಲಿ ಬಂದ ಆರೋಪಿಗಳು,
ಸ್ನೇಹಿತರಾದ ಪ್ರಮೋದ್ ಹಾಗೂ ಮಹೇಂದ್ರ ಜತೆ ಮಾತನಾಡುತ್ತಾ ನಿಂತಿದ್ದ ಭರತ್‌ಕುಮಾರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಪರಿಣಾಮ ಭರತ್ ಕುಮಾರ್ ಕೈ ಮತ್ತು ಎದೆಗೆ ಗಂಭೀರ ಗಾಯವಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು
Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.