ಐಟಿ-ಚುನಾವಣಾಧಿಕಾರಿಗಳ ದಾಳಿ;ಚಿನ್ನ ಲೇಪಿತ ಸಾಮಗ್ರಿ-ಶಿವಳ್ಳಿ ಭಾವಚಿತ್ರ ವಶ
Team Udayavani, May 15, 2019, 10:34 AM IST
ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಗೋಕುಲ ರಸ್ತೆಯ ಕಾಟನ್ ಕೌಂಟಿ ಕ್ಲಬ್‌ನ ಕೊಠಡಿಯಲ್ಲಿ ಸಂಗ್ರಹಿಸಿಡಲಾಗಿದ್ದ ಚಿನ್ನ ಲೇಪಿತ ಬಟ್ಟಲುಗಳು, ದಿ| ಶಿವಳ್ಳಿ ಭಾವಚಿತ್ರವುಳ್ಳ ಫೋಟೋಗಳು, ಮತದಾರರ ಪಟ್ಟಿಗಳನ್ನು ಐಟಿ ಹಾಗೂ ಚುನಾವಣಾ ಅಧಿಕಾರಿಗಳು ಸೋಮವಾರ ರಾತ್ರಿ ವಶಪಡಿಸಿಕೊಂಡು, ಓರ್ವರ ವಿರುದ್ಧ ದೂರು ದಾಖಲಿಸಿದ್ದಾರೆ.
ಕುಂದಗೋಳ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳ ಮೇಲೆ ಹದ್ದಿನಕಣ್ಣು ಇರಿಸಿರುವ ಚುನಾವಣಾ ಆಯೋಗ, ಆದಾಯ ತೆರಿಗೆ ಇಲಾಖೆ ಹಾಗೂ ಎಫ್ಎಸ್‌ಟಿ ಅಧಿಕಾರಿಗಳ ತಂಡ ಸೋಮವಾರ ರಾತ್ರಿ ನಗರದ ವಿವಿಧ ಪ್ರತಿಷ್ಠಿತ ಹೋಟೆಲ್ಗಳ ಮೇಲೆ ದಾಳಿ ನಡೆಸಿತು.
ದಾಳಿ ವೇಳೆ ಅಧಿಕಾರಿಗಳು ಕಾಟನ್ ಕೌಂಟಿ ಕ್ಲಬ್‌ನ ಕೊಠಡಿ ಸಂಖ್ಯೆ 307ರಲ್ಲಿ ಇರಿಸಲಾಗಿದ್ದ ದಿ| ಸಿ.ಎಸ್. ಶಿವಳ್ಳಿ ಅವರುಳ್ಳ 11 ಭಾವಚಿತ್ರಗಳು, ಚಿನ್ನ ಲೇಪಿತ 50 ಅರಿಷಿಣ ಹಾಗೂ ಕುಂಕುಮದ ಬಟ್ಟಲುಗಳು, ಕುಂದಗೋಳ ವಿಧಾನಸಭಾ ಕ್ಷೇತ್ರ ಭಾಗದ ಸಂಖ್ಯೆ 51ರಿಂದ 57ರವರೆಗಿನ ಮತದಾರರ ಪಟ್ಟಿಗಳು ಹಾಗೂ ಕಾಂಗ್ರೆಸ್ ಪಕ್ಷದ ಚಿಹ್ನೆ ಹೊಂದಿದ್ದ ಟೊಪ್ಪಿಗೆ ವಶಪಡಿಸಿಕೊಂಡಿದ್ದಾರೆ.
ಕುಂದಗೋಳ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರ ಮತದಾರರ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಇವುಗಳನ್ನು ಸಂಗ್ರಹಿಸಲಾಗಿತ್ತು. ಘಟನೆಗೆ ಸಂಬಂಧಿಸಿ ಶಿವಕುಮಾರ ಗೋಕಾವಿ ವಿರುದ್ಧ ಗೋಕುಲ ರಸ್ತೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.