ಸಮ್ಮಿಶ್ರ ಸರ್ಕಾರಕ್ಕೆ ಸಿದ್ದು ಟೈಂ ಬಾಂಬ್‌ ಫಿಕ್ಸ್‌

23ರಂದು ಸ್ಫೋಟ, ಸರ್ಕಾರ ಪತನ ಖಚಿತ

Team Udayavani, May 15, 2019, 10:57 AM IST

hubali-tdy-7….

ಹುಬ್ಬಳ್ಳಿ: ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಟೈಮ್‌ ಬಾಂಬ್‌ ಫಿಕ್ಸ್‌ ಮಾಡಿದ್ದು, ಮೇ 23ರಂದು ಸ್ಫೋಟಗೊಂಡು ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಸಿದ್ದರಾಮಯ್ಯ ಬಟನ್‌ ಒತ್ತಿ ಬಾಂಬ್‌ ಸ್ಫೋಟಗೊಳಿಸುವ ಮೂಲಕ ಸಮ್ಮಿಶ್ರ ಸರ್ಕಾರಕ್ಕೆ ಇತಿಶ್ರೀ ಹಾಡಲಿದ್ದಾರೆ. ಲೋಕಸಭೆ ಹಾಗೂ ಉಪಚುನಾವಣೆಗಳ ಫಲಿತಾಂಶದ ದಿನಾಂಕ ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮಧ್ಯದ ಬೇಗುದಿ ಸ್ಫೋಟಗೊಂಡಿದೆ. ಇದಕ್ಕೆ ಸಿದ್ದರಾಮಯ್ಯ ಅವರೇ ಕಾರಣವಾಗಿದ್ದಾರೆ ಎಂದರು.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಅವರನ್ನು ಕಣಕ್ಕಿಳಿಸಿದ್ದೇ ಸಿದ್ದರಾಮಯ್ಯ. ತಮ್ಮ ಬೆಂಬಲಿಗರಾದ ಚೆಲುವರಾಯ ಸ್ವಾಮಿ ಹಾಗೂ ಬಾಲಕೃಷ್ಣ ಅವರನ್ನು ಸುಮಲತಾ ಪರ ಪ್ರಚಾರ ಮಾಡುವಂತೆ ಮಾಡಿ, ಕುಮಾರಸ್ವಾಮಿ ಪುತ್ರ ನಿಖೀಲ್ ಅವರನ್ನು ಸೋಲಿಸಲು ಶಕ್ತಿ ಮೀರಿ ಪ್ರಯತ್ನಿಸಿದ್ದಾರೆ. ಸಿದ್ದರಾಮಯ್ಯಗೆ ನಿಖೀಲ್ ಗೆಲ್ಲುವುದು ಬೇಕಾಗಿಲ್ಲ, ಸುಮಲತಾ ಗೆಲ್ಲಬೇಕಿದೆ. ಸುಮಲತಾ ಪರ ಪ್ರಚಾರ ಮಾಡಿರುವುದಾಗಿ ಚೆಲುವರಾಯಸ್ವಾಮಿಯೇ ಬಹಿರಂಗವಾಗಿ ಹೇಳಿಕೊಂಡಿದ್ದಾರೆ ಎಂದರು.

ಸಿದ್ದರಾಮಯ್ಯ ಮಾಡುತ್ತಿರುವ ಷಡ್ಯಂತ್ರ ಜೆಡಿಎಸ್‌ ಮುಖಂಡರಿಗೆ ಗೊತ್ತಾಗುತ್ತಿದೆ. ಇದೇ ಕಾರಣದಿಂದ ಕುಮಾರಸ್ವಾಮಿ ಪಕ್ಷದ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ ಮೂಲಕ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ಕೊಡಿಸಿದ್ದಾರೆ. ಕುಮಾರಸ್ವಾಮಿ ತಮ್ಮ ಭಾವನೆಯನ್ನು ವಿಶ್ವನಾಥ ಮೂಲಕ ಹೊರಹಾಕುತ್ತಿದ್ದಾರೆ. ವಿಶ್ವನಾಥ ಹೇಳಿಕೆ ನೀಡಿದ್ದಕ್ಕೆ ಜೆಡಿಎಸ್‌ನ ಯಾವುದೇ ಮುಖಂಡರು ವಿರೋಧ ವ್ಯಕ್ತಪಡಿಸಿಲ್ಲ. ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಮುಖಂಡರ ಮುಸುಕಿನ ಗುದ್ದಾಟ ಬಹಿರಂಗಗೊಂಡಿದೆ. ಸಿದ್ದರಾಮಯ್ಯ ಆಶೀರ್ವಾದ ಇರುವವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿರುತ್ತೇನೆ ಎಂದು ಕುಮಾರಸ್ವಾಮಿ ಹೇಳಿರುವುದು ವಸ್ತು ಸ್ಥಿತಿಯನ್ನು ಹೇಳುತ್ತದೆ ಎಂದರು.

ಸಿದ್ದರಾಮಯ್ಯ ಮಾತೆತ್ತಿದರೆ ನೈತಿಕತೆ ಬಗ್ಗೆ ಹೇಳುತ್ತಾರೆ. ಮುಂದೆ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗಬೇಕೆನ್ನುವ ಸಿದ್ದರಾಮಯ್ಯ, ತಮ್ಮ ಚೇಲಾಗಳ ಮೂಲಕ ತಾವೇ ಮುಂದಿನ ಸಿಎಂ ಎಂದು ಹೇಳಿಸಿ, ಗೊಂದಲ ಸೃಷ್ಟಿಸಿದ್ದಾರೆ. ಇದೇ ನನ್ನ ಕೊನೆಯ ಚುನಾವಣೆ, ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದನ್ನು ಸಿದ್ದು ಮರೆತಂತಿದೆ ಎಂದರು.

 

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.