ಚಂದ್ರೇಗೌಡ ಬೆಂಬಲಿಗರಿಗೆ ಅವಕಾಶ ನೀಡಿ
Team Udayavani, May 15, 2019, 3:20 PM IST
ಮಾಲೂರು ಪಟ್ಟಣದಲ್ಲಿ ತಾಲೂಕು ಕಾಂಗ್ರೆಸ್ ಆಯೋಜಿಸಿದ್ದ ಪುರಸಭಾ ಚುನಾವಣೆಗಳ ಪೂರ್ವ ಭಾವಿ ಸಭೆಯಲ್ಲಿ ಸಂಸದ ಕೆ.ಎಚ್.ಮುನಿಯಪ್ಪ, ಶಾಸಕ ನಂಜೇಗೌಡರನ್ನು ಸನ್ಮಾನಿಸಲಾಯಿತು
ಮಾಲೂರು: ಮೈತ್ರಿ ಧರ್ಮದ ಆಧಾರದ ಮೇಲೆ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡಿರುವ ತಾಲೂಕು ಜೆಡಿಎಸ್ ಅಧ್ಯಕ್ಷ ಎಚ್.ವಿ.ಚಂದ್ರೇಗೌಡರ ಬೆಂಬಲಿಗರಿಗೆ ಹೊಂದಾಣಿಕೆ ಆಧಾರದ ಮೇಲೆ ಅವಕಾಶ ಕಲ್ಪಿಸುವಂತೆ ಸಂಸದ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಪಟ್ಟಣದ ಕುಂಬೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪುರಸಭಾ ಚುನಾವಣೆ ಪೂರ್ವಸಿದ್ಧತೆಗಾಗಿ ಕರೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರದಲ್ಲಿ ಕೋಮುವಾದಿ ಶಕ್ತಿಗಳನ್ನು ದೂರ ಮಾಡಲು ಜಾತ್ಯತೀಯ ಶಕ್ತಿಗಳು ಒಗ್ಗೂಡಿರುವಂತೆ ಸ್ಥಳೀಯ ಸಂಸ್ಥೆಗಳ ಪ್ರಬಲ ಚುನಾವಣೆಯಾಗಿರುವ ಪುರಸಭೆಯಲ್ಲಿಯೂ ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕಾಗಿದೆ ಎಂದು ಹೇಳಿದರು.
27 ವಾರ್ಡ್‌ನಲ್ಲೂ ಗೆಲುವು: ಪುರಸಭೆಯ ಎಲ್ಲಾ 27 ವಾರ್ಡ್‌ಗಳಲ್ಲಿಯೂ ಸಾಮಾಜಿಕ ನ್ಯಾಯದ ಅಡಿಯಲ್ಲಿ ಟಿಕೆಟ್ ನೀಡಲು ಸಾಧ್ಯವಿದೆ. ವಾರ್ಡ್‌ಗೆ ಒಬ್ಬರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಟಿಕೆಟ್ ಸಿಗದ ಆಕಾಂಕ್ಷಿಗಳು ನಿರಾಸೆಯಾಗದೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿದಲ್ಲಿ ಎಲ್ಲಾ 27 ವಾರ್ಡ್ ಗಳಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ತಿಳಿಸಿದರು.
ಸೂಕ್ತ ತೀರ್ಮಾನ ಕೈಗೊಳ್ಳಿ: ಕಾರ್ಯಕರ್ತರು ವಿನಾಕಾರಣ ಗೊಂದಲಗಳನ್ನು ಸೃಷ್ಟಿಸಿಕೊಳ್ಳದೆ, ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುವಂತೆ ಸೂಚಿಸಿದ ಸಂಸದ ಮುನಿಯಪ್ಪ, ಜೆಡಿಎಸ್‌ನ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುವುದಾದರೆ ಕೆಪಿಸಿಸಿ ಅಧ್ಯಕ್ಷರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲು ತಾಲೂಕು ಉಸ್ತುವಾರಿಗಳಿಗೆ ಸೂಚಿಸಿದರು.
ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ, ಸ್ಥಳೀಯ ಸಂಸ್ಥೆ ಪುರಸಭಾ ಚುನಾವಣೆ ಪಕ್ಷ ಸಂಘಟನೆ ದೃಷ್ಟಿಯಿಂದ ಪ್ರಮುಖವಾಗಿದೆ. ಪಟ್ಟಣದಲ್ಲಿಯೇ ವಾಸ್ತವ್ಯ ಮಾಡುವ ಮೂಲಕ ಪ್ರತಿವಾರ್ಡ್‌ನ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಆಕಾಂಕ್ಷಿಗಳ ಸಂಖ್ಯೆ ಹೆಚ್ಚಳ :ಪಟ್ಟಣದ ಎಲ್ಲಾ 27 ವಾರ್ಡ್‌ಗಳಿಂದ 100 ಮಂದಿ ಆಕಾಂಕ್ಷಿಗಳು ಅವಕಾಶ ಕೋರಿ ಮನವಿ ಸಲ್ಲಿಸಿದ್ದಾರೆ. ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಉಸ್ತುವಾರಿ ವಹಿಸಿರುವ ಪ್ರಭಾಕರ್‌ರೆಡ್ಡಿ ಅವರನ್ನು ಒಳಗೊಂಡ ಅಯ್ಕೆ ಸಮಿತಿಯು ಸೂಕ್ತ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುವುದು. ಇತರೆ ಆಕಾಂಕ್ಷಿಗಳು ನಿರಾಸೆಯಾಗದೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಕಾರ್ಯ ಮಾಡಬೇಕಾಗಿದೆ. ಅವಕಾಶ ವಂಚಿತ ಆಕಾಂಕ್ಷಿಗಳಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ತಿಳಿಸಿದ ಅವರು, ಪಕ್ಷದ ಯಾವುದೇ ಕಾರ್ಯಕರ್ತರಿಗೂ ಅನ್ಯಾಯ ಮಾಡುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರು. ಜಿಲ್ಲಾಧ್ಯಕ್ಷ ಚಂದ್ರಾರೆಡ್ಡಿ, ಸಿ.ಲಕ್ಷ್ಮೀ ನಾರಾಯಣ್, ಉಸ್ತುವಾರಿ ಪ್ರಭಾಕರ್‌ರೆಡ್ಡಿ, ಸಿ.ಪಿ.ವೆಂಕಟೇಶ್ ಮಾತನಾಡಿದರು. ಸಿ.ರಾಜಣ್ಣ, ಟಿ.ಮುನಿಯಪ್ಪ, ಎಂ.ಜಿ.ಮಧು ಸೂದನ್, ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ, ಸೋಮಶೇಖರ್, ಚುನಾವಣೆಯ ವೀಕ್ಷಕಿ ವಸಂತ ಕವಿತಾ, ಎಚ್.ಹನುಮಂತಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.