ಉಪ್ಪಿನಂಗಡಿ: ನಾಡಕಚೇರಿಗೆ ಕೂಡಿಬಾರದ ಕಟ್ಟಡ ಭಾಗ್ಯ!
ಮೂರು ತಿಂಗಳು ಕಳೆದರೂ ಸ್ವಂತ ಕಟ್ಟಡ ನಿರ್ಮಾಣಕ್ಕೆ ತಯಾರಿ ನಡೆದಿಲ್ಲ
Team Udayavani, May 15, 2019, 4:02 PM IST
ಪಾಳು ಬಿದ್ದಿರುವ ಉಪ್ಪಿನಂಗಡಿಯ ಹಳೆಯ ನಾಡಕಚೇರಿಯ ಕಟ್ಟಡ.
ಉಪ್ಪಿನಂಗಡಿ: ಹೋಬಳಿ ಮಟ್ಟದ ನಾಡಕಚೇರಿ ಕಟ್ಟಡ ಸ್ಥಳಾಂತರ ಗೊಂಡರೂ ಸ್ವಂತ ಕಟ್ಟಡ ನಿರ್ಮಾಣಕ್ಕೆ ಇನ್ನೂ ಕಾಲ ಕೂಡಿ ಬಾರದೆ ಪಾಳು ಬಿದ್ದುಕೊಂಡಿದೆ.
ಕಂದಾಯ ಇಲಾಖೆಗೆ ಸೇರಿದ ಕಟ್ಟಡ ಹಲವು ವರ್ಷಗಳಿಂದ ಅಪಾಯದಲ್ಲಿದ್ದು, ಕರ್ತವ್ಯ ನಿಭಾಯಿಸಲು ಕಷ್ಟ ಎಂಬುದನ್ನು ಮನಗಂಡ ಜಿಲ್ಲಾಧಿಕಾರಿಗಳು ಬದಲಿ ಸರಕಾರಿ ಕಟ್ಟಡಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಿಸುವಂತೆ ಆದೇಶಿಸಿದ್ದರು. ಅದರಂತೆ ಪುತ್ತೂರು ಸಹಾಯಕ ಆಯುಕ್ತರು ಉಪ್ಪಿನಂಗಡಿ ನೂತನ ಪಂಚಾಯತ್ ಕಟ್ಟಡದಲ್ಲಿ ಸ್ಥಳಾವಕಾಶ ಕೋರಿ ಮನವಿ ಸಲ್ಲಿಸಿದ್ದರು.
ಮನವಿಗೆ ಸ್ಪಂದಿಸಿದ ಪಂಚಾಯತ್ ಆಡಳಿತ ಸ್ಥಳಾವಕಾಶಕ್ಕೆ ಸರ್ವ ಸದಸ್ಯರ ಒಪ್ಪಿಗೆಯಂತೆ ಸಮ್ಮತಿ ಸೂಚಿಸಿದ ಮೇರೆಗೆ ನಾಡಕಚೇರಿಗೆ ಅವಕಾಶ ಕೊಟ್ಟಿತ್ತು. ಅದಾಗಿ ಮೂರು ತಿಂಗಳು ಕಳೆದರೂ ಇನ್ನೂ ನಾಡಕಚೇರಿ ನೂತನ ಸ್ವಂತ ಕಟ್ಟಡ ನಿರ್ಮಾಣಕ್ಕೆ ಯಾವುದೇ ತಯಾರಿ ನಡೆದಿಲ್ಲ.
ಕಟ್ಟಡ ರಚನೆ ಮಂಜೂರಾತಿ ದೊರಕಿದ ಕುರಿತು ಯಾವುದೇ ಮಾಹಿತಿ ಈತನಕ ಇಲ್ಲ. ಅಧಿಕಾರಿಗಳು ಪಂಚಾಯತ್ ಕಟ್ಟಡ ಸ್ಥಳಾಂತರಕ್ಕೆ ಮುನ್ನ ಶೀಘ್ರವೇ ಸರಕಾರದ ಬಜೆಟ್‌ನಲ್ಲಿ 10 ಲಕ್ಷ ರೂ. ಕ್ರೋಡೀಕರಿಸಿ ತತ್‌ಕ್ಷಣವೇ ಕಾಮಗಾರಿ ಆರಂಭಿಸಿ ಸುಸಜ್ಜಿತ ಕಟ್ಟಡ ನಿರ್ಮಿಸುವ ಕುರಿತು ಮಾತುಕತೆ ನಡೆದಿತ್ತು.
ಪ್ರಕ್ರಿಯೆ ಆರಂಭಿಸಿಲ್ಲ
ನಾಡಕಚೇರಿ ಸ್ಥಳಾಂತರಗೊಂಡು ಮೂರು ತಿಂಗಳು ಕಳೆದರೂ ಯಾವುದೇ ಪ್ರಕ್ರಿಯೆ ಆರಂಭಿಸಿಲ್ಲ. ಈ ಮಳೆಗಾಲದಲ್ಲಿ ಹಳೆಯ ಕಟ್ಟಡ ಮುರಿದು ಬೀಳುವ ಅಪಾಯವಿದೆ. ಪುತ್ತೂರು ತಾಲೂಕಿನ ಬಜತ್ತೂರು, 34ನೇ ನೆಕ್ಕಿಲಾಡಿ, ಉಪ್ಪಿನಂಗಡಿ, ಬನ್ನೂರು, ಕೋಡಿಂಬಾಡಿ, ಬೆಳ್ಳಿಪ್ಪಾಡಿ ಸಹಿತ 13 ಗ್ರಾಮ ವ್ಯಾಪ್ತಿ ಹೊಂದಿದೆ. ಮಳೆಗಾಲ ಆರಂಭವಾದರೆ ಈ ಕಟ್ಟಡದ ಪಕ್ಕ ನಡೆದಾಡುವುದೂ ಅಪಾಯಕಾರಿ ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ಪ್ರಸ್ತಾವನೆ ಸಲ್ಲಿಸಲಾಗಿದೆ
ಉಪ್ಪಿನಂಗಡಿ ನಾಡ ಕಚೇರಿಯ ನಿವೇಶನದಲ್ಲಿ ಕಟ್ಟಡವು ಅಪಾಯದ ಸ್ಥಿತಿಯಲ್ಲಿದ್ದು, ಈಗಾಗಲೇ ಪಂಚಾಯತ್ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಆದರೆ, ಹಳೆಯ ಕಟ್ಟಡವನ್ನು ಕೆಡವಿ ನೂತನ ಕಟ್ಟಡ ರಚನೆಗಾಗಿ 25 ಲಕ್ಷ ರೂ.ಗಳ ಪ್ರಸ್ತಾವನೆಯನ್ನು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ. ಮಂಜೂರಾತಿ ದೊರಕಿದ ತತ್‌ಕ್ಷಣವೇ ಸ್ವಂತ ಕಟ್ಟಡ ರಚನೆಯಾಗಲಿದೆ.
ಡಾ| ಪ್ರದೀಪ್ ಕುಮಾರ್,
ಪುತ್ತೂರು ತಾಲೂಕು ದಂಡಾಧಿಕಾರಿ.
‘ಅಧಿಕಾರಿಗಳು ಸ್ಪಂದಿಸಿಲ್ಲ’
ನಾಡಕಚೇರಿ ಪಂಚಾಯತ್ ಕಟ್ಟಡಕ್ಕೆ ಸ್ಥಳಾಂತರ ಆಗುವ ಮುನ್ನವೇ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಅವರು, ನೂತನ ಕಟ್ಟಡ ರಚನೆಗೆ ಸರಕಾರದಿಂದ ಮಂಜೂರಾತಿ ಪಡೆಯುವುದು ಕಷ್ಟಸಾಧ್ಯವಾದಲ್ಲಿ, ನೆಲ ಅಂತಸ್ತಿನಲ್ಲಿ ಗ್ರಾ.ಪಂ. ವಾಣಿಜ್ಯ ಕಟ್ಟಡ ರಚನೆಗೆ ಅವಕಾಶ ನೀಡುವುದಾದಲ್ಲಿ 2ನೇ ಮಹಡಿಯಲ್ಲಿ ನಾಡಕಚೇರಿ ಕಟ್ಟಡ ನಿರ್ಮಿಸಿಕೊಡುವುದಾಗಿ ತಿಳಿಸಿದ್ದರು. ಆದರೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಪಂದಿಸಿಲ್ಲ. ಹೀಗಾಗಿ, ಪಂಚಾಯತ್ ಆಡಳಿತ ಸಾರ್ವಜನಿಕ ಸೇವೆಯಡಿ ನಾಡಕಚೇರಿಗೆ ತಾತ್ಕಾಲಿಕ ಅವಕಾಶ ಕಲ್ಪಿಸಿತ್ತು. ತತ್‌ಕ್ಷಣವೇ ಅವರು ಸ್ವಂತ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡದಿದ್ದಲ್ಲಿ ಪಂಚಾಯತ್ ಸರ್ವಸದಸ್ಯರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ವಿಶೇಷ ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.