ಚುನಾವಣೆ ನೀತಿ ಸಂಹಿತೆ ಪ್ರಭಾವ: ಕಾಮಗಾರಿ ಕುಂಠಿತ


Team Udayavani, May 16, 2019, 6:00 AM IST

Voting 1

ವಿಟ್ಲ: 2019ನೇ ಸಾಲಿನ ಮಾ. 10ರಂದು ಲೋಕಸಭೆ ಚುನಾವಣೆಯ ದಿನಾಂಕ ಮತ್ತು ಜತೆಯಲ್ಲೇ ನೀತಿಸಂಹಿತೆ ಘೋಷಣೆಯಾಗಿತ್ತು. ನೀತಿಸಂಹಿತೆ ಪ್ರಭಾವದಿಂದ, ಎಲ್ಲ ಕಾಮಗಾರಿಗಳು ಕುಂಠಿತಗೊಂಡು, ಎಲ್ಲ ಚಟುವಟಿಕೆಗಳು ಸ್ಥಗಿತಗೊಂಡಿವೆ. ಅನಿವಾರ್ಯವಾಗಿ ನೀರಿಗೆ ಸ್ಪಂದಿಸಲಾಗುತ್ತಿದೆ. ಇನ್ನಾವುದೇ ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಗುತ್ತಿಲ್ಲ ಅಥವಾ ಹೊಸ ಯೋಜನೆಗಳು ಅನುಷ್ಠಾನಕ್ಕೆ ಬರುತ್ತಿಲ್ಲ. ಈ ಮಧ್ಯೆ ಸ್ಥಳೀಯ ಸಂಸ್ಥೆಯ ಚುನಾವಣೆಯೂ ಘೋಷಣೆಯಾಗಿರುವುದರಿಂದ ನೀತಿಸಂಹಿತೆ ಮುಂದುವರಿಯಲಿದೆ. ಪರಿಣಾಮವಾಗಿ ಹೊಸ ಯೋಜನೆಗಳು ಜಾರಿಗೆ ಬರಲಾರದು. ಇದು ತೀವ್ರ ಹಿನ್ನಡೆಗೆ ಕಾರಣವಾಗಿದೆ ಎಂದು ನಾಗರಿಕರು ಆಡಿಕೊಳ್ಳುತ್ತಿದ್ದಾರೆ.

ಸಾಮಾನ್ಯ ಸಭೆ ಇಲ್ಲ
ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆ, ತಾ.ಪಂ. ಸಭೆ, ಜಿ.ಪಂ. ಸಭೆ ಗಳೂ ನಡೆಯುತ್ತಿಲ್ಲ. ಯಾವುದೇ ನಿರ್ಧಾರ ಗಳನ್ನು ಕೈಗೊಳ್ಳಲಾಗುತ್ತಿಲ್ಲ. ಜನ ಸಾಮಾನ್ಯರ ಅರ್ಜಿಯನ್ನೂ ಸ್ವೀಕರಿಸಿ ಕ್ರಮ ಕೈಗೊಳ್ಳುವಂತಿಲ್ಲ. ಇದು ಆಡಳಿತ ವ್ಯವಸ್ಥೆಗೆ ಕಗ್ಗಂಟಾಗಿದೆ. ಪಂಚಾಯತ್‌ ಪಿಡಿಒ, ಕಂದಾಯ ಇನ್ನಿತರ ಎಲ್ಲ ಸರಕಾರಿ ಇಲಾಖಾಧಿಕಾರಿಗಳಿಗೆ ಸ್ಥಳೀಯ ಆಡಳಿತ ವ್ಯವಸ್ಥೆಯತ್ತ ಗಮನಹರಿಸಲಾಗುತ್ತಿಲ್ಲ. ಎಂದು ಗ್ರಾ.ಪಂ.ಅಧ್ಯಕ್ಷರುದೂರುತ್ತಾರೆ. ಇದೀಗ ಉದ್ಯೋಗ ಖಾತರಿ ಯೋಜನೆಯ ಅನುದಾನವನ್ನು ಬಳಸುವ ಸಮಯ. ಆದರೆ ಈ ಅನುದಾನದ ಯೋಜನೆ ರೂಪಿಸಲು, ಕಾಮಗಾರಿ ಆಯ್ಕೆ ಮಾಡುವುದಕ್ಕೆ ನೀತಿಸಂಹಿತೆಯೇ ಅಡ್ಡಿಯಾಗಿದೆ. ಪರಿಣಾಮವಾಗಿ ನಾಗರಿಕರಿಗೆ ಕಿರಿಕಿರಿಯುಂಟಾಗಿದೆ.

ರಸ್ತೆ ಕಾಮಗಾರಿ ಮುಂದುವರಿದಿದೆ
ಚುನಾವಣೆ ಪೂರ್ವದಲ್ಲಿ ಆರಂಭವಾದ ರಸ್ತೆ ಕಾಮಗಾರಿಗಳು ಮುಂದುವರಿದಿವೆ. ಕೆಲವೊಂದು ಪೂರ್ತಿಯಾಗಿವೆ. ಆದರೆ ಗುತ್ತಿಗೆದಾರರಿಗೆ ಬಿಲ್‌ ಪಾವತಿಯಾಗುತ್ತಿಲ್ಲ. ಕಾರಣ ನೀತಿಸಂಹಿತೆ! ಆದರೆ ಮಳೆಗಾಲದ ಸಿದ್ಧತೆಗೆ ಇಲಾಖೆ ಈಗಾಗಲೇ ಟೊಂಕ ಕಟ್ಟಿದೆ. ಅಧಿಕಾರಿಗಳು ಪ್ರತ್ಯೇಕ ಸಭೆ ಏರ್ಪಡಿಸಿ, ಚರ್ಚಿಸಿ, ಪೂರ್ವಸಿದ್ಧತೆ ಮಾಡತೊಡಗಿದ್ದಾರೆ.

ಮೇ 23ರಂದು ನೀತಿಸಂಹಿತೆ ಕೊನೆಯ ಹಂತವನ್ನು ತಲುಪಲಿದ್ದು, ಆ ಬಳಿಕ ಎಲ್ಲ ಕಾಮಗಾರಿಗಳೂ ವೇಗವನ್ನು ಪಡೆಯಲಿವೆ. ಈಗಾಗಲೇ ಇಲಾಖೆಗಳಲ್ಲಿ ಕಾರ್ಯಾರಂಭದ ಒತ್ತಡ ಆರಂಭವಾಗಿವೆ ಎಂದು ಲೋಕೋಪಯೋಗಿ ಇಲಾಖಾಧಿಕಾರಿಗಳು ತಿಳಿಸುತ್ತಾರೆ.

ಟಾಪ್ ನ್ಯೂಸ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.