ರಮೇಶ್ ಜಾರಕಿಹೊಳಿ ಭೇಟಿ ಮಾಡಿದ ಕುಮಠಳ್ಳಿ
Team Udayavani, May 16, 2019, 3:06 AM IST
ಬೆಂಗಳೂರು: ಎರಡೂ ಕ್ಷೇತ್ರಗಳ ಉಪ ಚುನಾವಣೆಯ ನಡುವೆಯೇ “ಆಪರೇಷನ್ ಕಮಲ’ಕ್ಕೆ ಯತ್ನ ನಡೆಯುತ್ತಿದೆ ಎಂಬ ಗುಸು ಗುಸು ಮಧ್ಯೆ ಅಥಣಿ ಶಾಸಕ ಮಹೇಶ್ ಕುಮಠಳ್ಳಿಯವರು ಬಂಡಾಯ ಶಾಸಕ ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಿ, ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿಯಿಂದ ಅಂತರ ಕಾಯ್ದುಕೊಂಡು ತಾವು ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ ಎಂದು ಹೇಳಿದ್ದ ಮಹೇಶ್ ಕುಮಠಳ್ಳಿ, ಬುಧವಾರ ರಮೇಶ್ ಜಾರಕಿಹೊಳಿಯನ್ನು ಬೆಂಗಳೂರಿನ ಅವರ ಸರ್ಕಾರಿ ನಿವಾಸದಲ್ಲಿ ಭೇಟಿ ಮಾಡಿದರು. ಇದು ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಮೇ 23ರ ನಂತರ ತಮ್ಮ ಬೆಂಬಲಿಗರೊಂದಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿರುವ ರಮೇಶ್ ಜಾರಕಿಹೊಳಿ ಅವರೊಂದಿಗೆ ಮಹೇಶ್ ಕುಮಠಳ್ಳಿಯೂ ಗುರುತಿಸಿಕೊಂಡಿದ್ದಾರೆ. ಅಲ್ಲದೇ ಮಂಗಳವಾರ “ಆಪರೇಷನ್ ಕಮಲ’ದ ಜವಾಬ್ದಾರಿ ಹೊತ್ತುಕೊಂಡಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬೆನ್ನಲ್ಲೆ ಬುಧವಾರ ಮಹೇಶ್ ಕುಮಠಳ್ಳಿಯ ಭೇಟಿ ನಡೆದಿದೆ. ಹೀಗಾಗಿ, ಭೇಟಿಗೆ ಮತ್ತಷ್ಟು ಮಹತ್ವ ಬಂದಂತಾಗಿದೆ.
ರಮೇಶ್ ಜಾರಕಿಹೊಳಿ ಭೇಟಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಹೇಶ್ ಕುಮಠಳ್ಳಿ, “ರಮೇಶ್ ಜಾರಕಿಹೊಳಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಾನು ಕುಂದಗೋಳ ಉಪ ಚುನಾವಣೆಯ ಪ್ರಚಾರದಲ್ಲಿ ತೊಡಗಿಕೊಂಡಿದ್ದೇನೆ. ಕೃಷ್ಣಾ ನದಿಯಲ್ಲಿ ನೀರಿಲ್ಲ. ಮಹಾರಾಷ್ಟ್ರದಿಂದ ನೀರು ಬಿಡಿಸುವ ಸಲುವಾಗಿ ಕಡತ ತೆಗೆದುಕೊಂಡು ಬಂದಿದ್ದೆ.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಎಲ್ಲರಂತೆ ರಮೇಶ್ ಜಾರಕಿಹೊಳಿಯನ್ನು ಭೇಟಿಯಾಗಿರಬಹುದು. ಅದಕ್ಕೂ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ರಮೇಶ್ ಜಾರಕಿಹೊಳಿಯವರು ರಾಜೀನಾಮೆ ನೀಡುವ ವಿಚಾರದ ಬಗ್ಗೆ ಅವರನ್ನೇ ಕೇಳಿ. ಅವರೂ ಪಕ್ಷ ಬಿಟ್ಟು ಹೋಗುವುದಿಲ್ಲ. ನಾವೂ ಪಕ್ಷ ಬಿಡುವುದಿಲ್ಲ. ಎಲ್ಲರ ನಿರ್ಧಾರ ಒಂದೇ ಆಗಿದೆ’ ಎಂದು ಸಮಜಾಯಿಷಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.